ಶ್ರೇಯಸ್ ಮಂಜು ಅವರಿಗೆ “ದಿಲ್‍ದಾರ್” ಹುಟ್ಟುಹಬ್ಬದ ಉಡುಗೊರೆ
ಪಡ್ಡೆಹುಲಿಯಾಗಿ ಪ್ರೇಕ್ಷಕರನ್ನು ಸೆಳೆದಿರುವ ನಟ ಶ್ರೇಯಸ್ ಮಂಜು ಹುಟ್ಟುಹಬ್ಬದ ಸಂಭ್ರಮದಲ್ಲಿ ಉಡುಗೊರೆ ಎಂಬಂತೆ “ದಿಲ್‍ದಾರ್” ಟೀಸರ್ ಬಿಡುಗಡೆ ಮಾಡಿದೆ. ನಟ ಶ್ರೇಯಸ್ ಮಂಜು, ಟೀಸರ್‍ನಲ್ಲಿ ಆಕ್ಷನ್ ಅವತಾರದಲ್ಲಿ ವಿಜೃಂಭಿಸಿದ್ದಾರೆ.

ದಿಲ್‍ದಾರ್ ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ. ಇದೀಗ ಬಹತೇಕ ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಬಿಡುಗಡೆ ಸನಿಹದಲ್ಲಿದೆ. ಈ ಸಿನಿಮಾ ಹೊಸ ತಲೆಮಾರಿಗೆ ನೇರಾನೇರ ಹೊಂದಿಕೆಯಾಗುವ ವಿಶಿಷ್ಟ ಕಥೆಯನ್ನೊಳಗೊಂಡಿದೆ
ಡಾ.ಆರ್ ಸಂತೋಷ್ ಕುಮಾರ್ “ದಿಲ್‍ದಾರ್” ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ನಟ ಶರಣ್ ಅವರ ತಂಗಿ ಮಗಳಾದ ಕೀರ್ತಿ ಕೃಷ್ಣ ಚಿತ್ರದ ಮೂಲಕವೇ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.
ಚಿತ್ರದಲ್ಲಿ ಸಾಧು ಕೋಕಿಲಾ, ಚಂದ್ರಪ್ರಭ, ಕಾರ್ತಿಕ್, ಚಿಲ್ಲರ್ ಮಂಜು ಮುಂತಾದ ಹಾಸ್ಯ ನಟರ ದಂಡೇ ಈ ಚಿತ್ರದಲ್ಲಿದೆ. ಕೆಜಿಎಫ್ ಖ್ಯಾತಿಯ ಆಂಡ್ರೋ ಅವಿನಾಶ್, ಭಜರಂಗಿ ಲೋಕಿ, ಅರ್ಪಿತ್ ಖಳ ನಟರಾಗಿ ಅಬ್ಬರಿಸಿದ್ದಾರೆ. ಈಗಾಲೇ ಪೆÇೀಸ್ಟ್ ಪೆÇ್ರಡಕ್ಷನ್ ಕಾರ್ಯಗಳನ್ನು ಮುಗಿಸಿಕೊಂಡಿರುವ ಚಿತ್ರತಂಡ, ಶೀಘ್ರದಲ್ಲಿಯೇ ಬಿಡುಗಡೆ ದಿನಾಂಕ ಅನಾವರಣ ಮಾಡಲಿದೆ

