Songs from the movie "Shivaganga" released

“ಶಿವಗಂಗ” ಚಿತ್ರದ ಹಾಡುಗಳ ಬಿಡುಗಡೆ - CineNewsKannada.com

“ಶಿವಗಂಗ” ಚಿತ್ರದ ಹಾಡುಗಳ ಬಿಡುಗಡೆ

ಕುಮಾರ್ ಸಿ.ವಿ ನಿರ್ಮಾಣ ಮಾಡುವುದರ ಜೊತೆಗೆ ನಾಯಕನಾಗೂ ನಟಿಸಿರುವ ಹಾಗೂ ಶ್ರೀಮಂಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ “ಶಿವಗಂಗ” ಚಿತ್ರ ಹಾಡುಗಳ ಬಿಡುಗಡೆಯಾಗಿದೆ.ಹರ್ಷ ಕಾಗೋಡು ಸಂಗೀತ ನೀಡಿದ್ದು ಸಿರಿ ಮ್ಯೂಸಿಕ್ ಮೂಲಕ ಹಾಡುಗಳು ಹೊರ ಬಂದಿದೆ

ನಿರ್ದೇಶಕ ಶ್ರೀಮಂಜು ಮಾತನಾಡಿ “ಶಿವಗಂಗ” ಎರಡು ಪಾತ್ರಗಳ ಹೆಸರು, ಇದೊಂದು ಪ್ರೇಮಪ್ರಧಾನ ಚಿತ್ರ. ಜೊತೆಗೆ ಸಾಮಾಜಿಕ ಸಂದೇಶವಿರುವ ಚಿತ್ರವೂ ಹೌದು. ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಕುಮಾರ್ ಸಿ.ವಿ ಚಿತ್ರದ ಕಥೆ ಒಪ್ಪಿಕೊಂಡು ನಿರ್ಮಾಣಕ್ಕೆ ಮುಂದಾದರು ಚಿತ್ರದ ನಾಯಕನಾಗೂ ನಟಿಸಿದ್ದಾರೆ. ರಿವಾನ್ಸಿ ನಾಯಕಿಯಾಗಿ ಅಭಿನಯಿಸಿರುವ ಚಿತ್ರದ ತಾರಾಬಳಗದಲ್ಲಿ ಸಂಗೀತ, ಪುಷ್ಪ, ಸುಧೀಂದ್ರ, ಶಿವಮೊಗ್ಗ ರಾಮಣ್ಣ, ನಟರಾಜು, ಭಾಗ್ಯಮ್ಮ, ನಾಗರಾಜ್ ಮುಂತಾದವರಿದ್ದಾರೆ ಎಂದು ಹೇಳಿದರು

ನಾಲ್ಕು ಹಾಡುಗಳು ಸುಮಧುರವಾಗಿದೆ. ಸುನಯ್ ಜೈನ್ ಛಾಯಾಗ್ರಹಣ ಹಾಗೂ ಗುರುಮೂರ್ತಿ ನಿರ್ಮಾಣ ನಿರ್ವಹಣೆಯಿರುವ ಚಿತ್ರದ ಚಿತ್ರೀಕರಣ ಪೂರ್ಣವಾಗಿದ್ದು, ತೆರೆಗೆ ಬರಲು ಸಿದ್ದವಾಗಿದೆ. ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಕ್ಲೈಮ್ಯಾಕ್ಸ್ ಚಿತ್ರೀಕರಣ ಮಾಡಿಲ್ಲ. ಆದರೆ ಕ್ಲೈಮ್ಯಾಕ್ಸ್ ಇದೆ. ಅದು ಏನು ಅಂತ ನೀವು ತೆರೆಯ ಮೇಲೆ ನೋಡಬೇಕು. “ಶಿವಗಂಗ” ನನ್ನ ನಿರ್ದೇಶನದ ಎಂಟನೇ ಚಿತ್ರ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪೆÇ್ರೀತ್ಸಾಹವಿರಲಿ ಎಂದರು.

ನಿರ್ಮಾಪಕ ಹಾಗೂ ನಾಯಕ ಕುಮಾರ್ ಸಿ.ವಿ ಮಾತನಾಡಿ ಮೂಲತಃ ರೈತ. ಜೊತೆಗೆ ರಿಯಲ್ ಎಸ್ಟೇಟ್ ಉದ್ಯಮಿ ಕೂಡ. ಸಿನಿಮಾ ನಟನಾಗುವುದು ನನ್ನ ಕನಸು. ಕನಸು ಈಗ ಈಡೇರಿದೆ. ಚಿತ್ರತಂಡದ ಸದಸ್ಯರ ಸಹಕಾರದಿಂದ ಒಂದೊಳ್ಳೆ ಚಿತ್ರ ಸದ್ಯದಲ್ಲೇ ನಿಮ್ಮ ಮುಂದೆ ಬರಲಿದೆ. ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದು ತಿಳಿಸಿದರು.

ನಾಯಕಿ ರಿವಾನ್ಸಿ, “ಗಂಗ” ಪಾತ್ರಧಾರಿ ಸಂಗೀತ, ನಿರ್ಮಾಣ ನಿರ್ವಾಹಕ ಗುರುಮೂರ್ತಿ, ಸಂಗೀತ ನಿರ್ದೇಶಕ ಹರ್ಷ ಕಾಗೋಡು, ಛಾಯಾಗ್ರಾಹಕ ಸುನಯ್ ಜೈನ್, ಕಲಾವಿದರಾದ ಭಾಗ್ಯಮ್ಮ, ನಟರಾಜು ಮುಂತಾದವರು ತಮ್ಮ ಪಾತ್ರಗಳ ಬಗ್ಗೆ ಮಾಹಿತಿ ಹಂಚಿಕೊಂಡರು

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin