Shivanna starrer "Ghost" wraps up: Srini, the director of "Beer Bal" again

ಶಿವಣ್ಣ ಅಭಿನಯದ “ಘೋಸ್ಟ್” ಚಿತ್ರೀಕರಣ ಮುಕ್ತಾಯ: ಮತ್ತೆ “ಬೀರ್ ಬಲ್ “ಆದ ನಿರ್ದೇಶಕ ಶ್ರೀನಿ - CineNewsKannada.com

ಶಿವಣ್ಣ ಅಭಿನಯದ “ಘೋಸ್ಟ್” ಚಿತ್ರೀಕರಣ ಮುಕ್ತಾಯ:  ಮತ್ತೆ “ಬೀರ್ ಬಲ್ “ಆದ ನಿರ್ದೇಶಕ ಶ್ರೀನಿ

ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

ಇತ್ತೀಚೆಗೆ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಮುಕ್ತಾಯವಾಗಿದ್ದು, ಕುಂಬಳಕಾಯಿ ಒಡೆಯಲಾಗಿದೆ‌. ಚಿತ್ರದ ಇನ್ನೊಂದು ವಿಶೇಷವೆಂದರೆ ನಿರ್ದೇಶಕ ಶ್ರೀನಿ “ಬೀರ್ ಬಲ್” ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಕೂಡ ಶ್ರೀನಿ “ಬೀರ್ ಬಲ್” ಚಿತ್ರದಲ್ಲಿ ಅಭಿನಯಿಸಿದ್ದರು. ಈಗ ಈ ಚಿತ್ರದಲ್ಲಿ “ಬೀರ್ ಬಲ್” ಪಾತ್ರದಲ್ಲಿ ಅಭಿನಯಿಸಿರುವುದು, “ಬೀರ್ ಬಲ್ ” ಭಾಗ -2 ಬರಬಹುದಾ ? ಎಂಬ ಪ್ರಶ್ನೆ ಮೂಡಿದೆ.

ಈಗಾಗಲೇ “ಘೋಸ್ಟ್” ಫಸ್ಟ್ ಲುಕ್, “BIG DADDY” ಟೀಸರ್ ಅಭಿಮಾನಿಗಳ ಮನ ಗೆದ್ದಿದೆ. ಚಿತ್ರವನ್ನು ತೆರೆಯ ಮೇಲೆ ನೋಡುವ ಕಾತುರ ಅಭಿಮಾನಿಗಳಲ್ಲಿ ಹೆಚ್ಚಿದೆ.

ಶಿವರಾಜಕುಮಾರ್, ಅನುಪಮ್ ಖೇರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್, ಶ್ರೀನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin