"Sutradaari" gets U/A certificate: Film to release on May 9th
“ಸೂತ್ರದಾರಿ” ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ: ಮೇ 9 ರಂದು ಚಿತ್ರ ಬಿಡುಗಡೆ
ನಟ, ನಿರ್ಮಾಪಕ ನವರಸನ್ ಅವರ ನಿರ್ಮಾಣದ ಐದನೇ ಚಿತ್ರ “ಸೂತ್ರದಾರಿ” ಚಿತ್ರ ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದ್ದು ಮೇ ತಿಂಗಳ 9 ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ.

ಚಂದನ್ ಶೆಟ್ಟಿ ಅವರೆ ಸಂಗೀತ ನೀಡಿರುವ ಚಿತ್ರದ ಹಾಡುಗಳು ಈಗಾಗಲೇ ಟ್ರೆಂಡಿಂಗ್ ನಲ್ಲಿದೆ. “ಡ್ಯಾಶ್” ಸಾಂಗ್ ಅಂತೂ ನಿರೀಕ್ಷೆಗೂ ಮೀರಿ ಜನಪ್ರಿಯವಾಗಿದೆ. ಟೀಸರ್ ಹಾಗೂ ಹಾಡುಗಳ ಮೂಲಕ ಮೋಡಿ ಮಾಡಿರುವ “ಸೂತ್ರಧಾರಿ” ಚಿತ್ರದ ಬಿಡುಗಡೆಗೆ ಚಂದನ್ ಶೆಟ್ಟಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವನ್ನು ಕಿರಣ್ ಕುಮಾರ್ ನಿರ್ದೇಶಿಸಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಸತೀಶ್ ಚಂದ್ರಯ್ಯ ಸಂಕಲನ ಹಾಗೂ ಮೋಹನ್ ಅವರ ನೃತ್ಯ ನಿರ್ದೇಶನ “ಸೂತ್ರಧಾರಿ” ಚಿತ್ರಕ್ಕಿದೆ.

ಚಂದನ್ ಶೆಟ್ಟಿ ಅವರಿಗೆ ನಾಯಕಿಯಾಗಿ ಅಪೂರ್ವ ನಟಿಸಿದ್ದಾರೆ. ಸಂಜನಾ ಆನಂದ್ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ತಬಲನಾಣಿ, ಪ್ರಶಾಂತ್ ನಟನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

