ಸಾಮಾಜಿಕ ಕಳಕಳಿ ಚಿತ್ರ “ವಿಕಾಸ ಪರ್ವ” ಆರಂಭ
ಕನ್ನಡ ಚಿತ್ರರಂಗದಲ್ಲೀಗ ಕಂಟೆಂಟ್ ಓರಿಯೆಂಟಲ್ ಚಿತ್ರಗಳದೇ ಕಾರುಬಾರು. ಅಂತಹ ಉತ್ತಮ ಕಂಟೆಂಟ್ ನೊಂದಿಗೆ ಬರುತ್ತಿದೆ “ವಿಕಾಸ ಮಾಜಿ ಅಧ್ಯಕ್ಷ ಭಾ.ಮ.ಹರೀಶ್ ಹಾಗೂ ನಿರ್ದೇಶಕ ಕೆ.ಎಂ.ಚೈತನ್ಯ ಶೀರ್ಷಿಕೆ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
“ವಿಕಾಸ ಪರ್ವ” ಸಾಮಾಜಿಕ ಕಳಕಳಿಯುಳ್ಳ ಚಿತ್ರ. ಉತ್ತಮ ಸಂದೇಶ ಸಹ ಇದೆ. ಕಿರುತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ರೋಹಿತ್ ನಾಗೇಶ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸ್ವಾತಿ, ನಿಶಿತಾ ಗೌಡ, ಅಶ್ವಿನ್ ಹಾಸನ್, ಬಿಲ್ವ, ಬಲ ರಾಜವಾಡಿ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಮೈಂಡ್ ಥಾಟ್ಸ್ ಮೀಡಿಯಾ ಲಾಂಛನದಲ್ಲಿ ಸಮೀರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಅನ್ಬು ಅರಸ್ ನಿರ್ದೇಶಿಸುತ್ತಿದ್ದಾರೆ. ನಾನು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇನೆ ಎಂದು ರಾಜ್ಯ ಪ್ರಶಸ್ತಿ ವಿಜೇತ ವಿಶೃತ್ ನಾಯಕ್ ತಿಳಿಸಿದರು.
ಚಿತ್ರತಂಡದ ಸಹಕಾರದಿಂದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ದ್ವಿತೀಯ ಹಂತದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ ಎಂದರು ನಿರ್ದೇಶಕ ಅನ್ಬು ಅರಸ್.
ವಿಶೃತ್ ನಾಯಕ್ ಅವರು ಹೇಳಿದ ಕಥೆ ಇಷ್ಟವಾಯಿತು ಎಂದು ಮಾತನಾಡಿದ ನಟ ರೋಹಿತ್ ನಾಗೇಶ್, ಉತ್ತಮ ಕಂಟೆಂಟ್ ನೊಂದಿಗೆ ಬರುತ್ತಿರುವ ಈ ಚಿತ್ರಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು.
ಛಾಯಾಗ್ರಹಣದ ಬಗ್ಗೆ ಛಾಯಾಗ್ರಾಹಕ ನವೀನ್ ಸುವರ್ಣ ಮಾಹಿತಿ ನೀಡಿದರು. ನಟ ಅಶ್ವಿನ್ ಹಾಸನ್ ಹಾಗೂ ಬೇಬಿ ಬಿಲ್ವ ತಮ್ಮ ಪಾತ್ರದ ಕುರಿತು ಮಾತನಾಡಿದರು.