“ಸೆಕೆಂಡ್ ಕೇಸ್ ಆಫ್ ಸೀತಾರಾಮ್” ಚಿತ್ರ ಫೆಬ್ರವರಿ 20ಕ್ಕೆ ತೆರೆಗೆ
ಸಸ್ಪೆನ್ಸ್ ಕಥೆಗಳನ್ನು ಸೊಗಸಾಗಿ ಕಟ್ಟಿಕೊಡುವ ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ಈಗ ಸೆಕೆಂಡ್ ಕೇಸ್ ಸೀತಾರಾಮ್ ಮೂಲಕ ಪ್ರೇಕ್ಷಕರ ಎದುರು ಬರ್ತಿದ್ದಾರೆ. ಅಂದಹಾಗೇ ‘ಸೀತಾರಾಮ್ ಬಿನೋಯ್ ಕೇಸ್ ನಂಬರ್ 18’ ಚಿತ್ರದ ಸೀಕ್ವೆಲ್ ಇದಾಗಿದ್ದು, ಫೆಬ್ರವರಿ 20ರಂದು ಚಿತ್ರ ತೆರೆಗೆ ಬರಲಿದೆ,

ನಟ ವಿಜಯ್ ರಾಘವೇಂದ್ರ ಪೊಲೀಸ್ ಪಾತ್ರದಲ್ಲಿ ನಟಿಸಿದ್ದರು. ಇದೀಗ ಮತ್ತೆ ಖಾಕಿ ತೊಟ್ಟು ಮತ್ತೊಂದು ಥ್ರಿಲ್ಲಿಂಗ್ ಕಥೆ ಭೇದಿಸಲು ಹೊರಟಿದ್ದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಕುತೂಹಲ ಕೆರಳಸಿದೆ
ನಟ ವಿಜಯ್ ರಾಘವೇಂದ್ರ ಮಾತನಾಡಿ, ಸೀತಾರಾಮ್ ಬಿನೋಯ್ ವೃತ್ತಿ ಜೀವನಕ್ಕೆ ವಿಶೇಷ ಬಲ ಕೊಟ್ಟ ಸಿನಿಮಾ. ಚಿತ್ರದ ಬರವಣಿಗೆ, ಪ್ರೆಸೆಂಟೇಷನ್ ಎಲ್ಲವೂ ಶಕ್ತಿ ನೀಡಿತ್ತು. ನಂತರ ಕೇಸ್ ಆಫ್ ಕೊಂಡಾಣ ಮಾಡಿದೆವು. ಬಳಿಕ ಇನ್ನೊಂದು ಸೀತಾರಾಮ್ ಮಾಡಿದ್ದೇವೆ. ಸಾತ್ವಿಕ್ ಅದಕ್ಕೆ ಸಪೆÇೀರ್ಟ್ ಮಾಡಿದರು. ಚಿತ್ರತಂಡ ಸೇರಿಕೊಂಡು ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಚಿತ್ರ ಮಾಡಿದೆವು. ನವನೀತ್ ಶ್ಯಾಮ್ ಸಂಗೀತ ಚಿತ್ರದ ಜೀವಾಳ. ಚಿತ್ರ ಮಾಡೋದು ಎಷ್ಟೋ ಕಷ್ಟವೋ ಬಿಡುಗಡೆ ಕೂಡ ಕಷ್ಟ. ನಮಗೆ ಈ ಚಿತ್ರಕ್ಕೆ ಪವನ್ ಸರ್ ಬೆಂಬಲವಾಗಿ ನಿಂತಿದ್ದಾರೆಎಂದು ಹೇಳಿದರು.
ನಿರ್ದೇಶಕ ಕಮ್ ಪವನ್ ಒಡೆಯರ್ ಮಾತನಾಡಿ, ಸೀತಾರಾಮ್ ಬಿನೋಯ್ ಟ್ರೆಂಡ್ ಸೆಟ್ ಮಾಡಿದ ಚಿತ್ರ. ಬರವಣಿಗೆ, ಟೇಕಿಂಗ್, ಪ್ರೆಸೆಂಟೆಷನ್ ಎಲ್ಲವೂ ಚೆನ್ನಾಗಿತ್ತು. ಮುಂದುವರೆದ ಭಾಗ ಸೆಕೆಂಡ್ ಕೇಸ್ ಸೀತಾರಾಮ್. ನಿರ್ದೇಶಕರು ಹಾಗೂ ನಿರ್ಮಾಪಕರು ಇಬ್ಬರು ಫ್ಯಾಷನೇಟೆಡ್. ಸಿನಿಮಾವನ್ನು ಹೋಮ್ ವರ್ಕ್ ಮಾಡಿದ ರೀತಿ ಮಾಡಿ ಕೆಲಸ ಮಾಡಿದ್ದಾರೆ. ಸಿನಿಮಾ ಮೇಲೆ ಇಡೀ ತಂಡಕ್ಕೆ ತುಡಿತ ಇದೆ. ರಫ್ ಕಟ್ ನೋಡಿದಾಗ ಬಹಳ ಇಷ್ಟವಾಯ್ತು ಎಂದರು

‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಚಿತ್ರದಲ್ಲಿ ವಿಜಯ್ ರಾಘವೇಂದ್ರ, ಗೋಪಾಲ್ ಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಪವನ್ ಒಡೆಯರ್ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ದೇವಿ ಪ್ರಸಾದ್ ಶೆಟ್ಟಿ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. `ಫ್ಲೈಯಿಂಗ್ ಎಲಿಫಂಟ್ ಸ್ಟೋರಿ ಟೆಲ್ಲರ್ಸ್’ ಸಿನಿಮಾ ಮೂಲಕ ದೇವಿ ಪ್ರಸಾದ್ ಶೆಟ್ಟಿ ಹಾಗೂ ಸಾತ್ವಿಕ್ ಹೆಬ್ಬಾರ್ ಚಿತ್ರ ನಿರ್ಮಿಸಿದ್ದಾರೆ.
ಹೇಮಂತ್ ಆಚಾರ್ಯ ಛಾಯಾಗ್ರಹಣ ಹಾಗೂ ನವನೀತ ಶಾಮ್ ಸಂಗೀತ, ಶಶಾಂಕ್ ಸಂಕಲನ ಚಿತ್ರಕ್ಕಿದೆ.

