Sunami Kitty starrer “Kora” to hit screens in the first week of January

ಸುನಾಮಿ ಕಿಟ್ಟಿ ನಟನೆಯ “ಕೋರ” ಜನವರಿ ಮೊದಲವಾರ ತೆರೆಗೆ - CineNewsKannada.com

ಸುನಾಮಿ ಕಿಟ್ಟಿ ನಟನೆಯ “ಕೋರ” ಜನವರಿ ಮೊದಲವಾರ ತೆರೆಗೆ

ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ “ಕೋರ” ಚಿತ್ರದ “ಒಪ್ಪಿಕೊಂಡಳು” ಹಾಡು ಇತ್ತೀಚಿಗೆ ಬಿಡುಗಡೆಯಾಗಿ, 10 ಲಕ್ಷಕ್ಕೂ ಅಧಿಕ ವೀಕ್ಷಣೆಯಾಗಿ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗಲಿದೆ. ಸುನಾಮಿ ಕಿಟ್ಟಿ ಅಭಿನಯದ, ಪಿ.ಮೂರ್ತಿ ನಿರ್ಮಾಣ ಹಾಗೂ ಒರಟ ಶ್ರೀ ನಿರ್ದೇಶನವಿದೆ.ಹಾಡು ಗೆದ್ದಿರುವ ಖುಷಿಂ ಹಂಚಿಕೊಳ್ಳಲು ಹಾಗೂ ಚಿತ್ರದ ಬಿಡುಗಡೆ ವಿಷಯ ತಿಳಿಸಲು ಚಿತ್ರತಂಡ ಮಾದ್ಯಮದ ಮುಂದೆ ಹಾಜರಾಗಿತ್ತು.

ಈ ವೇಳೆ ಮಾತಿಗಿಳಿದ ನಿರ್ಮಾಪಕ ಪಿ. ಮೂರ್ತಿ, “ಕೋರ” ಚಿತ್ರಕ್ಕಾಗಿ ರೇವಣ್ಣ ನಾಯಕ್ ಬರೆದು, ಹೇಮಂತ್ ಕುಮಾರ್ ಸಂಗೀತ ನೀಡಿರುವ “ಒಪ್ಪಿಕೊಂಡಳು” ಹಾಡು ಇತ್ತೀಚಿಗೆ ರಬಕವಿಯಲ್ಲಿ ಸಹಸ್ರಾರು ಜನರ ಸಮ್ಮುಖದಲ್ಲಿ ಬಿಡುಗಡೆಯಾಯಿತು. ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ ಎಂದರು

“ಕೋರ” ಬುಡಕಟ್ಟು ಜನಾಂಗದ ಹೆಸರು. ಸುನಾಮಿ ಕಿಟ್ಟಿ ಸೇರಿದಂತೆ ಎಲ್ಲಾ ಕಲಾವಿದರು ಹಾಗೂ ನಿರ್ದೇಶಕ ಒರಟ ಶ್ರೀ ಸೇರಿದಂತೆ ತಂತ್ರಜ್ಞರು ಚಿತ್ರಕ್ಕಾಗಿ ಬಹಳ ಕಷ್ಟಪಟ್ಟಿದ್ದಾರೆ. ಚಿಕ್ಕಮಗಳೂರು, ಹೊರನಾಡು, ಸಕಲೇಶಪುರದ ಸುತ್ತಲ್ಲಿನ ಅರಣ್ಯ ಪ್ರದೇಶದಲ್ಲಿ. ಸ್ಥಳಗಳಲ್ಲಿ ಅನುಕೂಲತೆ ಕಡಿಮೆ. ಅಂತಹ ಸ್ಥಳಗಳಲ್ಲೂ ಯಾವುದೇ ಅಡೆತಡೆ ಇಲ್ಲದೆ ಚಿತ್ರೀಕರಣವಾಗಲು ತಂಡದ ಸಹಕಾರವೇ ಕಾರಣ. ಜನವರಿ ಮೊದಲ ವಾರದಲ್ಲಿ ವಿತ್ರ ಬಿಡುಗಡೆ ಮಾಡುವ ಸಿದ್ದತೆ ನಡೆಯುತ್ತಿದೆ. ಈಗಾಗಾಲೇ ಚಿತ್ರದ ತೆಲುಗು, ತಮಿಳು ರಿಮೇಕ್ ರೈಟ್ಸ್ ಕೂಡ ಮಾರಾಟವಾಗಿದೆ ಎಂದು ತಿಳಿಸಿದರು.

ನಿರ್ದೇಶಕ ಒರಟ ಶ್ರೀ ಮಾತನಾಡಿ ಚಿತ್ರದಲ್ಲಿ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ಕೊಟ್ಟ ದುಡ್ಡಿಗೆ ಮೋಸ ಮಾಡದ ಚಿತ್ರವಿದು. ಸುನಾಮಿ ಕಿಟ್ಟಿ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಚರಿಶ್ಮಾ “ಕೋರ” ಚಿತ್ರದ ನಾಯಕಿ. ನಿರ್ಮಾಪಕ ಪಿ. ಮೂರ್ತಿ ಖಳನಾಯಕನಾಗಿ ಅಭಿನಯಿಸಿದ್ದಾರೆ ಎಲ್ಲರ ಸಹಕಾರವಿರಲಿ ಎಂದರು

ನಾಯಕ ಸುನಾಮಿ ಕಿಟ್ಟಿ ಮಾತನಾಡಿ ನಾಯಕನನ್ನಾಗಿ ಮಾಡಿದ ಪಿ.ಮೂರ್ತಿ ಅವರಿಗೆ ಹಾಗೂ ನನಗೆ ಅಭಿನಯ ಹೇಳಿಕೊಟ್ಟು ಚಿತ್ರದಲ್ಲಿ ನಟಿಸಲು ಸಿದ್ದತೆ ಮಾಡಿಸಿದ ನಿರ್ದೇಶಕ ಶ್ರೀ ಅವರಿಗೆ ಧನ್ಯವಾದ.ತಂಡದ ಶ್ರಮದಿಂದ “ಕೋರ” ಒಂದೊಳ್ಳೆ ಚಿತ್ರವಾಗಿ ನಿಮ್ಮ ಮುಂದೆ ಬರುತ್ತಿದೆ ನೋಡಿ ಹಾರೈಸಿ ಎಂದು ತಿಳಿಸಿದರು

ಸಹ ನಿರ್ಮಾಪಕ ಚೆಲುವರಾಜು, ನಾಯಕಿ ಚರಿಷ್ಮಾ, ನಟರಾದ ಎಂ.ಕೆ.ಮಠ, ಯತಿರಾಜ್, ಗಣೇಶ್ ರಾವ್, ನಟಿ ಸೌಜನ್ಯ, ಸಂಗೀತ ನಿರ್ದೇಶಕ ಹೇಮಂತ್ ಕುಮಾರ್, ಛಾಯಾಗ್ರಾಹಕ ಸೆಲ್ವಂ, ಸಾಹಿತಿ ರೇವಣ್ಣ ನಾಯಕ್, ಸಂಕಲನಕಾರ ಕೆ.ಗಿರೀಶ್ ಕುಮಾರ್ ಹಾಗೂ ತೆಲುಗು ವಿತರಕ ಬಾಲಾಜಿ “ಕೋರ” ಚಿತ್ರದ ಕುರಿತು ಮಾತನಾಡಿದರು. ಅತಿಥಿಗಳಾಗಿ ಆಗಮಿಸಿದ್ದ ನಟ ಒರಟ ಪ್ರಶಾಂತ್ ಚಿತ್ರತಂಡಕ್ಕೆ ಶುಭ ಕೋರಿದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin