Rebel Star Ambarish's 71st Birthday: Fans flock

ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ 71 ನೇ ಹುಟ್ಟುಹಬ್ಬ: ಅಭಿಮಾನಿಗಳ ಜನಸಾಗರ - CineNewsKannada.com

ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ 71 ನೇ ಹುಟ್ಟುಹಬ್ಬ: ಅಭಿಮಾನಿಗಳ ಜನಸಾಗರ

ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ 71 ನೇ ಹುಟ್ಟುಹಬ್ಬ: ಅಭಿಮಾನಿಗಳ ಜನಸಾಗರ. ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ( ಮೇ.29) 71ನೇ ಹುಟ್ಟು ಹಬ್ಬದ ಸಂಭ್ರಮ.

ಕನ್ನಡ ಚಿತ್ರರಂಗದಲ್ಲಿ ರೆಬೆಲ್ ಸ್ಟಾರ್ ಎಂದೇ ಗುರುತಿಸಿಕೊಂಡಿದ್ದ ಕಲಿಯುಗದ ಕರ್ಣ ಅಂಬರೀಶ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಸಮಾಧಿ ಸ್ಥಳಕ್ಕೆ ಅಭಿಮಾನಿಗಳ ಜನಸಾಗರವೇ ಹರಿದು ಬಂದು ತಮ್ಮ ನೆಚ್ಚಿನ ನಟನಿಗೆ ಹುಟ್ಟು ಹಬ್ಬದ ಶುಭ ಕೋರಿದ್ದಾರೆ.

ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ( ಮೇ.29) 71ನೇ ಹುಟ್ಟು ಹಬ್ಬದ ಸಂಭ್ರಮ. ಅಂಬರೀಶ್ ದೈಹಿಕವಾಗಿ ಇಲ್ಲದಿದ್ದರೂ ಅವರು ತಾವು ಮಾಡಿದ ಕೆಲಸಗಳ ಮೂಲಕ ಅಭಿಮಾನಿಗಳ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅಭಿಮಾನಿಗಳು ತಮ್ಮ ಹುಟ್ಟುಹಬ್ಬಕ್ಕಿಂತ ಮಿಗಿಲಾಗಿ ಆಚರಿಸಿ ಸಂಭ್ರಮಿಸಿದ್ದಾರೆ.

ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಸಮಾಧಿಗೆ ಅಭಿಮಾನಿಗಳು ಕುಟುಂಬದ ಸದಸ್ಯರು ಮತ್ತು ಆಪ್ತರು ಪೂಜೆ ಸಲ್ಲಿಸುವ ಮೂಲಕ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ.

ಅಂಬರೀಶ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರು ಇಷ್ಟಪಡುತ್ತಿದ್ದ ತಿಂಡಿ ತಿನಿಸುಗಳನ್ನ ಸಮಾಧಿ ಮುಂದೆ ಇಟ್ಟು ಪತ್ನಿ ಸುಮಲತಾ ಆಪ್ತರಾದ ರಾಕ್ ಲೈನ್ ವೆಂಕಟೇಶ್ ಮತ್ತು ದೊಡ್ಡಣ್ಣ ಸೇರಿದಂತೆ ಹಲವು ಮಂದಿ ಸಮಾಧಿಗೆ ಪೂಜೆ ಸಲ್ಲಿಸಿ ಅಲ್ಲಿಯೇ ಕೆ ಕತ್ತರಿಸಿ ಹುಟ್ಟು ಹಬ್ಬದ ಶುಭ ಹಾರೈಸಿದ್ದಾರೆ

ಪ್ರತಿ ಬಾರಿ ಹುಟ್ಟು ಹಬ್ಬಕ್ಕೆ ಅಂಬರೀಶ್ ಅವರು ತಮ್ಮ ಅಭಿಮಾನಿಗಳಿಗಾಗಿಯೇ ಹುಟ್ಟು ಹಬ್ಬದ ದಿನವನ್ನು ಮೀಸಲಿಡುತ್ತಿದ್ದರು. ಮಂಡ್ಯ ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುತ್ತಿದ್ದ ಅಭಿಮಾನಿಗಳು ಹುಟ್ಟು ಹಬ್ಬದ ದಿನ ತಮ್ಮ ನೆಚ್ಚಿನ ನಾಯಕ ನಟನಿಗೆ ಶುಭ ಕೋರಿ ಅರಸುತಿದ್ದರು.

ಆದರೆ ಕಳೆದ ನಾಲ್ಕೈದು ವರ್ಷಗಳಿಂದ ಅಭಿಮಾನಿಗಳಿಗೆ ಈ ರೀತಿಯ ಅವಕಾಶ ಕಳೆದುಹೋಗಿದೆ ಆದರೂ ತಮ್ಮ ನೆಚ್ಚಿನ ನಟನನ್ನು ಆರಾಧಿಸುವ ಪ್ರೀತಿಸುವುದನ್ನು ಮಾತ್ರ ನಿಲ್ಲಿಸಿಲ್ಲ ತಮ್ಮ ಹೃದಯದಲ್ಲಿ ಅಂಬರೀಶ್ ಅವರನ್ನು ಇಟ್ಟುಕೊಂಡು ಪೂಜಿಸುವ ಅಭಿಮಾನಗಳು ಎಂದಿಗೂ ಇದ್ದಾರೆ ಎನ್ನುವುದು ಅಂಬರೀಶ್ ಅವರ ಜನಪ್ರಿಯತೆಗೆ ಇದು ಸಾಕ್ಷಿಯಾಗಿದೆ.

ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಸಮಾಧಿ ಆವರಣದಲ್ಲಿ ಅಂಬರೀಶ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅನ್ನದಾನ ಶಿಬಿರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶುಭ ಹಾರೈಸಲಾಗಿದೆ

ಪೂರ್ತಿಯಾಗಿ ಓದಿ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin