'Spy' trailer released: Nikhil Siddharth starrer release on June 29

‘ಸ್ಪೈ’ ಟ್ರೇಲರ್ ಬಿಡುಗಡೆ : ನಿಖಿಲ್ ಸಿದ್ದಾರ್ಥ್ ನಟನೆಯ ಚಿತ್ರ ಜೂನ್ 29ಕ್ಕೆ ಬಿಡುಗಡೆ - CineNewsKannada.com

‘ಸ್ಪೈ’ ಟ್ರೇಲರ್ ಬಿಡುಗಡೆ : ನಿಖಿಲ್ ಸಿದ್ದಾರ್ಥ್ ನಟನೆಯ ಚಿತ್ರ ಜೂನ್ 29ಕ್ಕೆ ಬಿಡುಗಡೆ

ನಿಖಿಲ್ ಸಿದ್ದಾರ್ಥ್ ನಟನೆಯ ಬಹುನಿರೀಕ್ಷಿತ ಸ್ಪೈ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ 29ಕ್ಕೆ ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗಲಿದೆ. ಇದರ ಬೆನ್ನಲ್ಲೇ ಸ್ಪೈ ಟ್ರೇಲರ್ ರಿಲೀಸ್ ಆಗಿದ್ದು, ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.

ಭಾರತದ ಟಾಪ್ ಸೀಕ್ರೆಟ್ ರಹಸ್ಯಗಳು, ವಿಮಾನ ಅಪಘಾತದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಸಾವನ್ನಪ್ಪಿದ್ದಾರೆ ಎನ್ನಲಾದ ವಿಚಾರಗಳನ್ನು ಬೆನ್ನತ್ತುವ ಗೂಢಚಾರಿ ಪಾತ್ರದಲ್ಲಿ ನಿಖಿಲ್ ಸಿದ್ದಾರ್ಥ್ ಅಭಿನಯಿಸಿದ್ದು, ಐಶ್ವರ್ಯ ಮೆನನ್ ನಾಯಕಿಯಾಗಿ, ಸನ್ಯಾ ಠಾಕೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸ್ಪೆಷಲ್ ರೋಲ್ ನಲ್ಲಿ ಬಾಹುಬಲಿ ಬಲ್ಲಾಳದೇವ ರಾಣಾ ದಗ್ಗುಭಾಟಿ ಕೂಡ ಕಾಣಿಸಿಕೊಂಡಿದ್ದಾರೆ. ಅಭಿನವ್ ಗೋಮತಮ್, ಮಕರಂದ್ ದೇಶಪಾಂಡೆ, ನಿತಿನ್ ಮೆಹ್ತಾ, ರವಿವರ್ಮ, ಕೃಷ್ಣ ತೇಜ, ಪ್ರಿಶಾ ಸಿಂಗ್, ಸೋನಿಯಾ ನರೇಶ್ ಮತ್ತು ಇತರರು ತಾರಾಬಳಗದಲ್ಲಿದ್ದಾರೆ.

ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್ ಸ್ಪೈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಎವರು ಮತ್ತು ಹಿಟ್ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್ ರೆಡ್ಡಿ ED ಎಂಟರ್‌ಟೈನ್‌ಮೆಂಟ್‌ನಡಿ ಚರಣ್ ರಾಜ್ ಉಪ್ಪಲಪತಿ ಜೊತೆಗೂಡಿ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದಾರೆ. ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ‌ ಮೂಡಿ ಬರ್ತಿರುವ ಈ ಚಿತ್ರಕ್ಕೆ ರಾಜಶೇಖರ್ ರೆಡ್ಡಿ ನಿರ್ಮಾಣದ ಜೊತೆಗೆ ಕಥೆ ಕೂಡ ಬರೆದಿದ್ದು, ಗ್ಯಾರಿ ಬಿ.ಎಚ್. ನಿರ್ದೇಶನದ ಜೊತೆಗೆ ಸಂಕಲನದ ಹೊಣೆ ಹೊತ್ತಿದ್ದಾರೆ. ಜೂನಿಯನ್ ಅಮರು ಸೂರಿಸೆಟ್ಟಿ ಛಾಯಾಗ್ರಹಣ, ಶ್ರೀಚರಣ್ ಪಕಳ ಸಂಗೀತ, ಅರ್ಜುನ್ ಸೂರಿಸೆಟ್ಟಿ ಕಲಾ ನಿರ್ದೇಶನ ಸಿನಿಮಾಕ್ಕಿದೆ. ಇದೇ 29ರಂದು ಸ್ಪೈ ಸಿನಿಮಾ ವರ್ಲ್ಡ್ ವೈಡ್ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin