"Rangitaranga" celebrates its 10th anniversary; re-release on July 4th

“ರಂಗಿತರಂಗ” ಚಿತ್ರಕ್ಕೆ ದಶಕದ ಸಂಭ್ರಮ; ಜುಲೈ 4 ರಂದು ಮರು ಬಿಡುಗಡೆ - CineNewsKannada.com

“ರಂಗಿತರಂಗ” ಚಿತ್ರಕ್ಕೆ ದಶಕದ ಸಂಭ್ರಮ; ಜುಲೈ 4 ರಂದು ಮರು ಬಿಡುಗಡೆ

2015ರ ಜುಲೈ 3 ರಂದು ತೆರೆಕಂಡು, ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಎಚ್.ಕೆ. ಪ್ರಕಾಶ್ ನಿರ್ಮಾಣದ, ಅನೂಪ್ ಭಂಡಾರಿ ನಿರ್ದೇಶನದ ‘ರಂಗಿತರಂಗ’ ಹತ್ತು ವರ್ಷಗಳ ನಂತರ ಮತ್ತೆ ತೆರೆಗೆ ಬರಲು ಸಜ್ಜಾಗಿದೆ.

ನಿರ್ದೇಶಕ ಅನೂಪ್ ಭಂಡಾರಿ ಮಾತನಾಡಿ “ವಿದೇಶದಲ್ಲಿ ಒಳ್ಳೆಯ ಉದ್ಯೋಗದಲ್ಲಿದ್ದ ನಾನು ಹಾಲಿವುಡ್ ಸ್ಟಾರ್ ರಸೆಲ್ ಹಾರ್ವರ್ಡ್ ಅವರೊಂದಿಗೆ ಅಂತರರಾಷ್ಟ್ರೀಯ ಕಿರುಚಿತ್ರ ಮಾಡಿದ್ದೆ. ‘ರಂಗಿತರಂಗ’ದ ಪ್ರೀ-ಪೆÇ್ರಡಕ್ಷನ್ ಕಾರ್ಯದಲ್ಲಿರುವಾಗ, ಚಿತ್ರ ಮಾಡಬೇಕೆಂದು ಎಚ್.ಕೆ. ಪ್ರಕಾಶ್ ಆಸೆಯನ್ನು ನೋಡಿ ಉತ್ಸಾಹಕ್ಕೆ ಕೈಜೋಡಿಸಿದೆ. ಸಾಯಿಕುಮಾರ್ ಅವರನ್ನು ಹೊರತುಪಡಿಸಿ, ಬಹುತೇಕ ಎಲ್ಲ ಕಲಾವಿದರು ಹೊಸಬರಾಗಿದ್ದರು. ನಿರೂಪ್ ಭಂಡಾರಿ, ರಾಧಿಕಾ ಚೇತನ್, ಅವಂತಿಕಾ ಶೆಟ್ಟಿ, ಅರವಿಂದ್ ಎಲ್ಲರ ಸಂಘಟಿತ ಶ್ರಮವೇ ಚಿತ್ರ ಉತ್ತಮವಾಗಿ ಮೂಡಿಬರಲು ಕಾರಣ. ಛಾಯಾಗ್ರಾಹಕ ವಿಲಿಯಂ ಡೇವಿಡ್ ನನ್ನ ಕಲ್ಪನೆಗೆ ಸೂಕ್ತ ದೃಶ್ಯಗಳನ್ನು ಸಂಯೋಜಿಸಿ ಯಶಸ್ಸಿಗೆ ಕಾರಣ ಎನ್ನುವ ಮಾಹಿತಿ ಹಂಚಿಕೊಂಡರು.

2015ರ ಜುಲೈ 3ರಂದು ಚಿತ್ರ ಬಿಡುಗಡೆಯಾದಾಗ, ಕಪಾಲಿ ಚಿತ್ರಮಂದಿರದಲ್ಲಿ ಚಿತ್ರ ನೋಡಿ ಬಂದ ಕೆಲವರು ನಮ್ಮ ನಿರ್ಮಾಪಕರಿಗೆ ‘ನಿಮಗೆ ಪೋಸ್ಟರ್ ಖರ್ಚು ಕೂಡ ಬರುವುದಿಲ್ಲ’ ಎಂದು ಹೆದರಿಸಿದ್ದರು. ಆದರೆ, ನಮ್ಮ ನಿರ್ಮಾಪಕರಿಗೆ ಚಿತ್ರ ಗೆಲ್ಲುತ್ತದೆ ಎಂಬ ಬಲವಾದ ನಂಬಿಕೆ ಇತ್ತು, ಅದು ಸುಳ್ಳಾಗಲಿಲ್ಲ. ಜನ ನಮ್ಮ ಕೈ ಹಿಡಿದರು. ‘ಬಾಹುಬಲಿ’, ‘ಬಜರಂಗಿ ಭಾಯಿಜಾನ್’, ‘ಶ್ರೀಮಂತುಡು’ ನಂತಹ ದೊಡ್ಡ ಚಿತ್ರಗಳ ಜೊತೆ ಬಿಡುಗಡೆಯಾದರೂ ನಮ್ಮ ಕನ್ನಡ ಚಿತ್ರ ಸೂಪರ್ ಹಿಟ್ ಆಯಿತು. ‘ರಂಗಿತರಂಗ’ದ ಮೂಲಕ ಅಮೆರಿಕದಲ್ಲಿ ಕನ್ನಡಕ್ಕೆ ಒಂದು ಹೊಸ ಮಾರುಕಟ್ಟೆ ಸೃಷ್ಟಿಯಾಯಿತು. ಆ ವರ್ಷದ ಬಹುಪಾಲು ಪ್ರಶಸ್ತಿಗಳನ್ನು ಬಾಚಿಕೊಂಡ ‘ರಂಗಿತರಂಗ’ ಈ ಜುಲೈ 4 ರಂದು ಮರು-ಬಿಡುಗಡೆಯಾಗುತ್ತಿದೆ ವಿಶ್ವಾಸ ವ್ಯಕ್ತಪಡಿಸಿದರು

ನಿರ್ಮಾಪಕ ಎಚ್.ಕೆ. ಪ್ರಕಾಶ್ ಮಾತನಾಡಿ, ನಿರೂಪ್ ನಟಿಸಿದ್ದ ಟೆಲಿಫಿಲಂ ನೋಡಿ ಮೆಚ್ಚಿಕೊಂಡಿದ್ದೆ. ಅವರೊಂದಿಗೆ ಸಿನಿಮಾ ಮಾಡಬೇಕೆಂದು ನಿರೂಪ್ ತಂದೆ ಸುಧಾಕರ್ ಭಂಡಾರಿ ಅವರನ್ನು ಸಂಪರ್ಕಿಸಿದಾಗ, ಅನೂಪ್ ಭಂಡಾರಿ ನಿರ್ದೇಶನದ ಸಿನಿಮಾದ ಪ್ರೀ- ಪ್ರೊಡಕ್ಷನ್ಸ್ ನಲ್ಲಿ ತೊಡಗಿಸಿಕೊಂಡಿದ್ದರು. ಅನೂಪ್ ಅವರ ಬಳಿ ಕಥೆ ಕೇಳಿದೆ. ಹಾಡುಗಳನ್ನು ಕೇಳಿದ ಕೂಡಲೇ ಈ ಸಿನಿಮಾ ಮಾಡಬೇಕು ಎಂದು ತೀರ್ಮಾನಿಸಿದೆ. ಆ ಚಿತ್ರವೇ ‘ರಂಗಿತರಂಗ’. ಯಶಸ್ಸಿನ ಉತ್ತುಂಗಕ್ಕೇರಿ ಈಗ 10ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಈ ಚಿತ್ರದಿಂದಾಗಿ, ಹತ್ತು ವರ್ಷಗಳ ನಂತರವೂ ನನ್ನನ್ನು ‘ರಂಗಿತರಂಗ’ ಪ್ರಕಾಶ್ ಎಂದೇ ಗುರುತಿಸುತ್ತಾರೆ. ನಿಮ್ಮೆಲ್ಲರ ಪೆÇ್ರೀತ್ಸಾಹದೊಂದಿಗೆ, 2025ರ ಜುಲೈ 4 ರಂದು ‘ರಂಗಿತರಂಗ’ ಚಿತ್ರವನ್ನು ಮರು-ಬಿಡುಗಡೆ ಮಾಡುತ್ತಿದ್ದೇವೆ,” ಎಂದು ಹೇಳಿದರು.

ಪೊಲೀಸ್ ಸ್ಟೋರಿ ಮತ್ತು “ರಂಗಿತರಂಗ” : “ನನ್ನ ಎರಡು ಕಣ್ಣುಗಳು!”

ಹಿರಿಯ ನಟ ಸಾಯಿಕುಮಾರ್ ಮಾತನಾಡಿ “ಪೊಲೀಸ್ ಸ್ಟೋರಿ ಮತ್ತು “ರಂಗಿತರಂಗ” ಎರಡು ಚಿತ್ರಗಳು ನನ್ನ ಎರಡು ಕಣ್ಣುಗಳು. ಇಂತಹ ಕನ್ನಡ ಚಿತ್ರಗಳಲ್ಲಿ ನಟಿಸಿದ್ದು ಬಹಳ ಖುಷಿಯಾಗಿದೆ. ಈಗಲೂ ನಾನು ಹೋದ ಕಡೆ ‘ರಂಗಿತರಂಗ’ದ ನನ್ನ ಪಾತ್ರಕ್ಕೆ ಜನ ಮೆಚ್ಚುಗೆ ಸೂಚಿಸುತ್ತಾರೆ. ಚಿತ್ರ ಮರು-ಬಿಡುಗಡೆಯಲ್ಲೂ ದಾಖಲೆ ಬರೆಯಲಿ” ಎಂದು ಹೇಳಿದ್ದಾರೆ.

ನಾಯಕ ನಿರೂಪ್ ಭಂಡಾರಿ ಮಾತನಾಡಿ ಐಟಿ ಉದ್ಯೋಗಿಯಾಗಿದ್ದರೂ ಸಿನಿಮಾ ಮೇಲೆ ಹೆಚ್ಚು ಆಸಕ್ತಿ ಹೊಂದಿದ್ದೆ. ರತನ್ ಠಾಕೂರ್ ಗ್ರಾಂಟ್ ನಟನಾ ಶಾಲೆಯಲ್ಲಿ ನಟನೆ ಅಭ್ಯಾಸ ಮಾಡಿದೆ. ಅಣ್ಣನ ನಿರ್ದೇಶನದ ಕಿರುಚಿತ್ರಗಳಿಗೆ ನಾನೇ ಹೀರೋ. ಬೆಳ್ಳಿತೆರೆಯ ಮೇಲೆ ಅನೂಪ್ ನಿರ್ದೇಶನದ ಮೊದಲ ಚಿತ್ರಕ್ಕೂ ನಾನೇ ನಾಯಕ ಎಂದು ತಿಳಿದಾಗ ಆದ ಖುಷಿ ಅಷ್ಟಿಷ್ಟಲ್ಲ. ಮೊದಲ ದೃಶ್ಯದಲ್ಲೇ ನಾನು ಸಾಯಿಕುಮಾರ್ ಅವರೊಂದಿಗೆ ಫೈಟ್ ಮಾಡಬೇಕಿತ್ತು. ಆಗ ನನಗಾದ ಭಯ ಈಗಲೂ ಕಣ್ಣ ಮುಂದೆ ಇದೆ. ಅಮೆರಿಕಾಗೆ ಹೋದಾಗ ಅಲ್ಲಿ ನಮ್ಮ ಚಿತ್ರವನ್ನು ನೋಡಲು ಬಂದಿದ್ದ ಜನಸಾಗರ ಕಂಡು ಬಹಳ ಖುಷಿಪಟ್ಟಿದ್ದೆ. ಇಂತಹ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕನಾದ ಅಣ್ಣನಿಗೆ ಧನ್ಯವಾದಗಳು,” ಎಂದು ನಾಯಕ ನಿರೂಪ್ ಭಂಡಾರಿ ತಮ್ಮ ಅನುಭವ ಹಂಚಿಕೊಂಡರು.

ರಂಗಿತರಂಗ’ ಮೂಲಕವೇ ಗುರುತಿಸುತ್ತಾರೆ : ನಾಯಕಿ ರಾಧಿಕಾ ನಾರಾಯಣ್

ಐಟಿ ಉದ್ಯೋಗಿ. ಅನೂಪ್ ಈ ಚಿತ್ರದ ಕಥೆ ಹೇಳಿದಾಗ ನಟಿಸಲು ಬಹಳ ಇಷ್ಟವಾಯಿತು. ಚಿತ್ರ ಬಿಡುಗಡೆಯಾಗಿ ಹತ್ತು ವರ್ಷಗಳಾಗಿದೆ. ಆ ನಂತರ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದರೂ, ಈಗಲೂ ನನ್ನನ್ನು ‘ರಂಗಿತರಂಗ’ದ ಮೂಲಕವೇ ಗುರುತಿಸುತ್ತಾರೆ,” ಎಂದು ನಾಯಕಿ ರಾಧಿಕಾ ನಾರಾಯಣ್ ತಿಳಿಸಿದ್ದಾರೆ

ಪೊಲೀಸ್ ಅಧಿಕಾರಿ ಪಾತ್ರ ನಿರ್ವಹಿಸಿದ್ದ ಅರವಿಂದ್ ತಮ್ಮ ಅನುಭವ ಹಂಚಿಕೊಂಡರು. ಛಾಯಾಗ್ರಾಹಕ ವಿಲಿಯಂ ಡೇವಿಡ್ ಛಾಯಾಗ್ರಹಣದ ಬಗ್ಗೆ ಮಾತನಾಡಿದರು.

ಕಾರ್ಯಕಾರಿ ನಿರ್ಮಾಪಕ ಸುಧಾಕರ್ ಭಂಡಾರಿ ‘ರಂಗಿತರಂಗ’ ಆರಂಭವಾದಾಗಿನಿಂದ ಬಿಡುಗಡೆಯಾಗುವವರೆಗೂ ನಡೆದ ಸ್ವಾರಸ್ಯಕರ ಘಟನೆಗಳ ಕುರಿತು ಮಾಹಿತಿ ನೀಡಿದರು. ವಿತರಕ ಹೇಮಂತ್ ಹಾಜರಿದ್ದರು

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin