Sandalwood Salaga' 'Duniya' Vijay is all set for his nephew's maiden film Sidlingu-2

ಬಾಮೈದನ ಸಿದ್ಲಿಂಗು-2 ಚಿತ್ರಕ್ಕೆ ಮನಸಾರೆ ಹರಿಸಿದ ಸ್ಯಾಂಡಲ್‍ವುಡ್ ಸಲಗ’ದುನಿಯಾ’ ವಿಜಯ್ - CineNewsKannada.com

ಬಾಮೈದನ ಸಿದ್ಲಿಂಗು-2 ಚಿತ್ರಕ್ಕೆ ಮನಸಾರೆ ಹರಿಸಿದ ಸ್ಯಾಂಡಲ್‍ವುಡ್ ಸಲಗ’ದುನಿಯಾ’ ವಿಜಯ್

ಕನ್ನಡ ಚಿತ್ರರಂಗದ ನಿರೀಕ್ಷೆಯ ಚಿತ್ರಗಳಲ್ಲೊಂದಾದ ಯೋಗಿ ಅಭಿನಯದ ಮತ್ತು ವಿಜಯಪ್ರಸಾದ್ ನಿರ್ದೇಶನದ ಸಿದ್ಲಿಂಗು 2' ಚಿತ್ರ ಫೆಬ್ರವರಿ 14ರಂದು ಬಿಡುಗಡೆಯಾಗುತ್ತಿದೆ. ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮವಕ್ಕೆ ಯೋಗಿ ಮಾವ,ಸ್ಯಾಂಡಲ್‍ವುಡ್ ಸಲಗ’ ದುನಿಯಾ' ವಿಜಯ್ ಬಂದು ಚಿತ್ರದಚುರುಮುರಿ’ ಎಂಬ ಹಾಡು ಬಿಡುಗಡೆ ಮಾಡಿಕೊಟ್ಟಿದ್ದು ಚಿತ್ರದ ಯಶಸ್ಸಿಗೆ ಮುನ್ನುಡಿ ಬರೆದಿದೆ.

ವಿಜಯ್ ಕುಮಾರ್ ಮಾತನಾಡಿ ನಾನು ಹೀರೋ ಆಗುವ ಮುನ್ನ ವಿಜಯಪ್ರಸಾದ್ ಧಾರಾವಾಹಿಗಳಲ್ಲಿ ಸಣ್ಣ ಪಾತ್ರಗಳನ್ನು ಕೊಟ್ಟು ಬೆಳೆಸಿದರು. ಅವರೊಬ್ಬ ವಿದ್ಯಾವಂತ ನಿರ್ದೇಶಕ. ಇಡೀ ಕರ್ನಾಟಕದ ಮನೆಮನೆಯವರನ್ನುಸಿಲ್ಲಿ ಲಲ್ಲಿ’ ನೋಡುವಂತೆ ಮಾಡಿದರು. ಇಡೀ ಕುಟುಂಬ ನೋಡುವಂತಹ ಸಿನಿಮಾ ಮಾಡಿದ್ದಾರೆ. ಹೊಡಿ-ಬಡಿ ಸಿನಿಮಾಗಳ ಮಧ್ಯೆ ಒಳ್ಳೆಯ ಸಿನಿಮಾ ಬರುತ್ತಿದೆ ಎಂಬುದರ ಸೂಚನೆ ಇಲ್ಲಿದೆ. ಯೋಗಿಗೆ ಸಿನಿಮಾ ಮಾಡಿದ್ದಿಕ್ಕೆ ಧನ್ಯವಾದಗಳು. ಇದು ಇನ್ನೂ ಸಹ ಮುಂದುವರೆಯಲಿ. ಇನ್ನೊಂದು ಒಳ್ಳೆಯ ಕಥೆಯ ಮೂಲಕ `ಸಿದ್ಲಿಂಗು 3′ ಮಾಡಲಿ ಎಂಬುದು ನನ್ನಾಸೆ’ ಎಂದರು.

ಯೋಗಿಯ ದೊಡ್ಡ ಅಭಿಮಾನಿ, `ಯಾವುದೇ ಪಾತ್ರವಿದ್ದರೂ ಮಾಡಬಲ್ಲೆ ಎಂದು ಧೈರ್ಯವಾಗಿ ನಿಲ್ಲುತ್ತಾನೆ. ಅವನ ಸಾಮಥ್ರ್ಯ ಬೇರೆ ಇದೆ. ಅವನಿಗೆ ಒಳ್ಳೆಯ ಕಥೆಗಳು ಸಿಕ್ಕಿ ಅವನು ಇನ್ನೂ ಅದ್ಭುತ ನಟನಾಗಿ ಹೊರಹೊಮ್ಮಬೇಕು ಎಂಬುದು ನನ್ನಾಸೆ. ಅದಕ್ಕೆ ಇನ್ನೂ ಸಮಯ ಬರಬೇಕೇನೋ ಬರದಿದ್ದರೆ ಅವನ ಜೊತೆಗೆ ನಿಲ್ಲುತ್ತೇನೆ. ಯಾವತ್ತೂ ಅವನ ಕೈಬಿಡುವುದಿಲ್ಲ. ಅವನನ್ನು ನಿಲ್ಲಿಸುತ್ತೇನೆ. ನನ್ನ ಕೈಗೆ ಸಿಕ್ಕರೆ ಬೇರೆಯದನ್ನೇ ಮಾಡುತ್ತೇನೆ. ಬೇರೆ ಏನನ್ನೋ ತೋರಿಸುವುದಕ್ಕೆ ಆಸೆ. ಈ ಚಿತ್ರದಲ್ಲಿ ಒಂದು ಒಳ್ಳೆಯ ವೈಬ್ ಇದೆ. ಒಳ್ಳೆಯ ಕಲಾವಿದರು ಮತ್ತು ತಂತ್ರಜ್ಞರು ಈ ತಂಡದಲ್ಲಿದ್ದಾರೆ’ ಎಂದು ಹೇಳಿದರು

ನಾಯಕ ಯೋಗಿ ಮಾತನಾಡಿ, `ಸಿದ್ಲಿಂಗು' ಚಿತ್ರ ನೋಡಿ ಎಲ್ಲರೂ ಇಷ್ಟಪಟ್ಟಿದ್ದರು. ಭಾಗ ಎರಡು ಸಹ ಎಲ್ಲರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆ ನನಗೆ ಮತ್ತು ಚಿತ್ರತಂಡಕ್ಕಿದೆ. ಆಗಸಿದ್ಲಿಂಗು’, ಕನ್ನಡ ಚಿತ್ರರಂಗಕ್ಕೆ ಬೇರೆ ತರಹದ ಸಿನಿಮಾ ಆಯ್ತು. ಇದು ಅದರ ಮುಂದುವರೆದ ಭಾಗ. ವಿಜಯಪ್ರಸಾದ್ ಜೊತೆಗೆ ಕೆಲಸ ಮಾಡುವುದು ಖುಷಿಯ ವಿಷಯ. ಪ್ರತಿಯೊಬ್ಬರಿಂದ ಒಳ್ಳೆಯ ಕೆಲಸ ತೆಗೆಯುತ್ತಾರೆ. ನನ್ನನ್ನು ಮತ್ತು ವಿಜಯಪ್ರಸಾದ್ ಅವರನ್ನು ಯಾರೂ ನಂಬದಂತಹ ಸಮಯದಲ್ಲಿ ಹರಿ ಮತ್ತು ರಾಜು ಅವರು ನಮ್ಮನ್ನು ನಂಬಿ ಚಿತ್ರ ನಿರ್ಮಿಸುವುದಕ್ಕೆ ಮುಂದೆ ಬಂದರು ಇದಕ್ಕೆ ಚಿರಋಣಿ ಎಂದರು.

ಟ್ರೇಲರ್ ಬಿಡುಗಡೆ ಮಾಡುವುದಕ್ಕೆ ಮಾವ ಬಂದಿದ್ದಾರೆ. ಚಿಕ್ಕ ವಯಸ್ಸಲ್ಲಿ ವಿಜಯ್ ಅವರನ್ನು ಮಾವ ಅಂತ ಕರೆದರೆ, ಹೊಡೆದು ಕುಮಾರ ಅಂತ ಕರೆಯೋ ಎನ್ನುತ್ತಿದ್ದರು. ಇವತ್ತು ಮೊದಲ ಬಾರಿಗೆ ವೇದಿಕೆಯೊಂದರ ಮೇಲೆ ನಿಂತು ಮಾವ ಎಂದು ಕರೆಯುತ್ತಿದ್ದೇನೆ. ಇನ್ನು ಮುಂದೆ ಎಲ್ಲೇ ಸಿಕ್ಕರೂ ಮಾವ ಎಂದು ಕರೆಯುತ್ತೇನೆ. ನಮ್ಮ ಚಿತ್ರತಂಡದವರೆಲ್ಲಾ ಅವರನ್ನು ಕರೆಸಿ ಪ್ರೀ-ರಿಲೀಸ್ ಇವೆಂಟ್ ಮಾಡಬೇಕು ಎಂದು ಹೇಳುತ್ತಿದ್ದರು. ಅವರೂ ಒಪ್ಪಿ ಇವತ್ತು ಬಂದು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅವರಿಗೆ ಧನ್ಯವಾದಗಳು’ ಎಂದರು.

ಸಿದ್ಲಿಂಗು ಸಮಾಜಕ್ಕೆ ಸತ್ಪುರುಷ ಅಲ್ಲ ದೇಶಕ್ಕೆ ಸತ್ಪ್ರಜೆ ಎಂದ ನಿರ್ದೇಶಕ ವಿಜಯಪ್ರಸಾದ್, `ಕಾಯಕ ಎಂದರೆ ಅವನನ್ನು ನೆನಪು ಮಾಡಿಕೊಳ್ಳಬೇಕು, ಆದರ್ಶ ಎಂದರೆ ಮರೆತುಬಿಡಿಬೇಕು. ಅಂಥದ್ದೊಂದು ಜೀವಂತ ಪಾತ್ರ ಈ ಚಿತ್ರದಲ್ಲಿ ಮಾಡಿದ್ದಾರೆ’ ಎಂದರು.

ಯೋಗಿ ತಂದೆ ಮತ್ತು ನಿರ್ಮಾಪಕ ಟಿ.ಪಿ. ಸಿದ್ಧರಾಜು, ನಾಯಕಿ ಸೋನು ಗೌಡ, ನಟ-ನಿರ್ದೇಶಕ ಬಿ. ಸುರೇಶ, ಮಂಜುನಾಥ್ ಹೆಗಡೆ, ಸೀತಾ ಕೋಟೆ, ಸಂಗೀತ ನಿರ್ದೇಶಕ ಅನೂಪ್ ಸೀಳಿನ್, ಗೀತರಚನೆಕಾರ ಅರಸು ಅಂತಾರೆ, ಆ?ಯಂಥೋನಿ ಕಮಲ್ ಸೇರಿದಂತೆ ಚಿತ್ರತಂಡದ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಹಾಜರಿದ್ದರು. ವಿಜಯ್ ಕುಮಾರ್ ಅವರನ್ನು ಇದೇ ಸಂದರ್ಭದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

`ಸಿದ್ಲಿಂಗು 2′ ಚಿತ್ರವನ್ನು ಶ್ರೀಹರಿ ಮತ್ತು ರಾಜು ಶೇರಿಗಾರ್ ನಿರ್ಮಿಸಿದ್ದು, ಯೋಗಿ, ಸೋನು ಗೌಡ, ಸುಮನ್ ರಂಗನಾಥ್, ಸೀತಾ ಕೋಟೆ, ಮಹಾಂತೇಶ್, ಆಂಟೋನಿ ಕಮಲ್, ಮಂಜುನಾಥ ಹೆಗಡೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಪ್ರಸನ್ನ ಗುರ್ಲಕೆರೆ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ಮತ್ತು ಅಕ್ಷಯ್ ಪಿ. ರಾವ್ ಸಂಕಲನವಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin