Shooting for Chikkanna's film "Jodethu" begins from January 5th

ಚಿಕ್ಕಣ್ಣ ನಟನೆಯ “ಜೋಡೆತ್ತು” ಚಿತ್ರಕ್ಕೆ ಜನವರಿ 5ರಿಂದ ಚಿತ್ರೀಕರಣ - CineNewsKannada.com

ಚಿಕ್ಕಣ್ಣ ನಟನೆಯ “ಜೋಡೆತ್ತು” ಚಿತ್ರಕ್ಕೆ ಜನವರಿ 5ರಿಂದ ಚಿತ್ರೀಕರಣ

“ಜೊಡೆತ್ತು” ಚಿತ್ರತಂಡ ಚಿತ್ರೀಕರಣಕ್ಕೆ ತೆರಳಲು ಸಜ್ಜಗಿದೆ.ಗ್ರಾಮೀಣ ಸೊಗಡಿನ ಹಿನ್ನೆಲೆಯಲ್ಲಿ ಕಟ್ಟಿಕೊಡುವ ಬಯಕೆಯಿಂದ, ಅದಕ್ಕಾಗಿ ಗ್ರಾಮವನ್ನೇ ಚಿಕ್ಕಮಗಳೂರಿನಲ್ಲಿ ಬೃಹತ್ ಸೆಟ್ ಹಾಕಲಾಗಿದೆ. ಜನವರಿ 5ರಿಂದ ಚಿತ್ರೀಕರಣ ಶುರುವಾಗಲಿದೆ.

ಸೋಮಶೇಖರ್ (ಕಟ್ಟಿಗೇನಹಳ್ಳಿ) ನಿರ್ಮಾಣದ ಜೋಡೆತ್ತು ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗುತ್ತಿದೆ. ಇದು ಅವರ ಮೂರನೇ ಸಿನಿಮಾವಿದು. ಚಿಕ್ಕಣ್ಣ ಜತೆಗೆ ತೆಲುಗಿನ ಸುನಿಲ್ ಸಹ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಇವರೊಟ್ಟಿಗೆ ಇನ್ನೂ ಅನೇಕ ಕಲಾವಿದರು ನಟಿಸಲಿದ್ದು, ಅದರ ಕುರಿತು ಸದ್ಯದಲ್ಲೇ ಚಿತ್ರತಂಡ ಅಧಿಕೃತವಾಗಿ ಮಾಹಿತಿ ಹರಿಬಿಡಲಿದೆ.

ಅಧ್ಯಕ್ಷ, ರಾಬರ್ಟ್, ಕಾಟೇರ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದಿ ಡೆವಿಲ್’ ಸಿನಿಮಾಕ್ಕೆ ಕ್ಯಾಮೆರಾಮನ್ ಆಗಿದ್ದ ಸುಧಾಕರ್ ಎಸ್ ರಾಜ್ ಈ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಜತೆಗೆ ಛಾಯಾಗ್ರಹಣ ಜವಾಬ್ದಾರಿಯೂ ಅವರೇ ನಿರ್ವಹಿಸುವ ಮೂಲಕಜೋಡೆತ್ತು’ಗಳಿಗೆ ಕಣ್ಣಾಗಲಿದ್ದಾರೆ.

ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ಸಂಯೋಜಿಸಲಿದ್ದು, ಐದು ಹಾಡುಗಳನ್ನು ಕಟ್ಟಿಕೊಡಲಿದ್ದಾರೆ. ಮಾಸ್ತಿ, ರಾಜಶೇಖರ್ ಹಾಗೂ ರಘು ನಿಡುವಳ್ಳಿ ಈ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದು, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಜೋಡೆತ್ತು ಸಿನಿಮಾಕ್ಕಿದೆ. ಎಲ್ಲಾ ಅಂದುಕೊಂಡಂತೆ ಆದರೆ 2026ರಲ್ಲಿ ಸಿನಿಮಾ ತೆರೆಕಾಣಲಿದೆ.

ನಟ ಚಿಕ್ಕಣ್ಣ ಮಾಹಿತಿ ನೀಡಿ ಈ ಸಿನಿಮಾದ ಕಥೆ 80ರ ದಶಕದ ಕಾಲಘಟ್ಟದಲ್ಲಿ ನಡೆಯುತ್ತದೆ. ನಿಜವಾದಜೋಡೆತ್ತು’ ಯಾರೆಂಬುದನ್ನು ಸದ್ಯದಲ್ಲೇ ತಿಳಿಸುತ್ತೇವೆ. ಕೆರಿಯರ್‍ನಲ್ಲೇ ದೊಡ್ಡ ಬಜೆಟ್‍ನ ಸಿನಿಮಾ. ಹಳ್ಳಿಯಲ್ಲಿ ಶುರುವಾಗಿ ಹಳ್ಳಿಯಲ್ಲೇ ಮುಗಿಯುವ ಸಿನಿಮಾ. ಫ್ಯಾಮಿಲಿ ಸೆಂಟಿಮೆಂಟ್, ಕಾಮಿಡಿ, ಆಕ್ಷನ್ ಎಲ್ಲಾ ಅಂಶಗಳೂ ಕೂಡಿರುವ ಸಿನಿಮಾವಿದು ಎಂದರು

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin