Sudharani to make her entry in Prithvi Ambar-Dhanyaram's 'Chowkidar'

ಪೃಥ್ವಿ ಅಂಬಾರ್-ಧನ್ಯರಾಮ್ ಕುಮಾರ್ ‘ಚೌಕಿದಾರ್’ ಸಿನಿಮಾಗೆ ಸುಧಾರಾಣಿ ಎಂಟ್ರಿ - CineNewsKannada.com

ಪೃಥ್ವಿ ಅಂಬಾರ್-ಧನ್ಯರಾಮ್ ಕುಮಾರ್ ‘ಚೌಕಿದಾರ್’ ಸಿನಿಮಾಗೆ ಸುಧಾರಾಣಿ ಎಂಟ್ರಿ

ಚೌಕಿದಾರ್ ಸಿನಿಮಾ ತಾರಾಬಳಗದ ಮೂಲಕ ಮತ್ತೆ ಸುದ್ದಿಯಲ್ಲಿದೆ. ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ದೊಡ್ಮನೆ ಹುಡ್ಗಿ ಧನ್ಯಾ ರಾಮ್ ಕುಮಾರ್ ಜೋಡಿಯಾಗಿ ನಟಿಸುತ್ತಿರುವ ಈ ಚಿತ್ರದಲ್ಲಿ ಡೈಲಾಗ್ ಕಿಂಗ್ ಸಾಯಿಕುಮಾರ್, ಲಕ್ಷ್ಮೀ ಮಹಾಲಕ್ಷ್ಮೀ ಸಿನಿಮಾ ಖ್ಯಾತಿಯ ಹಿರಿಯ ನಟಿ ಶ್ವೇತಾ, ಧರ್ಮ ಸೇರಿದಂತೆ ಮತ್ತಿತರರು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದೀಗ ಚೌಕಿದಾರ್ ಬಳಗಕ್ಕೆ ಮತ್ತೊಬ್ಬ ಹಿರಿಯ ನಟಿ ಎಂಟ್ರಿ ಕೊಟ್ಟಿದ್ದಾರೆ.

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಕಲಾವಿದೆಯಾಗಿರುವ ಸುಧಾರಾಣಿ ಚೌಕಿದಾರ್ ಚಿತ್ರತಂಡ ಸೇರಿಕೊಂಡಿದ್ದಾರೆ. ಆದರೆ ಸುಧಾರಾಣಿ ಪಾತ್ರದ ಬಗ್ಗೆ ಚಿತ್ರತಂಡ ಯಾವುದೇ ಗಟ್ಟುರಟ್ಟು ಮಾಡದೇ ಕುತೂಹಲ ಹೆಚ್ಚಿಸಿದೆ. ಒಳ್ಳೊಳ್ಳೆ ಕಥೆಗಳನ್ನು ಹೆಕ್ಕಿ ತರುವ ಚಂದ್ರಶೇಖರ್ ಬಂಡಿಯಪ್ಪ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಪೃಥ್ವಿರಾಜ್ ಧಘಾರಿ ಸಹ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಪ್ರೀತಿ ಪ್ರೇಮಕಥೆಯಲ್ಲಿ ಮಿಂಚುತ್ತಿದ್ದ ಪೃಥ್ವಿ ಅಂಬಾರ್ ಚೌಕಿದಾರ್ ಸಿನಿಮಾಗಾಗಿ ರಗಡ್ ಅವತಾರ ತಾಳಿದಿದ್ದಾರೆ.

‘ಚೌಕಿದಾರ್’ ಚಿತ್ರಕ್ಕೆ ಸಚಿನ್ ಬಸ್ರೂರು ಅವರು ಸಂಗೀತ ಕೊಡುತ್ತಿದ್ದಾರೆ. ಸಿದ್ದು ಕಂಚನಹಳ್ಳಿ ಛಾಯಾಗ್ರಹಣ ಮಾಡುತ್ತಿದ್ದು, ಜ್ಞಾನೇಶ್ವ್ ಬಿ ಮಠದ್ ಸಂಕಲನ, ರವಿ ವರ್ಮಾ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಪ್ರಮೋದ್ ಮರವಂತೆ, ಸಂತೋಷ್ ನಾಯಕ್, ಡಾ. ವಿ ನಾಗೇಂದ್ರ ಪ್ರಸಾದ್ ಹಾಡುಗಳನ್ನು ಬರೆಯುತ್ತಿದ್ದಾರೆ.

ಬಹುಭಾಷೆಯಲ್ಲಿ ಮೂಡಿಬರುತ್ತಿರುವ ಈ ಸಿನಿಮಾಗೆ ಶಿಕ್ಷಣ ತಜ್ಞರಾದ ಕಲ್ಲಹಳ್ಳಿ ಚಂದ್ರಶೇಖರ್ ಅವರು ವಿಎಸ್ ಎಂಟರ್‍ಟೇನ್‍ಮೆಂಟ್ ಮೂಲಕ ಹಣ ಹಾಕುತ್ತಿದ್ದು, ವಿದ್ಯಾದೇವಿ ಸಹ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin