Shivanna's new pan India film "#MB"

ಶಿವಣ್ಣ ಅಭಿನಯದ ಹೊಸ ಪ್ಯಾನ್ ಇಂಡಿಯಾ ಚಿತ್ರ “# ಎಂಬಿ” - CineNewsKannada.com

ಶಿವಣ್ಣ ಅಭಿನಯದ ಹೊಸ ಪ್ಯಾನ್ ಇಂಡಿಯಾ ಚಿತ್ರ “# ಎಂಬಿ”

ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ “# ಎಂಬಿ” ಎಂಬ ನೂತನ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ. ಮುಂಬೈ ಮೂಲದ “ಆಡ್ ಒನ್” ಫಿಲಂಸ್ ಸಂಸ್ಥೆ ಲಾಂಛನದಲ್ಲಿ ಮನೋಜ್ ಬನೋಡೆ ಹಾಗೂ ಖೇಮ್ ಚಂದ್ ಖಡ್ಗಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ವಿಜಯಕಾಂತ್ ಅಭಿನಯದ ಸೂಪರ್ ಹಿಟ್ “ವಲ್ಲರಸು” ಚಿತ್ರದ ನಿರ್ದೇಶಕ ಎನ್ ಮಹಾರಾಜನ್ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈವರೆಗೂ ಮೂರು ತಮಿಳು ಹಾಗೂ ಸನ್ನಿ ಡಿಯೋಲ್ ಅಭಿನಯದ ಹಿಂದಿ ಚಿತ್ರ ನಿರ್ದೇಶಿಸಿರುವ ಮಹಾರಾಜನ್ ನಿರ್ದೇಶಿಸುತ್ತಿರುವ ಮೊದಲ ಕನ್ನಡ ಚಿತ್ರವಿದು.

“ಆಡ್ ಒನ್” ಫಿಲಂಸ್ ಸಂಸ್ಥೆಯ ಮೂಲಕ ಸಾಕಷ್ಟು ದೊಡ್ಡದೊಡ್ಡ ಇವೆಂಟ್‍ಗಳನ್ನು ಆಯೋಜಿಸಿರುವ ಮನೋಜ್ ಬನೋಡೆ ಹಾಗೂ ಖೇಮ್ ಚಂದ್ ಖಡ್ಗಿ ಈಗ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಮೊದಲ ನಿರ್ಮಾಣದ ಚಿತ್ರವನ್ನು ದಕ್ಷಿಣ ಭಾರತದಲ್ಲಿ, ಅದರಲ್ಲೂ ಕನ್ನಡ ಚಿತ್ರ ನಿರ್ಮಿಸುತ್ತಿರುವುದು ನಿಜಕ್ಕೂ ಸಂತಸದ ವಿಚಾರ.

ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ಚಿತ್ರ ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ನಿರ್ಮಾಣವಾಗುತ್ತಿದೆ. ಕನ್ನಡದ ಹೆಸರಾಂತ ನಟ ಶಿವರಾಜಕುಮಾರ್ ಅವರ ಅಭಿನಯದ ಈ ಚಿತ್ರವನ್ನು ನಿರ್ಮಿಸುತ್ತಿರುವುದಕ್ಕೆ ಬಹಳ ಖುಷಿಯಾಗಿದೆ ಎನ್ನುತ್ತಾರೆ ನಿರ್ಮಾಪಕರು.

“# ಎಂಬಿ” ಎಂದರೆ ಏನು ಎಂಬ ವಿಷಯವನ್ನು ಗೌಪ್ಯವಾಗಿಟ್ಟಿರುವ ನಿರ್ದೇಶಕರು, ಮುಂದಿನ ದಿನಗಳಲ್ಲಿ ಶೀರ್ಷಿಕೆಯ ವಿವರಣೆ ಹಾಗೂ ಚಿತ್ರತಂಡದ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ. 2025ರ ಮಧ್ಯದಲ್ಲಿ ಚಿತ್ರವನ್ನು ಆರಂಭಿಸುವುದಾಗಿ ನಿರ್ಮಾಪಕರು ಹೇಳಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin