Tamil actor Vijay Sethupathi SaaTamil actor Vijay Sethupathi released the teaser of the introduction of the heroine of the film 'Ondu sarala premakate"

`ಒಂದು ಸರಳ ಪ್ರೇಮಕಥೆ’ ಚಿತ್ರದ ನಾಯಕಿ ಪಾತ್ರ ಪರಿಚಯದ ಟೀಸರ್ ಬಿಡುಗಡೆ ತಮಿಳು ನಟ ವಿಜಯ್ ಸೇತುಪತಿ - CineNewsKannada.com

`ಒಂದು ಸರಳ ಪ್ರೇಮಕಥೆ’ ಚಿತ್ರದ ನಾಯಕಿ ಪಾತ್ರ ಪರಿಚಯದ ಟೀಸರ್ ಬಿಡುಗಡೆ ತಮಿಳು ನಟ ವಿಜಯ್ ಸೇತುಪತಿ

ದೊಡ್ಮನೆ ಕುಟುಂಬದ ಕುಡಿ ವಿನಯ್ ರಾಜ್ ಕುಮಾರ್ ನಾಯಕರಾಗಿರುವ `ಒಂದು ಸರಳ ಪ್ರೇಮಕಥೆ’ ಚಿತ್ರದಲ್ಲಿ ನಾಯಕಿ ಸ್ವಾತಿಷ್ಠ ಕೃಷ್ಣನ್ ಪಾತ್ರದ ಪರಿಚಯ ಮಾಡುವ ಟೀಸರ್ ಅನ್ನು ತಮಿಳು ಚಿತ್ರರಂಗದ ಬಹುಬೇಡಿಕೆಯ ನಟ ವಿಜಯ್ ಸೇತುಪತಿ ಅನಾವರಣ ಮಾಡುವ ಮೂಲಕ ಶುಭ ಹಾರೈಸಿದ್ದಾರೆ

ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಸಂಗಮದ `ಒಂದು ಸರಳ ಪ್ರೇಮಕಥೆ’ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಫೆಬ್ರವರಿ 8ಕ್ಕೆ ಈ ಚಿತ್ರ ರಾಜ್ಯಾದ್ಯಂತ ತೆರೆಗೆ ಬರಲಿದೆ. ಈಗಾಗಲೇ ಒಂದು ಸರಳ ಪ್ರೇಮಕಥೆ ಬಳಗ ಪ್ರಚಾರದ ಪಡಸಾಲೆಗೆ ಧುಮುಕಿದೆ. ಈ ಹಿನ್ನೆಲೆಯಲ್ಲಿ ನಾಯಕಿ ಸ್ವಾತಿಷ್ಠ ಕೃಷ್ಣನ್ ಕ್ಯಾರೆಕ್ಟರ್ ಟೀಸರ್ ಬಿಡುಗಡೆಯಾಗಿದೆ.

ಸ್ವಾತಿಷ್ಠ ಕೃಷ್ಣನ್ ಅನುರಾಗ ಎಂಬ ಪತ್ರಕರ್ತೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯಾರಿಗೂ ಯಾವುದಕ್ಕೂ ಜಗ್ಗದೇ ಧೈರ್ಯವಾಗಿ ಮುನ್ನುಗ್ಗುವಾಗ ಪತ್ರಕರ್ತೆ ಆಗಿ ಪ್ರತ್ಯಕ್ಷರಾಗಿದ್ದಾರೆ. ಕಮಲ್ ಹಾಸನ್ ನಟನೆಯ ವಿಕ್ರಮ್ ಸೇರಿದಂತೆ ಒಂದಷ್ಟು ತಮಿಳು ಸಿನಿಮಾದಲ್ಲಿ ನಟಿಸಿರುವ ಸ್ವಾತಿಷ್ಠಗೆ ಒಂದು ಸರಳ ಪ್ರೇಮಕಥೆ ಚೊಚ್ಚಲ ಕನ್ನಡ ಸಿನಿಮಾವಾಗಿದೆ.

ಇದೇ ಮೊದಲ ಬಾರಿಗೆ ದೊಡ್ಮನೆಯ ಹೀರೋ ವಿನಯ್ ರಾಜ್ ಕುಮಾರ್ ಗೆ ಸಿಂಪಲ್ ಸುನಿ ನಿರ್ದೇಶನ ಮಾಡಿದ್ದಾರೆ. ವಿನಯ್ ನಾಯಕನಾಗಿ ನಟಿಸಿರುವ ಚಿತ್ರಕ್ಕೆ ಸ್ವಾತಿಷ್ಠ ಕೃಷ್ಣನ್, ರಾಧಾ ಕೃಷ್ಣ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ಎಂಬ ಇಬ್ಬರು ಚೆಲುವೆಯರ ನಾಯಕಿಯಾರಾಗಿ ನಟಿಸಿದ್ದಾರೆ..

ರಾಘವೇಂದ್ರ ರಾಜ್ ಕುಮಾರ್ ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದವರು ತಾರಾಬಳಗದಲ್ಲಿದ್ದಾರೆ. ಆದಿ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ನೀಡುತ್ತಿದ್ದು, ಕಾರ್ತಿಕ್ ಕ್ಯಾಮೆರಾ ಹಿಡಿದಿದ್ದಾರೆ. ಅಂದಹಾಗೇ ಈ ಸಿನಿಮಾಗೆ ಮೈಸೂರು ರಮೇಶ್ ನಿರ್ಮಾಣ ಮಾಡಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin