Talented actor Bhargav Krishna's 'Om Shivam' will hit the screens in August

ಪ್ರತಿಭಾನ್ವಿತ ನಟ ಭಾರ್ಗವ್ ಕೃಷ್ಣ ನಟನೆಯ “ ಓಂ ಶಿವಂ” ಆಗಸ್ಟ್ ನಲ್ಲಿ ತೆರೆಗೆ - CineNewsKannada.com

ಪ್ರತಿಭಾನ್ವಿತ ನಟ ಭಾರ್ಗವ್ ಕೃಷ್ಣ ನಟನೆಯ “ ಓಂ ಶಿವಂ” ಆಗಸ್ಟ್ ನಲ್ಲಿ ತೆರೆಗೆ

ಯುವ ಪ್ರತಿಭೆ ಭಾರ್ಗವ್ ಕೃಷ್ಣ ಅಭಿನಯದ “ ಓಂ ಶಿವಂ” ಚಿತ್ರದ ಲಿರಿಕಲ್ ಹಾಡು ಬಿಡುಗಡೆಯಾಗಿದ್ದು ಚಿತ್ರ ಆಗಸ್ಟ್ ತಿಂಗಳಲ್ಲಿ ತೆರೆಗೆ ಬರಲು ಸಜ್ಜಾಗಿದೆ.

ನಟ ಭಾರ್ಗವ್ ಕೃಷ್ಣ ಅಭಿನಯದ ಚೊಚ್ಚಲ ಚಿತ್ರ “ಓಂ ಶಿವಂ” ನ ಲಿರಿಕಲ್ ಹಾಡನ್ನು ಭಾರ್ಗವ್ ಅವರ ಅಜ್ಜಿ, ತಾತಾ ಈ ಹಾಡನ್ನು ಬಿಡುಗಡೆ ಮಾಡಿ ಮೊಮ್ಮಗನ ಮೊದಲ ಚಿತ್ರಕ್ಕೆ ಶುಭ ಹಾರೈಸಿದರು. ಭಾರ್ಗವ್ ಕೃಷ್ಣ ಅವರ ತಂದೆ ಕೃಷ್ಣ ಕೆ.ಎನ್ ಈ ಚಿತ ನಿರ್ಮಾಣ ಮಾಡಿದ್ದಾರೆ.

ಈ ವೇಳೆ ಮಾತಿಗಿಳಿದ ನಿರ್ಮಾಪಕ ಕೃಷ್ಣ ಅವರು ಆಲ್ವಿನ್ ಅವರು ಒಳ್ಳೆಯ ಕಥೆ ಸಿದ್ದ ಮಾಡಿಕೊಂಡು ಬಂದು ಕಥೆ ಹೇಳಿದರು. ನಾನು ಕಥೆ ಚೆನ್ನಾಗಿದೆ. ನಾಯಕನನ್ನು ಹುಡುಕಿ. ಚಿತ್ರ ಆರಂಭಿಸೋಣ ಎಂದೆ. ಅದಕ್ಕೆ ಆಲ್ವಿನ್ ಅವರು ನಿಮ್ಮ ಮಗ ಭಾರ್ಗವ್, ನನ್ನ ಕಥೆ ಗೆ ಸರಿ ಹೊಂದುತ್ತಾರೆ. ಅವರೆ ನಮ್ಮ ಚಿತ್ರದ ನಾಯಕ ಎಂದರು. ಈಗ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಮುಂದಿನ ತಿಂಗಳಲ್ಲಿ ಬಿಡುಗಡೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದರು

ನಿರ್ದೇಶಕ ಆಲ್ವಿನ್ ಮಾತನಾಡಿ “ರಾಜ್ ಬಹದ್ದೂರ್” ಚಿತ್ರದ ನಂತರ ನಾನು ನಿರ್ದೇಶಿಸಿರುವ ಎರಡನೇ ಚಿತ್ರ ಇದು
“ಓಂ ಶಿವಂ” ಲವ್ ಜಾನರ್ ನ ಚಿತ್ರ. ಆದರೆ ಚಿತ್ರದಲ್ಲಿ ಬರೀ ಲವ್ ಮಾತ್ರ ಇಲ್ಲ. ಪ್ರೇಕ್ಷಕರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ನಮ್ಮ ಚಿತ್ರಕ್ಕೆ ಇಪ್ಪತ್ತೊಂದು ವಯಸ್ಸಿನ ನಾಯಕ ಬೇಕಾಗಿತ್ತು. ಭಾರ್ಗವ್ ಅವರಿಗೂ ಅಷ್ಟೇ ವಯಸ್ಸು. ಹಾಗಾಗಿ ಅವರನ್ನೇ ಈ ಚಿತ್ರದ ನಾಯಕನನ್ನಾಗಿ ಆಯ್ಕೆ ಮಾಡಲಾಯಿತು. ಮೊದಲ ಪ್ರಯತ್ನದಲ್ಲೇ ಭಾರ್ಗವ್ ಚೆನ್ನಾಗಿ ಅಭಿನಯಿಸಿದ್ದಾರೆ. ನಾಲ್ಕು ಹಾಡುಗಳು, ಅದ್ದೂರಿ ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ. ಇಡೀ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಮ್ಮ ಚಿತ್ರಕ್ಕೆ ನಿಮ್ಮ ಪೆÇ್ರೀತ್ಸಾಹವಿರಲಿ ಎಂದರು.

ನಾಯಕ ಭಾರ್ಗವ್ ಕೃಷ್ಣ ಮಾತನಾಡಿ ಮೊದಲು ನಾನು ನನ್ನ ತಂದೆಗೆ ಧನ್ಯವಾದ ತಿಳಿಸುತ್ತೇನೆ. ಆಲ್ವಿನ್ ಅವರು ಉತ್ತಮ ಕಥೆ ಮಾಡಿಕೊಂಡಿದ್ದಾರೆ. ಮೊದಲ ಚಿತ್ರವಾಗಿರುವುದರಿಂದ ಸಾಕಷ್ಟು ತಯಾರಿ ಮಾಡಿಕೊಂಡು ಬಂದಿರುವುದಾಗಿ ತಿಳಿಸಿದರು.

ನಾಯಕಿ ವಿರಾಣಿಕ ಶೆಟ್ಟಿ ಅಂಜಲಿ ನನ್ನ ಪಾತ್ರದ ಹೆಸರು ಎಂದು ಹೇಳಿದರು.

ನಟರಾದ ಕಾಕ್ರೋಜ್ ಸುಧೀ, ಯಶ್ ಶೆಟ್ಟಿ, ವರ್ಧನ್, ನಟಿಯರಾದ ಅಪೂರ್ವ, ಲಕ್ಷ್ಮೀ ಸಿದ್ದಯ್ಯ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.

ಸಂಗೀತ ನಿರ್ದೇಶಕ ವಿಜಯ್ ಯಾಡ್ರ್ಲೆ, ಛಾಯಾಗ್ರಾಹಕ ವೀರೇಶ್ ಹಾಗೂ ಸಾಹಸ ನಿರ್ದೇಶಕ ಕೌರವ ವೆಂಕಟೇಶ್ ಸೇರಿದಂತೆ ಅನೇಕ ತಂತ್ರಜ್ಞರು ತಮ್ಮ ಕಾರ್ಯದ ಬಗ್ಗೆ ಮಾಹಿತಿ ನೀಡಿದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin