"Suri Loves Sandhya" is all set for release: Curiosity is increasing

“ಸೂರಿ ಲವ್ಸ್ ಸಂಧ್ಯಾ” ಚಿತ್ರ ಬಿಡುಗಡೆಗೆ ಸಜ್ಜು: ಕುತೂಹಲ ಹೆಚ್ಚಳ - CineNewsKannada.com

“ಸೂರಿ ಲವ್ಸ್ ಸಂಧ್ಯಾ” ಚಿತ್ರ ಬಿಡುಗಡೆಗೆ ಸಜ್ಜು: ಕುತೂಹಲ ಹೆಚ್ಚಳ

ಕನ್ನಡ ಚಿತ್ರರಂಗ ಕಂಡ ಅಪ್ರತಿಮ ನಟ, ನಿರ್ದೇಶಕ ಕಾಶೀನಾಥ್ ಅವರ ಪುತ್ರ ಅಭಿಮನ್ಯು ಕಾಶೀನಾಥ್ ನಟನೆಯ “ಸೂರಿ ಲವ್ಸ್ ಸಂಧ್ಯಾ” ಚಿತ್ರ ಇದೇ ವಾರ ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ. ಚಿತ್ರದ ಕಥಾವಸ್ತು ಸೇರಿದಂತೆ ಇನ್ನಿತರೆ ವಿಷಯಗಳಿಂದ ಚಿತ್ರ ಕುತೂಹಲ ಕೆರಳಿಸಿದೆ.

ಅಭಿಮನ್ಯುಗೆ ಅಪೂರ್ವ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ ನಟ, ನಿರ್ದೆಶಕ ಉಪೇಂದ್ರ ಚಿತ್ರ ನೋಡಿದ್ದೇನೆ, ಅದ್ಬುತವಾಗಿ ಮೂಡಿ ಬಂದಿದೆ ಎಂದು ಗುಣಗಾನ ಮಾಡಿರುವುದು ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲವನ್ನು ಸಿನಿ ಪ್ರೇಕ್ಷಕರಲ್ಲಿ ಹೆಚ್ಚು ಮಾಡಿದೆ.

ನಟ ಉಪೇಂದ್ರ ಅವರು ಚಿತ್ರದ ಕ್ಲೈಮ್ಯಾಕ್ಸ್ ನೋಡಬೇಕು. ಹೃದಯ ಕಿತ್ತುಕೊಂಡು ಬರುವಷ್ಟು ಫೀಲ್ ಆಗುತ್ತದೆ. ಕೊನೆಯ 20 ನಿಮಿಷಗಳು ನಾಯಕ-ನಾಯಕಿ ಇಬ್ಬರೂ ಬಹಳ ಚೆನ್ನಾಗಿ ನಟಿಸಿದ್ದಾರೆ. ಛಾಯಾಗ್ರಹಣ, ಮೇಕಿಂಗ್ ಎಲ್ಲವೂ ಚೆನ್ನಾಗಿದೆ. ಈ ಚಿತ್ರವನ್ನು ಎಲ್ಲಾ ಭಾಷೆಗಳಲ್ಲೂ ಬಿಡುಗಡೆ ಮಾಡಿ. ಏಕೆಂದರೆ, ಇಂಥ ಸಿನಿಮಾಗಳನ್ನು ಪ್ರೋತ್ಸಾಹಿಸಬೇಕು’ ಎಂದು ಹೇಳಿದ್ದಾರೆ. ಇದು ಚಿತ್ರತಂಡಕ್ಕೆ ಮತ್ತಷ್ಟು ಆನೆ ಬಲ ಬಂದಂತಾಗಿದೆ,

ಸೂರಿ ಲವ್ಸ್ ಸಂಧ್ಯಾ' ಚಿತ್ರಕ್ಕೆ ಯಾದವ್ ರಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು,ಸೂರಿ ಲವ್ಸ್ ಸಂಧ್ಯಾ’ ಚಿತ್ರಕ್ಕೆ ಯಾದವ್ ರಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ಚಿತ್ರದಲ್ಲಿ ಅಭಿಮನ್ಯು ಕಾಶೀನನಾಥ್, ಅಪೂರ್ವ, ಪ್ರತಾಪ್ ನಾರಾಯಣ್, ಪ್ರದೀಪ್ ಕಾಬ್ರಾ, `ಭಜರಂಗಿ’ ಪ್ರಸನ್ನ, ಖುಷಿ ಆಚಾರ್ ಮುಂತಾದವರು ನಟಿಸಿದ್ದಾರೆ. ಎಸ್.ಎನ್. ಅರುಣಗಿರಿ ಸಂಗೀತ ಸಂಯೋಜಿಸಿದ್ದು, ಶ್ರೀನಿವಾಸ್ ಛಾಯಾಗ್ರಹಣವಿದೆ.

ನಾಯಕ ಅಭಿಮನ್ಯೂ ಕೂಡ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಒಳ್ಳೆಯ ಕಥೆ ಇದೆ. ಚಿತ್ರ ಎಲ್ಲರಿಗೂ ಇಷ್ಟವಾಗಲಿದೆ ಎಂದು ಹೇಳಿದ್ಧಾರೆ

ನಾಯಕಿ ಅಪೂರ್ವ ಮಾತನಾಡಿ ಚಿತ್ರ ಉತ್ತಮವಾಗಿ ಮೂಡಿ ಬಂದಿದೆ, ಪ್ರೇಕ್ಷಕರಿಗೆ ನಿರುತ್ಸಾಹ ಮೂಡಿಸುವುದಿಲ್ಲ ಎಂದಿದ್ದಾರೆ

ನಿರ್ಮಾಪಕ ಕೆ.ಟಿ. ಮಂಜುನಾಥ್‍ಚಿತ್ರರಂಗದಲ್ಲಿ ಉಳಿಯಬೇಕು ಮತ್ತು ಬೆಳೆಯಬೇಕು ಎಂದರೆ ಎಲ್ಲರ ಸಹಕಾರ, ಪ್ರೋತ್ಸಾಹ ಬೇಕು’ ಎಂದು ತಿಳಿಸಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin