ಹಿರಿಯ ನಟ ಶಿವಣ್ಣ ಅವರನ್ನು ಭೇಟಿ ಮಾಡಿದ ರಾಕಿಂಗ್ ಸ್ಟಾರ್ ಯಶ್
ರಾಕಿ ಮೀಟ್ಸ್ ದೇವ… ಹೌದು.ಬಹಳದಿನಗಳ ನಂತರ ಅಪರೂಪದ ಸಂಗಮ..ಇಂತಹದೊಂದು ಸಮಾಗಮಕ್ಕೆ ಕನ್ನಡದ ಇಬ್ಬರು ತಾರಾ ನಟರ ಭೇಟಿ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚುವಂತೆ ಮಾಡಿದೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರ ಸೆಟ್ಟೇರಿದ್ದು ಚಿತ್ರೀಕರಣ ನಡೆಯುತ್ತಿದೆ. ಈ ನಡುವೆ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರನ್ನು ಸಪ್ರೈಸ್ ಆಗಿ ನಟ ಯಶ್ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಅಭಿಮಾನಿಗಳಲ್ಲಿ ರೋಮಾಂಚನ ಉಂಟು ಮಾಡಿದೆ.
ಬೆಂಗಳೂರಿನ ಎಚ್. ಎಂಟಿ ಮೈದಾನದಲ್ಲಿ ನಡೆಯುತ್ತಿರುವ ಶಿವಣ್ಣ ಅವರ 131 ನೇ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಶಿವಣ್ಣ ಅವರನ್ನು ಯಶ್ ಮಾಡಿ ಮಾಡುತ್ತಿದ್ದಂತೆ ಶಿವಣ್ಣ ಅವರು ಯಶ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಆಲಿಂಗಿಸಿದರು..
ಶಿವಣ್ಣ ಶೂಟಿಂಗ್ ಸೆಟ್ ನಲ್ಲಿ ರಾಕಿಂಗ್ ಸ್ಟಾರ್ ಪ್ರತ್ಯಕ್ಷರಾಗಿದ್ದುದ್ದು ಚಿತ್ರತಂಡಕ್ಕೆ ಸಹಜವಾಗಿ ಸಪ್ರೈಸ್ ಆಗಿತ್ತು. ಚಿತ್ರೀಕರಣದಲ್ಲಿ ವಿಭಿನ್ನ. ಗೆಟಪ್ ನಲ್ಲಿ ಇದ್ದ ಶಿವಣ್ಣ ಅವರನ್ನು ಯಶ್ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಇತ್ತೀಚೆಗಷ್ಟೇ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆಜಿಎಫ್ – 2 ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಬಂದಿದೆ. ಈ ಹಿನ್ನೆಲೆಯಲ್ಲಿ ಶಿವಣ್ಣ ಅವರು ನಟ ಯಶ್ ಅವರನ್ನು ಅಭಿನಂಧಿಸಿದ್ದಾರೆ.
ಶಿವಣ್ಣನ 131ನೇ ಚಿತ್ರಕ್ಕೆ ಕಾರ್ತಿಕ್ ಅದ್ವೈತ್ ಹೇಳುತ್ತಿದ್ದಾರೆ. ತಮಿಳು ಚಿತ್ರವೊಂದನ್ನು ನಿರ್ಮಿಸಿರುವ ಅವರೀಗ ಈ ಸಿನಿಮಾ ಮೂಲಕ ಸ್ಯಾಂಡಲ್ವುಡ್ ಅಂಗಳಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಶಿವಣ್ಣನ 131ನೇ ಚಿತ್ರ ಆ್ಯಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿದ್ದು, ಶಿವಣ್ಣ ಡಿಫ್ರೆಂಟ್ ಲುಕ್ನಲ್ಲಿ, ವಿಭಿನ್ನ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರೆ.
ಘೋಸ್ಟ್ ಖ್ಯಾತಿಯ ವಿಎಂ ಪ್ರಸನ್ನ ಹಾಗೂ ಸೀತಾರಾಮಂ ಖ್ಯಾತಿಯ ಜಯಕೃಷ್ಣ ಬರಹಗಾರರಾಗಿ ಸಾಥ್ ಕೊಡುತ್ತಿದ್ದಾರೆ. ವಿಕ್ರಂ ವೇದ, ಆರ್ ಡಿ ಎಕ್ಸ್, ಖೈದಿ ಸಿನಿಮಾ ಖ್ಯಾತಿಯ ಸ್ಯಾಮ್ ಸಿ.ಎಸ್ ಸಂಗೀತ ಒದಗಿಸಲಿದ್ದಾರೆ. ಎ.ಜೆ ಶೆಟ್ಟಿ ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ದೀಪು ಎಸ್ ಕುಮಾರ್ ಅವರ ಸಂಕಲನ ಹಾಗೂ ರವಿ ಸಂತೆಹಕ್ಲು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ. ಭುವನೇಶ್ವರಿ ಪ್ರೊಡಕ್ಷನ್ ನಡಿ ಎಸ್ ಎನ್ ರೆಡ್ಡಿ ಹಾಗೂ ಸುಧೀರ್ ಪಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದು, ಸಹ ನಿರ್ಮಾಪಕರಾಗಿ ಸುಮನ್ ಬಿ, ರಮಣ ರೆಡ್ಡಿ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ.