ಕನ್ನಡಕ್ಕೆ ಬಂದ “ಕಲ್ಕಿ” ಚಿತ್ರದ ಸಂಗೀತ ನಿರ್ದೇಶಕ ಸಂತೋಷ್ ನಾರಾಯನನ್
“ಆ ದಿನಗಳು” ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ 25 ನೇ ಚಿತ್ರ “ಬಲರಾಮನ ದಿನಗಳು” ಚಿತ್ರದಿಂದ ಮಹತ್ವದ ಸುದ್ದಿ ಹೊರಬಿದ್ದಿದೆ. ಕಬಾಲಿ, ಕಲ್ಕಿ ಸೇರಿದಂತೆ 50 ಚಿತ್ರಗಳಿಗೆ ಸಂಗೀತ ನೀಡಿರುವ ಸಂತೋಷ್ ನಾರಾಯಣನ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ತಮಿಳು ನಿರ್ದೇಶಕ ಪ.ರಂಜಿತ್ ಅವರ “ಅಟ್ಟಕತ್ತಿ” ಚಿತ್ರದ ಮೂಲಕ ಸ್ವತಂತ್ರ ಸಂಗೀತ ನಿರ್ದೇಶಕರಾದ ಸಂತೋಷ್ ನಾರಾಯಣನ್, “ಕಾಲ”, ” ಕಬಾಲಿ”, “ಭೈರವ”, ” ದಸರಾ” ಹಾಗೂ ಇತ್ತೀಚಿಗೆ ತೆರೆಕಂಡ “ಕಲ್ಕಿ” ಸಿನಿಮಾವರೆಗೂ 50 ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಹಲವು ಚಿತ್ರಗಳಲ್ಲಿ ಹಾಡಿದ್ದಾರೆ ಕೂಡ.
ಬಲರಾಮನ ದಿನಗಳು ಚಿತ್ರದಿಂದ ಕನ್ನಡ ಚಿತ್ರರಂಗಕ್ಕೆ ಬಂದಿರುವ ಸಂತೋಷ್ ನಾರಾಯಣ್ ಮಾಹಿತಿ ನೀಡಿ “ನನ್ನ ತಾಯಿಗೆ ಕನ್ನಡ ಬರುತ್ತದೆ. ಅವರು ನನಗೂ ಸ್ವಲ್ಪ ಕನ್ನಡ ಹೇಳಿಕೊಟ್ಟಿದ್ದಾರೆ. ಬೆಂಗಳೂರಿಗೆ ಆಗಾಗ ಬರುತ್ತಿರುತ್ತೇನೆ. “ಬಲರಾಮನ ದಿನಗಳು” ನನ್ನ 51ನೇ ಚಿತ್ರ ಹಾಗೂ ಸಂಗೀತ ನೀಡುತ್ತಿರುವ ಕನ್ನಡದ ಮೊದಲ ಚಿತ್ರ. ನಿರ್ದೆಶಕ ಕೆ.ಎಂ ಚೈತನ್ಯ ಹಾಗೂ ವಿನೋದ್ ಪ್ರಭಾಕರ್ ಅವರ ಜೊತೆಗೆ ಕೆಲಸ ಮಾಡುತ್ತಿರುವುದು ಖುಷಿಯಾಗಿದೆ ಎಂದರು
ಗುರುಗಳಾದ ಇಳಯರಾಜ, ಎ.ಆರ್.ರೆಹಮಾನ್ ಅವರನ್ನು ನೆಪಿಸಿಕೊಂಡ ಅವರು ಸಂಗೀತದದಲ್ಲಿ ಇಳಯರಾಜ ನನಗೆ ತಂದೆ, ಎ ಆರ್ ರೆಹಮಾನ್ ತಾಯಿ ಎಂದು ಅವರು ರಘು ದೀಕ್ಷಿತ್ ಅವರ “ನಿನ್ನ ಪೂಜೆಗೆ ಬಂದೆ ಮಾದೇಶ್ವರ” ಸೇರಿದಂತೆ ಕೆಲವು ಹಾಡುಗಳಿಗೆ ಪ್ರೋಗ್ರಾಮರ್ ಆಗಿ ಕೆಲಸ ಮಾಡಿದ್ದೇನೆ. ಅಜನೀಶ್ ಲೋಕನಾಥ್ ಹಾಗೂ ರವಿ ಬಸ್ರೂರ್ ಅವರ ಸಂಗಿತ ಇಷ್ಟ ಎಂದು ಹೇಳಿದ ಸಂತೋಷ್ ನಾರಾಯಣನ್, ಈ ಚಿತ್ರದಲ್ಲೂ ಒಳ್ಳೆಯ ಹಾಡುಗಳನ್ನು ಕೊಡುವ ಪ್ರಯತ್ನ ಮಾಡುತ್ತೇನೆ ಎಂದರು.