Release of Chandanavanada chilumegalu unique record of 90 films in Kannada / Landmarks of Sandalwood

90 ಚಿತ್ರಗಳ ವಿಶಿಷ್ಠ ದಾಖಲೆಯ “ಚಂದನವನದ ಚಿಲುಮೆಗಳು” ಪುಸ್ತಕ ಬಿಡುಗಡೆ - CineNewsKannada.com

90 ಚಿತ್ರಗಳ ವಿಶಿಷ್ಠ ದಾಖಲೆಯ “ಚಂದನವನದ ಚಿಲುಮೆಗಳು” ಪುಸ್ತಕ ಬಿಡುಗಡೆ

ಕನ್ನಡ ಚಲನಚಿತ್ರರಂಗ 90 ವರ್ಷ ತುಂಬಿರುವ ಸಂದರ್ಭದಲ್ಲಿ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅಪರೂಪದ ಕಾಫಿ ಟೇಬಲ್ ಪುಸ್ತಕ ಚಂದನವನದ ಚಿಲುಮೆಗಳು / Landmarks of Sandalwood ಅನ್ನು ಹೊರತಂದಿದೆ.

ಹಿರಿಯ ಸಿನಿಮಾ ಪತ್ರಕರ್ತರಾದ ಡಾ. ಶರಣು ಹುಲ್ಲೂರು ಮತ್ತು ಎಸ್. ಶಾಮ್ ಪ್ರಸಾದ್ ಅವರ ಪ್ರಯತ್ನದ ಫಲ ಇದು. ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಹೊರತಂದಿರುವ ಪುಸ್ತಕಗಳನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್, ಟಿ.ಎಸ್.ನಾಗಾಭರಣ, ನಟ ಶ್ರೀಮುರುಳಿ ಮತ್ತು ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಬಿಡುಗಡೆ ಮಾಡಿದರು.

ಚಂದನವನದ ಚಿಲುಮೆಗಳು / Landmarks of Sandalwood ಪುಸ್ತಕವನ್ನು ಕನ್ನಡದಲ್ಲಿ ಡಾ.ಶರಣು ಹುಲ್ಲೂರು, ಇಂಗ್ಲಿಷ್‍ನಲ್ಲಿ ಎಸ್. ಶ್ಯಾಮ್ ಪ್ರಸಾದ್ ಬರೆದಿದ್ದಾರೆ. ಕನ್ನಡ ಚಿತ್ರರಂಗಕ್ಕೆ ತಿರುವು ನೀಡಿದ 90 ಚಿತ್ರಗಳ ವಿಶೇಷ ದಾಖಲೆ ಮತ್ತು ಅಪರೂಪದ ಫೆÇೀಟೋಗಳನ್ನು ಈ ಪುಸ್ತಕ ಒಳಗೊಂಡಿದೆ. ಕನ್ನಡ ಸಿನಿಮಾ ರಂಗದ ಕುರಿತು ದ್ವಿಭಾಷೆಯಲ್ಲಿ ಬಂದ ಕನ್ನಡದ ಮೊದಲ ಕಾಫಿ ಟೇಬಲ್ ಪುಸ್ತಕ ಇದಾಗಿದೆ.

ಈ ವೇಳೆ ಮಾತನಾಡಿದ ನಾದಬ್ರಹ್ಮ ಹಂಸಲೇಖ ಅವರು ಪತ್ರಕರ್ತರು ಹಾಗೂ ಲೇಖಕರೂ ಆಗಿರುವ ಡಾ. ಶರಣು ಹುಲ್ಲೂರು ಮತ್ತು ಎಸ್. ಶ್ಯಾಮ್ ಪ್ರಸಾದ್ ಜೊತೆಯಾಗಿ ಆರೇಳು ತಿಂಗಳ ಕಾಲ ಈ ಪುಸ್ತಕ ಹೊರತರಲು ಶ್ರಮಿಸಿದ್ದನ್ನು ಹಂಸಲೇಖ ಮುಕ್ತ ಕಂಠದಿಂದ ಹೊಗಳಿ ಇಂತಹ ದಾಖಲೆಗಳು ಹೆಚ್ಚಾಗಲಿ ಎಂದು ಶುಭ ಹಾರೈಸಿದರು

ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮಾತನಾಡಿ ಪುಸ್ತಕ ರೂಪದಲ್ಲಿ ಸಿನಿಮಾ ಕುರಿತಾದ ವಿಷಯಗಳು ಕನ್ನಡದಲ್ಲಿ ವಿರಳ, ದಾಖಲೀಕರವೂ ಇಲ್ಲ. ಅದು ಕನ್ನಡದಲ್ಲಿ ಆಗಲಿ ಎಂದರು

ಹಿರಿಯ ನಿರ್ದೇಶಕ ಟಿ.ಎಸ್ ನಾಗಾಭರಣ, ಸಿನಿಮಾ ಪಠ್ಯಗಳ ಜರೂರತ್ತು ಇಂದಿನ ದಿನವಿದೆ. ಅದು ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಮೂಲಕ ಆಗಿರುವುದು ಅಭಿನಂದನೆ ಸಲ್ಲಿಸಲೇಬೇಕಾದ ಕೆಲಸ. ಪುಸ್ತಕ ಎಲ್ಲರ ಮನೆಯಲ್ಲೂ ಇರಲಿ ಅಂದರು

ಚಲನಚಿತ್ರ ಪತ್ರಕರ್ತರ ಮತ್ತು ಸಿನಿಮಾ ರಂಗದ ನಂಟಿನ ಕುರಿತಾಗಿ ಶ್ರೀಮುರುಳಿ ಮಾತನಾಡಿ, ಗಾನಯೋಗಿ ಪಂಚಾಕ್ಷರಿ ಗವಾಯಿ ಸಿನಿಮಾದ ಗೀತೆ ಹಾಡಿ ರಂಜಿಸಿದರು.

ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಮಾತನಾಡಿ ಡಾ.ರಾಜಕುಮಾರ ಅಪಹರಣ ಸೇರಿದಂತೆ ತಮ್ಮ ಬಾಲ್ಯದ ಸಿನಿಮಾ ಕುರಿತಾಗಿ ಮಾಹಿತಿ ಹಂಚಿಕೊಂಡರು

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin