Sandalwood star Duniya Vijay's birthday release of "Land Lord"

ಸ್ಯಾಂಡಲ್ ವುಡ್ ಸಲಗ ದುನಿಯಾ ವಿಜಯ್ ಹುಟ್ಟುಹಬ್ಬಕ್ಕೆ “ಲ್ಯಾಂಡ್ ಲಾರ್ಡ್” ಚಿತ್ರ ಬಿಡುಗಡೆ - CineNewsKannada.com

ಸ್ಯಾಂಡಲ್ ವುಡ್ ಸಲಗ ದುನಿಯಾ ವಿಜಯ್ ಹುಟ್ಟುಹಬ್ಬಕ್ಕೆ “ಲ್ಯಾಂಡ್ ಲಾರ್ಡ್” ಚಿತ್ರ ಬಿಡುಗಡೆ

ಕನ್ನಡ ಚಿತ್ರರಂಗದಲ್ಲಿ ವಿಶಿಷ್ಠ ಸ್ಥಾನ ಪಡೆದಿರುವ ಸ್ಯಾಂಡಲ್‍ವುಡ್ ಸಲಗ, ದುನಿಯಾ ವಿಜಯ್ ಕುಮಾರ್ ಅವರ ಹುಟ್ಟುಹಬ್ಬ ಜನವರಿ 20, ಈ ಹಿನ್ನೆಲೆಯಲ್ಲಿ ಅವರ ನಟನೆಯ ಬಹುನಿರೀಕ್ಷಿತ ಚಿತ್ರ “ಲಾಂಡ್ ಲಾರ್ಡ್” ಚಿತ್ರ ಜನವರಿ 23 ರಂದು ಬಿಡುಡಗೆಯಾಗಲಿದ್ದು ಹುಟ್ಟುಹಬ್ಬಕ್ಕೆ ಚಿತ್ರತಂಡ ವಿಶೇಷ ಹುಡುಗೊರೆ ನೀಡಲು ಸಜ್ಜಾಗಿದೆ.

“ಕಾಟೇg”À ಚಿತ್ರದ ಯಶಸ್ಸಿನ ಬಳಿಕ ನೆಲಮೂಲದ ಕಥೆಯನ್ನು ಆಧರಿಸಿ ನಿರ್ದೇಶಕ ಜಡೇಶ್ ಹಂಪಿ ಆಕ್ಷನ್ ಕಟ್ ಹೇಳಿದ್ದು ಸಾರಥಿ ಚಿತ್ರದ ಸರದಾರ ಕೆವಿ ಸತ್ಯಪ್ರಕಾಶ ಮತ್ತು ಹೇಮಂತ್ ಗೌಡ ನಿರ್ಮಾಣದ “ ಲಾಂಡ್ ಲಾರ್ಡ್” ಚಿತ್ರದಲ್ಲಿ ದುನಿಯಾ ವಿಜಯ್ ಮತ್ತು ರಚಿತಾ ರಾಮ್ ಜೊತೆಯಾಗಿದ್ದಾರೆ.

ಜಾನಿ ಜಾನಿ ಎಸ್ ಪಪ್ಪಾ ಚಿತ್ರದ ಬಳಿಕ ಇಬ್ಬರು ತಾರಾನಟರು ಒಂದುಗೂಡಿರುವ ಹಿನ್ನೆಲೆಯಲ್ಲಿ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ದುಪ್ಪಟ್ಟು ಮಾಡಿದೆ, ಜೊತೆಗೆ ದುನಿಯಾ ವಿಜಯ್ ಅವರ ಮಗಳು ರಿತನ್ಯ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಪ್ಪ-ಮಗಳ ಕಾಂಬಿನೇಷನ್ ಚಿತ್ರದ ಮತ್ತೊಂದು ಕುತೂಹಲ.

ಕನ್ನಡ ರಾಜ್ಯೋತ್ಸವದ ಸಮಾರಂಭದ ಹಿನ್ನೆಲೆಯಲ್ಲಿ ‘ಲ್ಯಾಂಡ್ ಲಾರ್ಡ್’ ಚಿತ್ರದ ಸರ್ವೈವರ್ ಟೀಸರ್ ಬಿಡುಗಡೆ ಇತ್ತು. ಈ ವೇಳೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ

ನಾಯಕ ದುನಿಯಾ ವಿಜಯ್ ಮಾತನಾಡಿ ಕಷ್ಟದ ಸಮಯದಲ್ಲಿ ಕೈ ಹಿಡಿದ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಇನ್ನೂ, ಹಾಗೂ ರಚಿತರಾಮ್ ಒಂದೇ ಬಡಾವಣೆಯವರು. ಮೊದಲಿನಿಂದಲೂ ಸ್ನೇಹಿತರು. ಜೊತೆಗೆ ಅಭಿನಯಿಸಿದ್ದು ಹಾಗೂ ತೆರೆಯ ಮೇಲೆ ಅಷ್ಟೇ ಅಲ್ಲ. ನಿಜಜೀವನದಲ್ಲೂ ತಾಯಿಯ ತರಹ ಪ್ರೀತಿ ಮಾಡುವ ಹಿರಿಯ ನಟಿ ಉಮಾಶ್ರೀ ಅವರೊಂದಿಗೆ ನಟಿಸಿದ್ದು ಬಹಳ ಸಂತೋಷವಾಗಿದೆ. ಮಗಳು ರಿತನ್ಯ ಕೂಡ ಚಿತ್ರದಲ್ಲಿ ಅಭಿನಯಿಸಿದ್ದಾಳೆ. ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ತಂತ್ರಜ್ಞರ ಕಾರ್ಯವೈಖರಿಯೂ ಚೆನ್ನಾಗಿದೆ. ನಮ್ಮ ಚಿತ್ರ ಜನವರಿ 23 ರಂದು ತೆರೆಗೆ ಬರಲಿದೆ. ಚಿತ್ರ ನಿಮ್ಮೆಲ್ಲರಿಗೂ ಮೆಚ್ಚುಗೆಯಾಗುವ ಭರವಸೆಯಿದೆ ಎಂದರು.

ನಟಿ ರಚಿತಾರಾಮ್ ಮಾತನಾಡಿ ಚಿತ್ರದ ಕಥೆ ಕೇಳುವಾಗಲೇ ಬಹಳ ಕುತೂಹಲ ಎನಿಸಿತು. ಕಥೆ ಕೇಳುತ್ತಿರುವಾಗಲೇ ಈ ಪಾತ್ರ ಮಾಡಬೇಕು ಅಂದುಕೊಂಡೆ. ಕಥೆ ಕೇಳಿದ ಮೇಲೆದರ್ಶನ್ ಸರ್ ಹಾಗೂ ಲೋಕೇಶ್ ಕನಕರಾಜು ಅವರಿಗೆ ಚಿತ್ರದ ಬಗ್ಗೆ ಹೇಳಿದೆ. ಅವರು ಕೂಡ ಕಥೆ ಚೆನ್ನಾಗಿದೆ “ಜಾನಿ ಜಾನಿ ಎಸ್ ಪಪ್ಪ” ಚಿತ್ರದ ನಂತರ ನಾನು ದುನಿಯಾ ವಿಜಯ್ ಅವರ ಜೊತೆಗೆ ನಟಿಸಿದ್ದೇನೆ. ಈ ಚಿತ್ರತಂಡದೊಟ್ಟಿಗೆ ಕೆಲಸ ಮಾಡಿದ್ದು ಖುಷಿಯಾಗಿದೆ. ನಿಂಗವ್ವ ನನ್ನ ಪಾತ್ರದ ಹೆಸರು ಎಂದರು.

ನಿರ್ದೇಶಕ ಜಡೇಶ್ ಕೆ. ಹಂಪಿ ಮಾತನಾಡಿ 80ರ ದಶಕದ ಕಾಲಘಟ್ಟದಲ್ಲಿ ನಡೆಯುವ ನೆಲದ ಕಥೆ. 45 ವರ್ಷಗಳ ಹಿಂದಿನದ್ದನ್ನು ತೆರೆಯ ಮೇಲೆ ತರುವುದು ಅಷ್ಟು ಸುಲಭವಲ್ಲ.ಅಂದುಕೊಂಡ ಹಾಗೆ ಚಿತ್ರ ಬಂದಿದೆ ಅಂದರೆ ಅದಕ್ಕೆ ಚಿತ್ರತಂಡದ ಸಹಕಾರವೇ ಕಾರಣ. ದುನಿಯಾ ವಿಜಯ್ ಅವರ ಅಭಿನಯಕ್ಕೆ ಅಭಿಮಾನಿ . ರಚಿತಾರಾಮ್ ಅ ಅಭಿನಯಿಸಲು ಸೆಟ್ ಗೆ ಬಂದರೆ ಅವರ ಸಂಭಾಷಣೆಗೆ ವಿಷಲ್ ಬೀಳುತ್ತಿತ್ತು. ರಿತನ್ಯ, ಶಿಶಿರ್, ರಾಕೇಶ್ ಅಡಿಗ, ಅಚ್ಯುತ್ ಕುಮಾರ್, ಮಿತ್ರ, ಅಭಿಷೇಕ್ ದಾಸ್ ಹೀಗೆ ಎಲ್ಲರ ಅಭಿನಯವೂ ಬಹಳ ಚೆನ್ನಾಗಿದೆ ಎಂದು ಹೇಳಿದರು

ಐವತ್ತಕ್ಕೂ ಹೆಚ್ಚು ರಂಗಭೂಮಿ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದಲ್ಲಿ ಹಾಡುಗಳು ಚೆನ್ನಾಗಿ ಬಂದಿದೆ. ಅದರಲ್ಲೂ ಯೋಗರಾಜ್ ಭಟ್ ಬರೆದು ದುನಿಯಾ ವಿಜಯ್ ಹಾಗೂ ರಚಿತರಾಮ್ ಅಭಿನಯಿಸಿರುವ ಹಾಡೊಂದು ಸದ್ಯದಲ್ಲೇ ಬಿಡುಗಡೆಯಾಗಲಿದ್ದು, ಸರ್ವಕಾಲಿಕ ಹಿಟ್ ಹಾಡುಗಳ ಸಾಲಿಗೆ ಸೇರಲಿದೆ. ಚಿತ್ರವನ್ನು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಪಕರು ನಿರ್ಮಾಣ ಮಾಡಿದ್ದಾರೆ. ಎಂದರು

ನಿರ್ಮಾಪಕರಾದ ಕೆ.ವಿ.ಸತ್ಯಪ್ರಕಾಶ್ ಹಾಗು ಕೆ.ಎಸ್.ಹೇಮಂತ್ ಗೌಡ ಮಾತನಾಡಿ “ಸಾರಥಿ” ಚಿತ್ರದ ಬಳಿಕ ಹದಿನಾಲ್ಕು ವರ್ಷಗಳ ನಂತರ ಸಂಸ್ಥೆಯಿಂದ “ಲ್ಯಾಂಡ್ ಲಾರ್ಡ್” ಚಿತ್ರ ನಿರ್ಮಾಣವಾಗಿದೆ. ನೋಡುಗರು ಕೊಡುವ ದುಡ್ಡಿಗೆ ಐದು ಪಟ್ಟು ಹೆಚ್ಚು ಮನೋರಂಜನೆ ಕೊಡುವ ಚಿತ್ರವಿದು. ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ದುನಿಯಾ ವಿಜಯ್, ರಚಿತರಾಮ್ ಸೇರಿದಂತೆ ಎಲ್ಲಾ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಧನ್ಯವಾದ ಎಂದರು.

ಹಿರಿಯ ನಟಿ ಉಮಾಶ್ರೀ ಮಾತನಾಡಿ ಚಿತ್ರದಲ್ಲಿ ಅಭಿನಯಿಸಿದ್ದು ಬಹಳ ಖುಷಿಯಾಗಿದೆ. ದುನಿಯಾ ವಿಜಯ್ ತೆರೆ ಮೇಲೆ ಮಾತ್ರ ನನ್ನ ಮಗ ಅಲ್ಲ. ನಿಜಜೀವನದಲ್ಲೂ ನನ್ನ ಮಗ ಇದ್ದ ಹಾಗೆ. ಆರೀತಿಯ ಪ್ರೀತಿ ತೋರಿಸುತ್ತಾರೆ ಎಂದು ಹೇಳಿದರು.

ದುನಿಯಾ ವಿಜಯ್ ಪುತ್ರಿ ರಿತನ್ಯ ಮಾತನಾಡಿ ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದೇನೆ. ಈ ಚಿತ್ರದಲ್ಲೂ ನಾನು ದುನಿಯಾ ವಿಜಯ್ ಅವರ ಮಗಳಾಗಿಯೇ ಕಾಣಿಸಿಕೊಂಡಿದ್ದೇನೆ ಎಂದರು

ಚಿತ್ರದಲ್ಲಿ ನಟಿಸಿರುವ ಮಿತ್ರ, ಶಿಶಿರ್, ಅಭಿಷೇಕ್ ದಾಸ್ ಛಾಯಾಗ್ರಾಹಕ ಸ್ವಾಮಿ ಜೆ ಗೌಡ, ಸಂಭಾಷಣೆ ಬರೆದಿರುವ ಮಾಸ್ತಿ, ಶ್ರೀಕಾಂತ್ ಮುಂತಾದ ಚಿತ್ರತಂಡದ ಸದಸ್ಯರು “ಲ್ಯಾಂಡ್ ಲಾರ್ಡ್” ಚಿತ್ರದ ಕುರಿತು ಮಾತನಾಡಿದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin