ಪ್ರೇಮಿಗಳ ದಿನದಂದು “ಸರಳ ಸುಬ್ಬರಾವ್” ಪ್ರೇಮ ಕಥಾನಕಯ ಚಿತ್ರ ಬಿಡುಗಡೆ
ಲೋಹಿತ್ ನಂಜುಂಡಯ್ಯ ನಿರ್ಮಿಸಿ ಸದಭಿರುಚಿ ಚಿತ್ರಗಳ ನಿರ್ದೇಶಕ ಮಂಜು ಸ್ವರಾಜ್ ನಿರ್ದೇಶನದಲ್ಲಿ ಅಜೇಯ್ ರಾವ್ ಹಾಗೂ ಮಿಶಾ ನಾರಂಗ್ ನಾಯಕ, ನಾಯಕಿಯಾಗಿ ನಟಿಸಿರುವ ಮತ್ತು 1970 ರ ಕಾಲಘಟ್ಟದ ಪ್ರೇಮ ಕಥಾನಕ ಹೊಂದಿರುವ “ಸರಳ ಸುಬ್ಬರಾವ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಫೆಬ್ರವರಿ 12 ರಂದು ಚಿತ್ರ ಬಿಡುಗಡೆಯಾಗಲಿದೆ.

ನಿರ್ದೇಶಕ ಮಂಜು ಸ್ವರಾಜ್ ಮಾತನಾಡಿ, “ಸರಳ ಸುಬ್ಬರಾವ್” 1970 ರ ಕಾಲಘಟ್ಟದ ಪ್ರೇಮಕಥೆ. ತ್ರಿವೇಣಿ ಅವರ ಕಾದಂಬರಿ ಆಧರಿಸಿದ ಕಥೆ ಇದು. ಈವರೆಗೂ ಕನ್ನಡದಲ್ಲಿ ತ್ರಿವೇಣಿ ಅವರ ಕಾದಂಬರಿಗಳನ್ನು ಆಧರಿಸಿ ಬಂದಿರುವ ಚಿತ್ರಗಳೆಲ್ಲಾ ಗೆದ್ದಿದೆ. ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಕಥೆ ಕೂಡ. ಚಿತ್ರ ಎಲ್ಲರಿಗೂ ಮೆಚ್ಚುಗೆಯಾಗುವ ಭರವಸೆ ಇದೆ. ಹೆಚ್ಚು ಕಡಿಮೆ ನೂರು ವರ್ಷಗಳ ಇತಿಹಾಸವಿರುವ ಮೈಸೂರಿನ ಮನೆಯೊಂದರಲ್ಲಿ ನಮ್ಮ ಚಿತ್ರದ ಚಿತ್ರೀಕರಣ ನಡೆದಿದೆ ಎಂದರು
ಅಜೇಯ್ ರಾವ್ ನಾಯಕರಾಗಿ ನಟಿಸಿರುವ ಚಿತ್ರದ ನಾಯಕಿ ಪಂಜಾಬಿನ ಮಿಶಾ ನಾರಂಗ್. ರಂಗಾಯಣ ರಘು, ವೀಣಾ ಸುಂದರ್, ಶ್ರೀ, ರಘು ರಾಮನಕೊಪ್ಪ, ವಿಜಯ್ ಚಂಡೂರ್ ಹೀಗೆ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ಅಂತರಾಷ್ಟ್ರೀಯ ಖ್ಯಾತಿಯ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಪ್ರದೀಪ್ ಪದ್ಮಕುಮಾರ್ ಛಾಯಾಗ್ರಹಣ ಹಾಗೂ ಬಸವರಾಜ್ ಅರಸ್ ಸಂಕಲನ “ಸರಳ ಸುಬ್ಬರಾವ್” ಚಿತ್ರಕ್ಕಿದೆ ಎಂದು ತಿಳಿಸಿದರು.
ನಾಯಕ ಅಜೇಯ್ ರಾವ್ ಮಾತನಾಡಿ ಹುಟ್ಟಿದ್ದು 1980ರಲ್ಲಿ. ಚಿತ್ರದ ಕಥೆ ನಡೆಯುವುದು 1970ರ ಕಾಲಘಟ್ಟದಲ್ಲಿ ಎಂದು ಮಾತನಾಡಿದ ಕನ್ನಡದಲ್ಲಿ ಅಪರೂಪ ಎನ್ನಬಹುದಾದ ಕಥೆಯನ್ನು ನಿರ್ದೇಶಕ ಮಂಜು ಸ್ವರಾಜ್ ಹಾಗೂ ನಿರ್ಮಾಪಕ ಲೋಹಿತ್ ಆಯ್ಕೆ ಮಾಡಿಕೊಂಡಿದ್ದಾರೆ. ರೆಟ್ರೊ ಶೈಲಿಯಲ್ಲಿ ಕಾಣಿಸಿಕೊಂಡಿರುವಿದಕ್ಕೆ ಖುಷಿಯಿದೆ ಪೆÇ್ರೀತ್ಸಾಹಿಸಿ ಎಂದರು.

ನಾಯಕಿ ಮಿಶಾ ನಾರಂಗ್ ಮಾತನಾಡಿ ಚಿತ್ರದಲ್ಲಿ ನಟಿಸಿದ್ದು ಬಹಳ ಖುಷಿಯಾಗಿದೆ. ಪಾತ್ರ ಕೂಡ ಚೆನ್ನಾಗಿದೆ ಎಂದರು
ನಿರ್ಮಾಪಕ ಲೋಹಿತ್ ನಂಜುಂಡಯ್ಯ ಮಾತನಾಡಿ ನಿರ್ದೇಶಕರು ಹೇಳಿದ ಕಥೆ ಬಹಳ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆ. ಅಜೇಯ್ ರಾವ್ ಸೇರಿದಂತೆ ಚಿತ್ರತಂಡದ ಎಲ್ಲರ ಸಹಕಾರದಿಂದ ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ ಎಂದು ಹೇಳಿದರು.
ಚಿತ್ರದಲ್ಲಿ ನಟಿಸಿರುವ ರಘು ರಾಮನಕೊಪ್ಪ, ವೀಣಾ ಸುಂದರ್, ಚಿತ್ಕಲಾ ಬಿರಾದಾರ್ ಮುಂತಾದ ಚಿತ್ರತಂಡದ ಸದಸ್ಯರು “ಸರಳ ಸುಬ್ಬರಾವ್” ಚಿತ್ರದ ಕುರಿತು ಮಾಹಿತಿ ಹಂಚಿಕೊಂಡರು.

