"Rudra Garuda Purana" enchanting song release

“ರುದ್ರ ಗರುಡ ಪುರಾಣ” ಮನಮೋಹಕ ಹಾಡು ಬಿಡುಗಡೆ - CineNewsKannada.com

“ರುದ್ರ ಗರುಡ ಪುರಾಣ” ಮನಮೋಹಕ ಹಾಡು ಬಿಡುಗಡೆ

ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ, `ರುದ್ರ ಗರುಡ ಪುರಾಣ’ ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದಿರುವ “ಅದೇನೇನೋ ಖುಷಿ ತಂದೆ, ಅದೇನೇನೋ ನಶೇ ತಂದೆ” ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ

ಈಗಾಗಲೇ ಚಿತ್ರದ ಟೀಸರ್ ಮೂಲಕ ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದ್ದು ಪ್ರತಿಭಾಮ್ವಿತ ನಟ ರಿಷಿ ನಾಯಕನಾಗಿ ನಟಿಸಿದ್ದಾರೆ. ಕೃಷ್ಣಪ್ರಸಾದ್ ಸಂಗೀತ ನೀಡಿರುವ ಹಾಡನ್ನು ತಮ್ಮ ಅಮೋಘ ಗಾಯನದ ಮೂಲಕ ಹೆಸರಾಗಿರುವ ಸಂಜಿತ್ ಹೆಗ್ಡೆ ಹಾಗೂ ದೀಪಿಕಾ ವರದರಾಜನ್ ಹಾಡಿದ್ದಾರೆ.

ಮಿಸ್ಟ್ರಿ ಥ್ರಿಲ್ಲರ್ ಕಥಾಹಂದರ ಹೊಂದಿರುವ “ರುದ್ರ ಗರುಡ ಪುರಾಣ”ದಲ್ಲಿ ಪ್ರೇಮ ಕಥೆಯೂ ಇದೆ.ಈಗಾಗಲೇ ಹಾಡುಗಳು ಹಾಗೂ ಟೀಸರ್ ಮೂಲಕ ಮೆಚ್ಚುಗೆ ಪಡೆದುಕೊಂಡಿರುವ ಚಿತ್ರ ಜನವರಿ 24ರಂದು ತೆರೆಕಾಣಲಿದೆ.
.
ಹೆಸರಾಂತ ನಿರ್ದೇಶಕ ಜೇಕಬ್ ವರ್ಗೀಸ್ ಬಳಿ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿರುವ ನಂದೀಶ್ ನಿರ್ದೇಶನದ ಎರಡನೇ ಚಿತ್ರ `ರುದ್ರ ಗರುಡ ಪುರಾಣ. ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ವಿಜಯ್ ಲೋಹಿತ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕ ನಟಿಸಿದ್ದಾರೆ. ವಿನೋದ್ ಆಳ್ವಾ, ಅವಿನಾಶ್, ಶಿವರಾಜ್ ಕೆ.ಆರ್ ಪೇಟೆ, ಗಿರೀಶ್ ಶಿವಣ್ಣ ಮುಂತಾದವರು ಪ್ರಮುಖ ತಾರಾಬಳಗದಲ್ಲಿದ್ದಾರೆ. ಸಂದೀಪ್ ಕುಮಾರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ ಹಾಗೂ ಕೃಷ್ಣ ಪ್ರಸಾದ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin