Shooting of the spoken part of the film "The Devil" starring Challenging Star Darshan has been completed.

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ “ದಿ ಡೆವಿಲ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ - CineNewsKannada.com

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ “ದಿ ಡೆವಿಲ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಚಿತ್ರ “ ದಿ ಡೆವಿಲ್” ಚಿತ್ರದ ಮಾತಿನ ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಚಿತ್ರದಲ್ಲಿ ನಟ ದರ್ಶನ್ ರೆಬೆಲ್ ಸ್ಟಾರ್ ಅಂಬರೀಷ್ ನಟಿಸಿದ್ದ ಹಂತ ಚಿತ್ರದ ಕನ್ವರ್ ಲಾಲ್ ಗೆಟಪ್‍ನಲ್ಲಿ ಕಾಣಿಸಿಕೊಂಡಿರುವುದು ಚಿತ್ರದ ಬಗ್ಗೆ ಕುತೂಹಲ ಹೆಚ್ಚು ಮಾಡಿದೆ.

ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಬೆಂಗಳೂರು, ರಾಜಸ್ಥಾನ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಮಾತಿನ ಜೋಡಣೆ ಆರಂಭವಾಗಲಿದೆ.

ಈಗಾಗಲೇ ಬಿಡುಗಡೆಯಾಗಿರುವ ಪೋಸ್ಟರ್ ಗಳ ಮೂಲಕ ಎಲ್ಲರ ಗಮನ ಸೆಳೆದಿರುವ “ಡೆವಿಲ್” ಚಿತ್ರದ ಮತ್ತೊಂದು ವಿಭಿನ್ನ ಪೋಸ್ಟರ್ ಸಹ ಇತ್ತೀಚೆಗೆ ಬಿಡುಗಡೆಯಾಗಿದೆ. ದರ್ಶನ್ ಅವರ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.

ಸುಧಾಕರ್.ಎಸ್.ರಾಜ್ ಛಾಯಾಗ್ರಹಣವಿರುವ “ದಿ ಡೆವಿಲ್” ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಸಾಹಸ ನಿರ್ದೇಶನವಿದೆ.

ದರ್ಶನ್ ಅವರಿಗೆ ನಾಯಕಿಯಾಗಿ ರಚನ ರೈ ಅಭಿನಯಿಸುತ್ತಿದ್ದಾರೆ. ತುಳಸಿ, ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು , ಶೋಭ್ ರಾಜ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin