Rakesh Adiga is an actor who has accompanied the Dog

ಗುಂಡನ ಜೊತೆಯಾದ ನಟ ರಾಕೇಶ್ ಅಡಿಗ


ಗುಂಡನ ಜೊತೆಯಾದ ನಟ ರಾಕೇಶ್ ಅಡಿಗ

‘ನಾನು ಮತ್ತು ಗುಂಡ’ ಚಿತ್ರದ ಸೀಕ್ವೇಲ್ ನಲ್ಲಿ ನಾಯಕ ಯಾರಾಗಿರಬಹುದು ಎಂಬ ಕುತೂಹಲಕ್ಕೆ ಇದೀಗ ತೆರೆಬಿದ್ದಿದೆ. ನಟ ರಾಕೇಶ್ ಅಡಿಗ ಅವರು ಈ ಭಾಗದಲ್ಲಿ ನಾಯಕನಾಗಿ ನಟಿಸಿದ್ದಾರೆ.

ಈ ಚಿತ್ರಕ್ಕೆ ರಘುಹಾಸನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಾನು ಮತ್ತು ಗುಂಡ ಚಿತ್ರದ ಮುಂದುವರೆದ ಭಾಗವಾಗಿ “ನಾನು ಮತ್ತು ಗುಂಡ -2” ತಯಾರಾಗುತ್ತಿದ್ದು, ಚಿತ್ರದಲ್ಲಿ ಬಹುತೇಕ ಹಳೆಯ ತಂಡವೇ ಕೆಲಸ ಮಾಡುತ್ತಿದೆ. ಮೊದಲ ಭಾಗದಲ್ಲಿ ಮರಣ ಹೊಂದಿದ್ದ ಮಾಲೀಕನಿಗೆ ಇಲ್ಲಿ ಪುನರ್ಜನ್ಮವಾಗಿರುತ್ತದೆ.

ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ. ಸಿನಿಮಾ ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಸಹ ರಘು ಹಾಸನ್ ಅವರೇ ಹೊತ್ತಿದ್ದಾರೆ. ಗೋವಿಂದೇಗೌಡ ಹಾಗೂ ನಾಯಿಯ ಪಾತ್ರದ ಮೂಲಕ ಚಿತ್ರಕಥೆ ಮುಂದುವರೆಯಲಿದೆ. ಸೋಷಿಯಲ್ ಕನ್ ಸರ್ನ್ ಜೊತೆಗೆ ಡಿವೈನ್ ಕಂಟೆಂಟ್ ಕೂಡ ಈ ಚಿತ್ರದಲ್ಲಿದೆ. ಚಿತ್ರದಸಂಭಾಷಣೆ ಹಾಗೂ ಸಾಹಿತ್ಯವನ್ನು ರೋಹಿತ್ ರಮನ್ ರಚಿಸಿದ್ದಾರೆ. ಈ ಚಿತ್ರಕ್ಕಿದೆ.

ಪೆÇಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ನಾನು ಮತ್ತು ಗುಂಡ-2 ಚಿತ್ರಕ್ಕೆ ಆರ್.ಪಿ.ಪಟ್ನಾಯಕ್ ಅವರ ಸಂಗೀತ, ರುತ್ವಿಕ್ ಮುರಳೀಧರ್ ಅವರ ಹಿನ್ನೆಲೆ ಸಂಗೀತ, ತನ್ವಿಕ್ ಅವರ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಅವರ ಸಂಕಲನ, ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ರಾಘು ಅವರ ನೃತ್ಯನಿರ್ದೇಶನವಿದೆ.



Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin

Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581