Shooting of the film `Love Seasons' complete

`ಲವ್ ಸೀಸನ್ಸ್’ ಚಿತ್ರದ ಚಿತ್ರೀಕರಣ ಪೂರ್ಣ - CineNewsKannada.com

`ಲವ್ ಸೀಸನ್ಸ್’ ಚಿತ್ರದ ಚಿತ್ರೀಕರಣ ಪೂರ್ಣ

ನವಿರು ಪ್ರೇಮ ಕಥೆಯನ್ನು ಮುಂದಿಟ್ಟುಕೊಂಡಿರುವ `ಲವ್ ಸೀಸನ್ಸ್’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ರಂಗಭೂಮಿ ಹಿನ್ನೆಲೆಯ ಕೃತ್ವಿಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರದ ಚಿತ್ರೀಕರಣದ ನಂತರದ ಕೆಲಸ ಕಾರ್ಯಗಳು ಭರದಿಂದ ಸಾಗಿವೆ

ಈ ಕುರಿತು ಮಾಹಿತಿ ಹಂಚಿಕೊಂಡಿರುವ ನಿರ್ದೇಶಕ ಕೃತ್ವಿಕ್, ನೆಲಮೂಲದ ಕಥೆಯ ಮೂಲಕ ಗುರುತಿಸುತ್ತಿವೆ, ಅಂತಹ ಕಥೆಯನ್ನು `ಲವ್ ಸೀಸನ್ಸ್’ ಹೊಂದಿದೆ, ಕಣ್ಣಿಗೆ ಕಂಡೂ ಕಾಣದಂತಿರುವ ಗಲ್ಲಿ ಗಲ್ಲಿಯ ಕಥೆಯಾಗಿದೆ. ರಂಗಭೂಮಿ ಹಿನ್ನೆಲೆಯ ಹೊಸಬರಿಂದಲೇ ಕಳೆಗಟ್ಟಿಕೊಂಡಿದೆ. ಮಂಡ್ಯ ರಮೇಶ್ ಸಾರಥ್ಯದ ನಟನಾ ಸಂಸ್ಥೆಯಲ್ಲಿ ಪಳಗಿಕೊಂಡಿರುವ ಮುಕುಂದ ರಾಮಸ್ವಾಮಿ ನಾಯಕನಾಗಿ ನಟಿಸಿದ್ದಾರೆ. ದಿಯಾ ಕೀರ್ತಿ, ಚಂದನ ಗೌಡ ಮತ್ತು ಶ್ವೇತಾ ಕೊಗ್ಲೂರ್ ನಾಯಕಿಯರಾಗಿ ಜೊತೆಯಾಗಿದ್ದಾರೆ ಗಟ್ಟಿ ಕಥೆ ಮತ್ತು ಈಗಿನ ಕಾಲಕ್ಕೆ ಅಗತ್ಯವಾಗಿರುವ ಸಂದೇಶವಿದೆ ಎಂದಿದ್ದಾರೆ

ಎನ್.ಆರ್ ಮಂಜುನಾಥ (ನೀಲೇರಿ) ಚಿತ್ರ ನಿರ್ಮಾಣ ಮಾಡಿದ್ದಾರೆ. ಯಾರು ಯಾರನ್ನೂ ನಂಬಲು ಕಷ್ಟವಾಗುವ ಕಾಲಮಾನ. ನಂಬಿಕೆಯೆಂಬ ಚುಂಬಕ ಶಕ್ತಿಯ ಸುತ್ತ ಹೊಸೆಯಲ್ಪಟ್ಟಿರುವ, ಪ್ರೇಮದ ಪರಾಗ ಮೆತ್ತಿಕೊಂಡಿರುವ ಕಥೆ `ಲವ್ ಸೀಸನ್ಸ್’ನಲ್ಲಿದೆ. ಬೆಂಗಳೂರಿನ ನಾನಾ ಏರಿಯಾಗಳಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದೆ. ಇನ್ನೇನು ಕೆಲವೇ ದಿನಗಳಲ್ಲಿ ಈ ಚಿತ್ರದ ಟೀಸರ್ ಬಿಡುಗಡೆಗೊಳಿಸಲು ಚಿತ್ರತಂಡ ತಯಾರಾಗುತ್ತಿದೆ. ಎಂದು ಮಾಹಿತಿ ಹಂಚಿಕೊಂಡಿದ್ದಾರೆ

ವೀರ್ ಸಮರ್ಥ್ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿವೆ. ಕೆ.ಕಲ್ಯಾಣ್, ಪ್ರಮೋದ್ ಮರವಂತೆ ಮುಂತಾದವರು ಸಾಹಿತ್ಯ ಬರೆದಿದ್ದಾರೆ. ಅವಿನಾಶ ಶಾಸ್ತ್ರಿ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ, ಭಜರಂಗಿ ಲೋಕಿ ನೃತ್ಯ ಸಂಯೋಜನೆಯಿರುವ ಚಿತ್ರದಲ್ಲಿ ಮಂಡ್ಯ ರಮೇಶ್, ರಾಜೇಶ್ ನಟರಂಗ, ಸಂಗೀತಾ ಅನಿಲ್, ಜಯತೀರ್ಥ, ಚೇತನ್ ದುರ್ಗ, ಹುಲಿ ಕಾರ್ತಿಕ್, ಬೇಬಿ ರಿತು ಸಿಂಗ್ ಮುಂತಾದವರ ತಾರಾಗಣವಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin