Shivraj Kumar starrer 'Bhairati Rangal' is releasing on November 15

ಶಿವರಾಜ್ ಕುಮಾರ್ ನಟನೆಯ ನವೆಂಬರ್ 15 ರಂದು `ಭೈರತಿ ರಣಗಲ್’ ಬಿಡುಗಡೆ - CineNewsKannada.com

ಶಿವರಾಜ್ ಕುಮಾರ್ ನಟನೆಯ ನವೆಂಬರ್ 15 ರಂದು `ಭೈರತಿ ರಣಗಲ್’ ಬಿಡುಗಡೆ

ಆರಂಭದಿಂದಲೇ ಸಾಕಷ್ಟು ಕುತೂಹಲ ಮೂಡಿಸಿರುವ `ಭೈರತಿ ರಣಗಲ್’ ಚಿತ್ರ ಮೊದಲು ತಿಳಿಸಿದಂತೆ ಆಗಸ್ಟ್ 15 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕಾರಣಾಂತರದಿಂದ ಚಿತ್ರ ಬಿಡುಗಡೆ ಮುಂದೆ ಹೋಗಿ ಸೆಪ್ಟಂಬರ್ 15ರಂದು ಬಿಡುಗಡೆಯಾಗುತ್ತಿದೆ.

ನಿರ್ಮಾಪಕಿ ಗೀತಾ ಶಿವರಾಜಕುಮಾರ್, ನಿರ್ದೇಶಕ ನರ್ತನ್ ಹಾಗೂ ನಿವೇದಿತಾ ಶಿವರಾಜಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಹಸ್ರಾರು ಅಭಿಮಾನಿಗಳು ಚಿತ್ರ ಬಿಡುಗಡೆ ಮಾಡುವ ದಿನಾಂಕ ಪ್ರಕಟಿಸಲಾಗಿದೆ.

ನಿರ್ಮಾಪಕಿ ಗೀತಾ ಶಿವರಾಜಕುಮಾರ್ ಮಾತನಾಡಿ, “ಭೈರತಿ ರಣಗಲ್” ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಎರಡನೇ ಚಿತ್ರ. ಸಂಸ್ಥೆಯ ಮೊದಲ ಚಿತ್ರ “ವೇದ” ಗೆ ನೀವೆಲ್ಲಾ ನೀಡಿದ ಪ್ರೋತ್ಸಾಹಕ್ಕೆ ಧನ್ಯವಾದ. ಚಿತ್ರಕ್ಕೂ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ನಿರ್ದೇಶಕ ನರ್ತನ್ ಮಾತನಾಡಿ ಚಿತ್ರದ ಬಿಡುಗಡೆ ದಿನಾಂಕವನ್ನು ವಿಭಿನ್ನವಾಗಿ ಅನೌನ್ಸ್ ಮಾಡಲು ನಿರ್ಧರಿಸಲಾಗಿತ್ತು. ಈಗ ನವೆಂಬರ್ 15 ರಂದು ಚಿತ್ರ ಬಿಡುಗಡೆಯಾಗಲಿದೆ. ಚಿತ್ರವನ್ನು ಎಲ್ಲರೂ ಚಿತ್ರಮಂದಿರಗಳಿಗೆ ಬಂದು ನೋಡುವ ಮೂಲಕ ಪ್ರೋತ್ಸಾಹ ನೀಡಿ ಎಂದರು.

‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಚಿತ್ರವನ್ನು ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿದ್ದಾರೆ. ನರ್ತನ್ ನಿರ್ದೇಶಿಸಿರುವ ಚಿತ್ರದ ತಾರಾಬಳಗದಲ್ಲಿ ಶಿವರಾಜಕುಮಾರ್, ರುಕ್ಮಿಣಿ ವಸಂತ್, ರಾಹುಲ್ ಬೋಸ್, ಅವಿನಾಶ್, ದೇವರಾಜ್, ಮಧು ಗುರುಸ್ವಾಮಿ, ಛಾಯಾ ಸಿಂಗ್, ಬಾಬು ಹಿರಣ್ಣಯ್ಯ ಮುಂತಾದವರಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ ಮತ್ತು ರವಿ ಬಸ್ರೂರು ಸಂಗೀತ ನಿರ್ದೇಶನ “ಭೈರತಿ ರಣಗಲ್” ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin