Srimurali to star in Jayaram Devasamudra's film

ಜಯರಾಮ್ ದೇವಸಮುದ್ರ ನಿರ್ಮಾಣದ ಚಿತ್ರಕ್ಕೆ ಶ್ರೀಮುರಳಿ ನಾಯಕ - CineNewsKannada.com

ಜಯರಾಮ್ ದೇವಸಮುದ್ರ ನಿರ್ಮಾಣದ ಚಿತ್ರಕ್ಕೆ ಶ್ರೀಮುರಳಿ ನಾಯಕ

ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸುತ್ತಿರುವ ಹಾಗೂ ಪುನೀತ್ ರುದ್ರನಾಗ್ ಚೊಚ್ಚಲ ನಿರ್ದೇಶನದಲ್ಲಿ ಮೂಡಿಬರುತ್ತಿರುವ ನೂತನ ಚಿತ್ರದ ನಾಯಕನಾಗಿ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯಿಸುತ್ತಿದ್ದಾರೆ. ಐತಿಹಾಸಿಕ ಚಿತ್ರವಾಗಿದ್ದು, ಅದ್ದೂರಿಯಾಗಿ ಅಪಾರವೆಚ್ಚದಲ್ಲಿ ಮೂಡಿಬರಲಿದೆ. 500 ವರ್ಷಗಳ ಹಿಂದಿನ ಕಥೆ ಇದಾಗಿದೆ. ನವೆಂಬರ್ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ.

ಸುರಮ್ ಮೂವೀಸ್ ಲಾಂಛನದಲ್ಲಿ ಇತ್ತೀಚೆಗೆ ತೆರೆಕಂಡ “ನಿದ್ರಾದೇವಿ ನೆಕ್ಟ್ ಡೋರ್” ಚಿತ್ರಕ್ಕೆ ತಾವು ನೀಡಿರುವ ಪೆÇ್ರೀತ್ಸಾಹಕ್ಕೆ ಧನ್ಯವಾದ. ನಮ್ಮ ಸಂಸ್ಥೆಯಿಂದ ಮತ್ತೊಂದು ನೂತನ ಚಿತ್ರ ಆರಂಭವಾಗಲಿದೆ. ಪಿರಿಯಾಡಿಕ್ ಜಾನರ್ ಈ ಚಿತ್ರದಲ್ಲಿ ಶ್ರೀಮುರಳಿ ನಾಯಕರಾಗಿ ನಟಿಸುತ್ತಿದ್ದಾರೆ. ಈವರೆಗೂ ಮಾಡಿರದ ಪಾತ್ರದಲ್ಲಿ ಶ್ರೀಮುರಳಿ ಕಾಣಿಸಿಕೊಳ್ಳಲಿದ್ದಾರೆ. ಪುನೀತ್ ರುದ್ರನಾಗ್ ಕಥೆ ಬರೆದು ನಿರ್ದೇಶಿಸುತ್ತಿದ್ದಾರೆ ಎಂದಿದ್ದಾರೆ ನಿರ್ಮಾಪಕ ಜಯರಾಮ ದೇವಸಮುದ್ರ

ಸಂಕೇತ್ ಛಾಯಾಗ್ರಹಣ, ನಿರ್ಮಲ್ ಕುಮಾರ್ ವಿ.ಎಫ್.ಎಕ್ಸ್ ಹಾಗೂ ಅಮರ್ ಕಲಾ ನಿರ್ದೇಶನವಿರುವ ನೂತನ ಚಿತ್ರಕ್ಕೆ ರಾಮು ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿದ್ದಾರೆ. ಚಿತ್ರದಲ್ಲಿ ಹೆಸರಾಂತ ಕಲಾವಿದರು ನಟಿಸಲಿದ್ದು, ಜೊತೆಗೆ ನೂತನ ಪ್ರತಿಭೆಗಳಿಗೆ ಅವಕಾಶ ನೀಡಲಾಗುತ್ತಿದೆ. ಸುರಮ್ ಮೂವೀಸ್ ನಿಂದ ಒಉತ್ತಮ ಕಂಟೆಂಟ್ ವುಳ್ಳ ಚಿತ್ರವನ್ನು ಕನ್ನಡಿಗರಿಗೆ ನೀಡಲು ಹೊರಟಿದ್ದೇವೆ ಎಂದಿದ್ಧಾರೆ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin