” ಪೌಡರ್” ಪ್ರೀ ರಿಲೀಸ್ ನಲ್ಲಿ ತಾರೆಗಳ ದಂಡು : ಆಗಸ್ಟ್ 23 ಕ್ಕೆ ಚಿತ್ರ ಬಿಡುಗಡೆ

ಬಹು ನಿರೀಕ್ಷಿತ ಹಾಸ್ಯ ಚಟಾಕಿ ಚಿತ್ರ “ಪೌಡರ್” ಮುಂದಿನ ವಾರ ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ.ಬಿಡುಗಡೆ ಮುನ್ನ ನಡೆದ ಪೌಡರ್ ಹಬ್ಬ” ಸ ಪ್ರೀ ರಿಲೀಸ್ ಕಾರ್ಯಕ್ರಮಸಲ್ಲಿ ಕನ್ನಡ ಚಿತ್ರರಂಗದ ತಾರಾ ಸಮಾಗಮವಾಗಿತ್ತು.

ಪೌಡರ್ ಹಬ್ಬದಲ್ಲಿ ಸ್ಯಾಂಡಲ್ ವುಡ್ ಸಲಗ ದುನಿಯಾ ವಿಜಯ್, ರೋರಿಂಗ್ ಸ್ಟಾರ್ ಶ್ರೀಮುರಳಿ, ದಾನಿಷ್ ಸೇಠ್, ನಟಿ ಐಂದ್ರಿತಾ ರೈ,ನಿರ್ದೇಶಕ ರೋಹಿತ್ ಪದಕಿ ಸೇರಿದಂತೆ ಪೌಡರ್ ತಾರಾಬಳಗ ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ,ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ರವಿಶಂಕರ್ ಗೌಡ ಎಲ್ಲರೂ ವೀಕ್ಷಕರ ಗಮನ ಸೆಳೆದರು. ವಾಸುಕಿ ವೈಭವ್ ಮತ್ತು ಎಂ ಸಿ ಬಿಜ್ಜುವಿನ ಸಂಗೀತ ಕಾರ್ಯಕ್ರಮ ಎಲ್ಲರನ್ನು ಆಕರ್ಷಿಸಿತು.

“ಪೌಡರ್” ಹಾಸ್ಯಭರಿತ ಚಿತ್ರವಾಗಿದ್ದು, ಇದನ್ನು ಜನಾರ್ದನ್ ಚಿಕ್ಕಣ್ಣ ನಿರ್ದೇಶಿಸಿರುತ್ತಾರೆ. ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ, ನಾಗಭೂಷಣ್, ರವಿಶಂಕರ್ ಗೌಡ ಮುಂತಾದವರು ನಟಿಸಿರುತ್ತಾರೆ.

ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದಾರೆ ಮತ್ತು ಚಿತ್ರವನ್ನು ಕಾರ್ತಿಕ್ ಗೌಡ, ಯೋಗಿ ಜಿ ರಾಜ್, ವಿಜಯ್ ಸುಬ್ರಹ್ಮಣ್ಯಂ ಕೆ.ಆರ್.ಜಿ. ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ಹಾಗೂ ಅರುನಭ್ ಕುಮಾರ್ ಟಿ.ವಿ.ಎಫ್.ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ. “ಪೌಡರ್” ಚಿತ್ರ ಇದೇ ಆಗಸ್ಟ್ 23ರಂದು ತೆರೆ ಕಾಣಲಿದೆ.
