Social concern film "Pathashala" to hit screens this Friday

ಸಾಮಾಜಿಕ ಕಳಕಳಿಯ “ಪಾಠಶಾಲಾ” ಚಿತ್ರ ಇದೇ ಶುಕ್ರವಾರ ತೆರೆಗೆ - CineNewsKannada.com

ಸಾಮಾಜಿಕ ಕಳಕಳಿಯ “ಪಾಠಶಾಲಾ” ಚಿತ್ರ ಇದೇ ಶುಕ್ರವಾರ ತೆರೆಗೆ

“ಗ್ಯಾಪಲ್ಲೊಂದು ಸಿನಿಮಾ” ಮಾಡಿ ನಂತರ “ಓಮಿನಿ” ಎಂಬ ಚಿತ್ರ ನಿರ್ದೇಶಿಸಿರುವ ಹೆದ್ದೂರ್ ಮಂಜುನಾಥ್ ಶೆಟ್ಟಿ ಈಗ “ಪಾಠಶಾಲಾ” ಎಂಬ ಚಿತ್ರ ನಿರ್ದೇಶನ ಮಾಡಿದ್ದಾರೆ. ನವೆಂಬರ್ 28ರಂದು ಬಿಡುಗಡೆಯಾಗುತ್ತಿದೆ

ಈ ಕುರಿತು ಮಾಹಿತಿ ಹಂಚಿಕೊಂಡ ನಿರ್ದೇಶಕ ಹೆದ್ದೂರು ಮಂಜುನಾಥ್ ಶೆಟ್ಟಿ, ಪತ್ನಿ ಪ್ರೀತಿ ಚಿತ್ರ ನಿರ್ಮಾಣ ಮಾಡಿದ್ದೇವೆ. ಹತ್ತಕ್ಕೂ ಅಧಿಕ ಸ್ನೇಹಿತರ ಸಹ ನಿರ್ಮಾಣ ಚಿತ್ರಕ್ಕಿದೆ. ತೀರ್ಥಹಳ್ಳಿ ತಾಲ್ಲೂಕಿನಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಿದ್ದೇವೆ. ನಲವತ್ತಕ್ಕೂ ಆಧಿಕ ಮಕ್ಕಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಮಕ್ಕಳಿಗೆ ತರಭೇತಿ ನೀಡಿ ಆನಂತರ ಚಿತ್ರೀಕರಣ ಮಾಡಲಾಯಿತು. ತೀರ್ಥಹಳ್ಳಿ ಆಸುಪಾಸಿನ ಮಕ್ಕಳೇ ಇದರಲ್ಲಿ ನಟಿಸಿದ್ದಾರೆ ಎಂದರು

ಚಿತ್ರದಲ್ಲಿ ಹಿರಿಯರಾದ ಬಾಲಾಜಿ ಮನೋಹರ್, ಸುಧಾಕರ್ ಬನ್ನಂಜೆ, ಕಿರಣ್ ನಾಯಕ್, ನಟನ ಪ್ರಶಾಂತ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. 80, 90 ರ ಕಾಲಘಟ್ಟದಲ್ಲಿ ಶಿಕ್ಷಕರ ಹಾಗೂ ಮಕ್ಕಳ ನಡುವೆ ಇದ್ದ ಸಂಬಂಧದ ಸುತ್ತಲ್ಲಿನ ಕಥಾಹಂದರವನ್ನು ಈ ಚಿತ್ರ ಹೊಂದಿದೆ. “ಪಾಠಶಾಲಾ” ಚಿತ್ರಕ್ಕೆ “ಓದು ಅಥವಾ ಓಡೋಗು” ಎಂಬ ಅಡಿಬರಹವಿದೆ. ಇದು ಬರೀ ಮಕ್ಕಳ ಚಿತ್ರವಲ್ಲ. ಎಲ್ಲಾ ವಯಸ್ಸಿನವರು ನೋಡಲೇಬೇಕಾದ ಚಿತ್ರ. ನವೆಂಬರ್ 28 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರೂ ನಮ್ಮ ಚಿತ್ರ ನೋಡಿ. ಪೆÇ್ರೀತ್ಸಾಹ ನೀಡಿ ಎಂದು ನಿರ್ದೇಶಕ ಹೆದ್ದೂರ್ ಮಂಜುನಾಥ್ ಶೆಟ್ಟಿ ತಿಳಿಸಿದ್ದಾರೆ.

ವಿಕಾಸ್ ವಸಿಷ್ಠ ಸಂಗೀತ ನಿರ್ದೇಶನ, ಜೀವನ್ ಗೌಡ ಛಾಯಾಗ್ರಹಣ ಹಾಗೂ ಉಮೇಶ್ ಆರ್ ಬಿ ಸಂಕಲನ ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin