“ಉಪಾಧ್ಯಕ್ಷ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಶಿವಣ್ಣ: 26ಕ್ಕೆ ಚಿತ್ರ ತೆರೆಗೆ

ಸ್ಮಿತಾ ಉಮಾಪತಿ ಅವರು ನಿರ್ಮಿಸಿರುವ, ಅನಿಲ್ ಕುಮಾರ್ ನಿರ್ದೇಶನದ ಹಾಗೂ ಚಿಕ್ಕಣ್ಣ ಮೊದಲ ಬಾರಿಗೆ ನಾಯಕರಾಗಿ ನಟಿಸಿರುವ “ಉಪಾಧ್ಯಕ್ಷ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದ್ದು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದರು.

ಹಿರಿಯ ನಟ ಶಿವರಾಜಕುಮಾರ್ ಮಾತನಾಡಿ, ಚಿಕ್ಕಣ್ಣ ನನ್ನ ಜೊತೆ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ನಾಯಕನಾಗುತ್ತಿದ್ದಾರೆ. ಹಾಡುಗಳನ್ನು ನೋಡಿದ್ದೇನೆ. ಚಿಕ್ಕಣ್ಣ ನಿಜಕ್ಕೂ ಚೆನ್ನಾಗಿ ಡ್ಯಾನ್ಸ್ ಮಾಡಿದ್ದಾರೆ. ಉಮಾಪತಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿಲ್ ಕುಮಾರ್ ನಿರ್ದೇಶಿಸಿದ್ದಾರೆ. ನಾನು ಕೂಡ ಈ ಚಿತ್ರವನ್ನು ಮೈಸೂರಿನಲ್ಲಿ ನೋಡುತ್ತೇನೆ ಎಂದರು.

ನಿರ್ಮಾಪಕ ಉಮಾಪತಿ ಮಾತನಾಡಿ, ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಶಿವರಾಜಕುಮಾರ್ ಅವರಿಗೆ ಅನಂತ ಧನ್ಯವಾದ. ನಾವು “ಉಪಾಧ್ಯಕ್ಷ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿದಾಗ ಒಪ್ಪಿ ಬಂದಿದ್ದಾರೆ. ಅವರ ಸರಳತೆ ಬಗ್ಗೆ ಎಷ್ಟು ಹೇಳಿದರು ಕಡಿಮೆ. ನನಗೆ ಅವರ ಸಿನಿಮಾ ನಿರ್ಮಾಣ ಮಾಡುವ ಆಸೆಯಿದೆ. ಇನ್ನು “ಉಪಾಧ್ಯಕ್ಷ” ಚಿತ್ರವನ್ನು ನನ್ನ ಪತ್ನಿ ಸ್ಮಿತಾ ನಿರ್ಮಾಣ ಮಾಡಿದ್ದಾರೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ನೋಡಿ ಹಾರೈಸಿ ಎಂದರು

ನಿರ್ದೇಶಕ ಅನಿಲ್ ಕುಮಾರ್ ಮಾತನಾಡಿ, “ಅಧ್ಯಕ್ಷ” ಚಿತ್ರದ ಕಥೆ ಎಲ್ಲಿಗೆ ನಿಂತಿತ್ತೊ “ಉಪಾಧ್ಯಕ್ಷ” ಚಿತ್ರದ ಕಥೆ ಅಲ್ಲಿಂದ ಆರಂಭವಾಗುತ್ತದೆ. ಇದೊಂದು ಪಕ್ಕಾ ಮನೋರಂಜನಾ ಚಿತ್ರ. ಲಾಕ್ ಡೌನ್ ಸಮಯದಲ್ಲಿ ಚಂದ್ರ ಮೋಹನ್ ಅವರು ಈ ಚಿತ್ರದ ಕಥೆ ಹೇಳಿದರು. ಆನಂತರ ಸ್ನೇಹಿತರೆಲ್ಲಾ ಸೇರಿ ಈ ಚಿತ್ರದ ಕುರಿತು ಚರ್ಚಿಸಿ, ನಿರ್ಮಾಪಕ ಉಮಾಪತಿ ಅವರಿಗೆ ಕಥೆ ಹೇಳಿದೆವು. ಅವರು ಕಥೆ ಇಷ್ಟಪಟ್ಟು ನಿರ್ಮಾಣಕ್ಕೆ ಮುಂದಾದರು. ಚಿತ್ರ ಚೆನ್ನಾಗಿ ಮೂಡಿಬರಲು ಸಹಕರಿಸಿದ ಚಿಕ್ಕಣ್ಣ ಸೇರಿದಂತೆ ಎಲ್ಲಾ ಕಲಾವಿದರಿಗೆ ಹಾಗೂ ಅರ್ಜುನ್ ಜನ್ಯ ಅವರು ಸೇರಿದಂತೆ ಪ್ರತಿಯೊಬ್ಬ ತಂತ್ರಜ್ಞರಿಗೆ ನನ್ನ ಧನ್ಯವಾದ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಶಿವಣ್ಣ ಅವರಿಗೆ ವಿಶೇಷ ಧನ್ಯವಾದ ಎಂದರು.

ನಾಯಕ ಚಿಕ್ಕಣ್ಣ ಮಾತನಾಡಿ ಈವರೆಗೂ ಸುಮಾರು 250 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದೇನೆ. ನಾಯಕನಾಗಿ ಇದು ಮೊದಲ ಚಿತ್ರ. “ಉಪಾಧ್ಯಕ್ಷ” ಕುಟುಂಬ ಸಮೇತ ನೋಡಬಹುದಾದ ಚಿತ್ರ. ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದೇನೆ. “ಅಧ್ಯಕ್ಷ” ಚಿತ್ರದ ಸೀಕ್ವೆಲ್ ಆಗಿರುವ ಈ ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಗೆದ್ದಿದೆ. ಇಂದು ಶಿವರಾಜಕುಮಾರ್ ಅವರು ಟ್ರೇಲರ್ ಬಿಡುಗಡೆ ಮಾಡಿ ಹಾರೈಸಿದ್ದಾರೆ. ಚಿತ್ರ ನೋಡಿ. ಎಲ್ಲರೂ ಪ್ರೋತ್ಸಾಹ ನೀಡಿ ಎಂದು ನಾಯಕ ಚಿಕ್ಕಣ್ಣ ತಿಳಿಸಿದರು.

ನಾಯಕಿ ಮಲೈಕ ಹಾಗೂ ನಟ ರವಿಶಂಕರ್ ,ಧರ್ಮಣ್ಣ ಕಡೂರ್ ಸೇರಿದಂತೆಸೇರಿದಂತೆ ಅನೇಕ ಕಲಾವಿದರು “ಉಪಾಧ್ಯಕ್ಷ” ಚಿತ್ರದ ಕುರಿತು ಮಾತನಾಡಿದರು.

Related Posts

ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ಗಾ ಗರಗ’ ಹಾಡು ಬಿಡುಗಡೆ

ನಟ ನಿರೂಪ್ ಭಂಡಾರಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ಗಾ ಗರಗ’ ಭಾವನಾತ್ಮಕ ಹಾಗೂ ಅರ್ಥಪೂರ್ಣ ಗೀತೆ ಅಧಿಕೃತವಾಗಿ ಬಿಡುಗಡೆಯಾಗಿದೆ. ಸಂಗೀತ ನಿರ್ದೇಶಕ ಸಚಿನ್ ಬಸ್ರೂರ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಹಾಡಿಗೆ ಬಾಲಿವುಡ್‍ನ ಜನಪ್ರಿಯ ಗಾಯಕ…

57ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಭಾರತೀಯ ಪನೋರಮಾಗೆ ತುಳು ಚಿತ್ರ `ಪಿಲಿ ಚನ್ನೆ’ ಆಯ್ಕೆ

`ನಡುಬೆಟ್ಟು ಅಪ್ಪಣ್ಣ’ ನಂತರ ಅನುಪಮ ಶರಧಿ ನಿರ್ದೇಶನದ ಎರಡನೇ ಚಿತ್ರಕ್ಕೆ ರಾಷ್ಟ್ರಮಟ್ಟದ ಗೌರವ ಒಂದೇ ಚಿತ್ರದಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ ಬಹುಮುಖ ಪ್ರತಿಭೆ ಎನ್ನುವ ಹಿರಿಮೆಗೆ ಪಾತ್ರರಾಗಿದ್ಧಾರೆ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಒಂದಾದ 57ನೇ ಭಾರತೀಯ ಅಂತರಾಷ್ಟ್ರೀಯ ಚಿತ್ರೀತ್ಸೋತ್ಸ ಗೋವಾದಲ್ಲಿ…

Leave a Reply

Your email address will not be published. Required fields are marked *


Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581