Shivanna undergoes successful surgery in America: Thanks to fans

ಅಮೇರಿಕಾದಲ್ಲಿ ಶಿವಣ್ಣನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಅಭಿಮಾನಿಗಳಿಗೆ ಧನ್ಯವಾದ - CineNewsKannada.com

ಅಮೇರಿಕಾದಲ್ಲಿ ಶಿವಣ್ಣನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಅಭಿಮಾನಿಗಳಿಗೆ ಧನ್ಯವಾದ

ಡಾ. ಶಿವರಾಜ್‍ಕುಮಾರ್ ಅಮರಿಗೆ ಅಮೇರಿಕಾದ ಮಿಮಾಮಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರ ಆರೋಗ್ಯದಲ್ಲಿ ಸ್ಥಿರ ಪರಿಸ್ಥಿತಿಯಲ್ಲಿ ಇದ್ದು ಚೇತರಿಸಿಕೊಳ್ಳುತ್ತಿದ್ದಾರೆ

ಶಸ್ತ್ರಚಿಕಿತ್ಸೆಯನ್ನು ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿಸಲಾಗಿದ್ದು, ಶಸ್ತ್ರಚಿಕಿತ್ಸೆಯ ವೇಳೆ ಮತ್ತು ಶಸ್ತ್ರಚಿಕಿತ್ಸೆ ನಂತರದ ಆರೈಕೆ ಸಮಯದಲ್ಲಿ ಡಾ. ಶಿವರಾಜ್‍ಕುಮಾರ್ ಅಆರೋಗ್ಯ ಸ್ಥಿತಿಯು ಸ್ಥಿರವಾಗಿತ್ತು ಎಂದು ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಶಿವಣ್ಣ ಅವರ ಸುಗಮ ಚೇತರಿಕೆಯನ್ನು ಖಚಿತಪಡಿಸಲು ಪ್ರಸ್ತುತ ತೀವ್ರ ನಿರೀಕ್ಷಣೆಯಲ್ಲಿದ್ದಾರೆ ಮತ್ತು ಪರಿಣತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳ ತಂಡದಿಂದ ಅತ್ಯುತ್ತಮ ಆರೈಕೆ ಮತ್ತು ಗಮನವನ್ನು ಪಡೆಯುತ್ತಿದ್ದಾರೆ.

ಡಾ. ಶಿವರಾಜ್‍ಕುಮಾರ್‍ಅಭಿಮಾನಿಗಳು, ಸಹೋದ್ಯೋಗಿಗಳು, ಶುಭಚಿಂತಕರು ಮತ್ತು ಮಾಧ್ಯಮಗಳಿಗೆ ಈ ಸಂದರ್ಭದಲ್ಲಿ ತೋರಿಸಿದ ನಿರಂತರ ಬೆಂಬಲ, ಪ್ರಾರ್ಥನೆ ಮತ್ತು ಮೆಚ್ಚುಗೆ ಸಂದೇಶಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಪೆÇ್ರೀತ್ಸಾಹವು ಡಾ. ಶಿವರಾಜ್‍ಕುಮಾರ್ ಮತ್ತು ಅವರ ಕುಟುಂಬಕ್ಕೆ ದೊಡ್ಡ ಶಕ್ತಿ ಒದಗಿಸಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin