"Shivam Shivam Sanathanam" song from the movie "45" released by Shri: curiosity increases

“45” ಚಿತ್ರದ “ಶಿವಂ ಶಿವಂ ಸನಾತನಂ” ಹಾಡು ಬಿಡುಗಡೆ ಶ್ರೀಗಳಿಂದ ಬಿಡುಗಡೆ: ಕುತೂಹಲ ಹೆಚ್ಚಳ - CineNewsKannada.com

“45” ಚಿತ್ರದ “ಶಿವಂ ಶಿವಂ ಸನಾತನಂ” ಹಾಡು ಬಿಡುಗಡೆ ಶ್ರೀಗಳಿಂದ ಬಿಡುಗಡೆ: ಕುತೂಹಲ ಹೆಚ್ಚಳ

ಕರುನಾಡ ಚಕ್ರವರ್ತಿ ಡಾ,ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಉಮಾ ರಮೇಶ್ ರೆಡ್ಡಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ “45” ಚಿತ್ರದ “ಶಿವಂ ಶಿವಂ ಸನಾತನಂ” ಹಾಡನ್ನು ಆನಂದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ ಶುಭಹಾರೈಸಿದ್ದಾರೆ

ಡಾ ವಿ.ನಾಗೇಂದ್ರಪ್ರಸಾದ್ ಬರೆದಿರುವ, ವಿಜಯ್ ಪ್ರಕಾಶ್ ಹಾಡಿದ್ದು ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಹಾಡಿಗೆ ಶಿವರಾಜಕುಮಾರ್ ಅವರು ನೃತ್ಯ ಮಾಡಿದ್ದು ವಿಶೇಷವಾಗಿತ್ತು. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಬಿಡುಗಡೆಯಾಗಿದ್ದು, ಶಿವನ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ನಿರ್ಮಾಪಕ ರಮೇಶ್ ರೆಡ್ಡಿ ಮಾತನಾಡಿ ಒತ್ತಡದ ಕಾರ್ಯಗಳಿದ್ದರೂ ದೂರದ ಊರಿನಿಂದ ಬಂದು ಹಾಡು ಬಿಡುಗಡೆ ಮಾಡಿಕೊಟ್ಟ ಪೂಜ್ಯರಿಗೆ ಅನಂತ ಧನ್ಯವಾದ.ಚಿತ್ರಕ್ಕೆ ಅರ್ಜುನ್ ಜನ್ಯ ಅವರಂತಹ ನಿರ್ದೇಶಕರು ಸಿಕ್ಕಿದ್ದು ಬಹಳ ಖುಷಿಯಾಗಿದೆ. ಚಿತ್ರದ ಆರಂಭದಿಂದಲೂ ಚಿತ್ರಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇನ್ನೂ ಬಿಡುಗಡೆಯಾಗಿರುವ ಶಿವನ ಕುರಿತಾದ ಹಾಡಂತೂ ನನ್ನ ಮನಸ್ಸಿಗೆ ಬಹಳ ಹತ್ತಿರವಾಗಿದೆ. ಹಾಡು ಇಡೀ ದೇಶದೆಲ್ಲೆಡೆ ಸದ್ದು ಮಾಡಲಿದೆ. ನಾಗೇಂದ್ರಪ್ರಸಾದ್ ಸಾಹಿತ್ಯ, ವಿಜಯ್ ಪ್ರಕಾಶ್ ಗಾಯನ ಮಧುರವಾಗಿದೆ. ನಟ ಶಿವರಾಜಕುಮಾರ್ ಬಗ್ಗೆ ಎಷ್ಟು ಹೇಳಿದರೂ ಕಡಿಮೆ. ಇಡೀ ತಂಡಕ್ಕೆ ಧನ್ಯವಾದ ಎಂದರು.

ನಿರ್ದೇಶಕ ಅರ್ಜುನ್ ಜನ್ಯ ಮಾತನಾಡಿ ಶಿವನ ಕುರಿತಾದ ಈ ಹಾಡು ಬರೆದುಕೊಟ್ಟ ವಿ.ನಾಗೇಂದ್ರಪ್ರಸಾದ್ ಹಾಗೂ ಗಾಯಕ ವಿಜಯ್ ಪ್ರಕಾಶ್ ಅವರಿಗೆ ಧನ್ಯವಾದ. ಹಾಡು ಹಾಗೂ ಚಿತ್ರ ಇಷ್ಟು ಚೆನ್ನಾಗಿ ಮೂಡಿಬರಲು ನಿರ್ಮಾಪಕ ರಮೇಶ್ ರೆಡ್ಡಿ ಅವರೆ ಪ್ರಮುಖ ಕಾರಣ. ಇನ್ನೂ, ನಿರ್ದೇಶನ ಮಾಡಲು ಪ್ರೇರಣೆ ನೀಡಿದವರೆ ಶಿವರಾಜಕುಮಾರ್. ಅವರ ಪೆÇ್ರೀತ್ಸಾಹಕ್ಕೆ ಸದಾ ಚಿರ ಋಣಿ. ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಸಹಕಾರ ಕೂಡ ಅಪಾರ. ಸದ್ಯದಲ್ಲೇ ನಮ್ಮ ಚಿತ್ರತಂಡದಿಂದ ಅಭಿಮಾನಿಗಳಿಗೆ ಮತ್ತೊಂದು ಸಸ್ಪೆನ್ಸ್ ಸಹ ಇದೆ ಎಂದರು

ನಟ ಶಿವರಾಜಕುಮಾರ್ ಮಾತನಾಡಿ ಅರ್ಜುನ್ ಜನ್ಯ ಕರ್ನಾಟಕ ಮಾತ್ರ ಅಲ್ಲ ಇಡೀ ಭಾರತದಲ್ಲೇ ಉತ್ತಮ ನಿರ್ದೇಶಕನಾಗಿ ಹೆಸರು ಮಾಡುತ್ತಾರೆ. ಬಿಡುಗಡೆಯಾಗಿರುವ ಶಿವನ ಹಾಡಂತೂ ಬಹಳ ಸೊಗಸಾಗಿದೆ. ನಿರ್ಮಾಪಕ ರಮೇಶ್ ರೆಡ್ಡಿ ಕುಟುಂಬದವರ ಹಾಗೆ. ಕಳೆದ ವರ್ಷ ನಾನು ಚಿತ್ರದ ಕನ್ನಡ ಡಬ್ಬಿಂಗ್ ಮುಗಿಸಿದ್ದೆ. ಈಗ ತಮಿಳಿನಲ್ಲಿ ಡಬ್ ಮಾಡುತ್ತಿದ್ದೇನೆ. ಆದಷ್ಟು ಎಲ್ಲಾ ಭಾಷೆಗಳಲ್ಲೂ ನಾನೇ ಡಬ್ ಮಾಡುತ್ತೇನೆ. ನನ್ನ ಧ್ವನಿ ಎಲ್ಲಾ ಕಡೆ ತಲುಪಲಿ ಅಂತ ಅಷ್ಟೇ ಎಂದು ತಿಳಿಸಿದರು.

ಹಾಡಿನ ಬಗ್ಗೆ ಡಾವಿ.ನಾಗೇಂದ್ರ ಪ್ರಸಾದ್ ಮಾಹಿತಿ ನೀಡಿದರು. ಗಾಯಕ ವಿಜಯ್ ಪ್ರಕಾಶ್ ಸಹ ಹಾಡಿನ ಕುರಿತು ತಮ್ಮ ಅನುಭವವನ್ನು ಹಂಚಿಕೊಂಡರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin