Star couple Bhuvan Ponnanna-Harshika Poonachcha are expecting their first child

ಮೊದಲ ಮಗುವಿನ ನಿರೀಕ್ಷೆಯಲ್ಲಿ ತಾರಾದಂಪತಿ, ಭುವನ್ ಪೊನ್ನಣ್ಣ- ಹರ್ಷಿಕಾ ಪೂಣಚ್ಚ - CineNewsKannada.com

ಮೊದಲ ಮಗುವಿನ ನಿರೀಕ್ಷೆಯಲ್ಲಿ ತಾರಾದಂಪತಿ, ಭುವನ್ ಪೊನ್ನಣ್ಣ- ಹರ್ಷಿಕಾ ಪೂಣಚ್ಚ

ಸ್ಯಾಂಡಲ್ ವುಡ್‍ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ತಾಯಿಯಾಗುತ್ತಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಈ ಸಂಭ್ರಮವನ್ನು ವಿಭಿನ್ನವಾಗಿ ಫೋಟೋ ಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ.

2023, ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ಮದುವೆಯಾಗಿ ವರ್ಷದೊಳಗೆ ಸಿಹಿ ಸುದ್ದಿ ನೀಡಿದ್ದಾರೆ. ಹರ್ಷಿಕಾ ಮತ್ತು ಭುವನ್ ಪೊನ್ನಣ್ಣ ಅನೇಕ ವರ್ಷಗಳ ಸ್ನೇಹಿತರು. ಈ ಸ್ನೇಹ ಪ್ರೀತಿಗೆ ತಿರುಗಿ ಕಳೆದ ವರ್ಷ ಹಸೆಮಣೆ ಏರಿದರು.

ವಿರಾಜಪೇಟೆಯ ಅಮ್ಮತ್ತಿಯಲ್ಲಿ ಹರ್ಷಿಕಾ ಮತ್ತು ಭುವನ್ ಕೊಡವ ಶೈಲಿಯಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇಬ್ಬರ ಮದುವೆಗೆ ಸ್ಯಾಂಡಲ್‍ನ ಅನೇಕ ಗಣ್ಯರು ಕೂಡ ಸಾಕ್ಷಿಯಾಗಿದ್ದರು.ನಟ ಭುವನ್ ಹಾಗೂ ಹರ್ಷಿಕಾ ಇಬ್ಬರು ತಂದೆ ತಾಯಿ ಆಗುತ್ತಿದ್ದಾರೆ. ತಾವು ಪೋಷಕರಾಗುತ್ತಿರುವ ಖುಷಿ ವಿಚಾರವನ್ನು ವಿಭಿನ್ನ ರೀತಿಯ ಫೋಟೋ ಶೂಟ್ ಮೂಲಕ ಹಂಚಿಕೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಪ್ರೆಗ್ನೆನ್ಸಿ ಫೋಟೋ ಶೂಟ್ ಅನ್ನು ಎಲ್ಲರೂ ಹೊಸ ಹೊಸ ಕಾನ್ಸೆಪ್ಟ್ ನಲ್ಲಿ ಮಾಡಲು ಇಷ್ಟ ಪಡ್ತಾರೆ. ಹರ್ಷಿಕಾ ಮತ್ತು ಭುವನ್ ತಮ್ಮ ಕೊಡವ ಶೈಲಿ ಹಾಗೂ ಸಂಪ್ರದಾಯವನ್ನು ಬಿಟ್ಟು ಕೊಡಬಾರದು ಎನ್ನುವ ಕಾರಣಕ್ಕೆ ಕೊಡವ ಶೈಲಿಯಲ್ಲಿ ಫೋಟೋ ಶೂಟ್ ಮಾಡುವ ಮೂಲಕ ಖುಷಿಯ ವಿಚಾರವನ್ನ ಹಂಚಿಕೊಂಡಿದ್ದಾರೆ.

ತಮ್ಮ ಚೊಚ್ಚಲ ಮಗುವಿನ ಆಗಮನದ ವಿಚಾರ ತಿಳಿಸಲು ಪುರಾತನ ಕೊಡವ ಸಾಂಪ್ರದಾಯದ ಉಡುಪು, ಕೊಡಗಿನ ‘ಐನ್ ಮನೆ’ (ದೊಡ್ಡಮನೆ), ಕೋವಿ, ಉಪಕರಣಗಳು, ಜೀವನಶೈಲಿ ಎಲ್ಲವನ್ನು ಬಿಂಬಿಸುವ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸುವ ಮೂಲಕ ಸಿಹಿ ಸುದ್ದಿ ತಿಳಿಸಿದ್ದಾರೆ.

‘ಇವತ್ತಿಗೂ ನಮ್ಮಿಬ್ಬರಿಗೆ ಸದಾ ಆಶೀರ್ವಾದಿಸುತ್ತಾ ಬಂದಿದ್ದೀರಿ, ಇನ್ನು ಮುಂದೆ ನಿಮ್ಮ ಪ್ರೀತಿ ,ಆಶೀರ್ವಾದ ನಮ್ಮ ಹಾಗೂ ಈ ಪುಟ್ಟ ಜೀವದ ಮೇಲು ಇರಲಿ. ಅಕ್ಟೋಬರ್ ಗೆ ಕಾತುರದಿಂದ ಕಾಯುತ್ತಿದ್ದೇವೆ” ಎಂದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳುವ ಮೂಲಕ ಸಂಭ್ರಮಿಸಿದ್ದಾರೆ ಭುವನ್ ಮತ್ತು ಹರ್ಷಿಕಾ..

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin