“ತಮ್ಮ ಸುಖಾಗಮನ ಬಯಸುವ” ಗೋಲ್ಡನ್ ಸ್ಟಾರ್ ಗಣೇಶ್ ಜೊತೆಯಾದ ಜಗನ್ನಾಥ
ಕನ್ನಡದಲ್ಲಿ ಇತ್ತೀಚೆಗೆ ಆಂಗ್ಲಮಯ ಶೀರ್ಷಿಕೆಗಳು ಹೆಚ್ಚಾಗಿ ಬರುತ್ತಿರುವ ಕಾಲಘಟ್ಟದಲ್ಲಿ ವಿಭಿನ್ನ ಶೀರ್ಷಿಕೆಯ ಮೂಲಕ ಗಮನ ಸೆಳೆದವರು ರಾಮೇನಹಳ್ಳಿ ಜಗನ್ನಾಥ. “ಹೊಂದಿಸಿ ಬರೆಯಿರಿ” ಎಂದುಕೊಂಡೇ ಗಾಂಧಿನಗರಕ್ಕೆ ಹೊಂದಿಕೊಂಡ ಬಳಿಕ “ತೀರ್ಥ ರೂಪು ತಂದೆಯವರಿಗೆ” ಚಿತ್ರದ ಮೂಲಕ ಚಿತ್ರರಂಗದ ಮಂದಿಗೆ ಇನ್ನಷ್ಟು ಹತ್ತಿರವಾದವರು. ಇದೀಗ ಗೋಲ್ಡನ್ ಸ್ಟಾರ್ ಜೊತೆ ಇಟ್ಟುಕೊಂಡು “ತಮ್ಮ ಸುಖಾಗಮನ ಬಯಸುವ” ಚಿತ್ರದ ಮೂಲಕ ಮತ್ತೊಮ್ಮೆ ಬಣ್ಣದ ಜಗತ್ತಿನಲ್ಲಿ ಮೋಡಿ ಮಾಡಲು ಮುಂದಾಗಿದ್ದಾರೆ.

ಚಿನ್ನದ ಹುಡುಗ, ನಟ ಗಣೇಶ್ ಅಭಿನಯದ ಚಿತ್ರದ ಹೊಸ ಚಿತ್ರ “ತಮ್ಮ ಸುಖಾಗಮನ ಬಯಸುವ” ಮೂಲಕ ಮತ್ತೊಮ್ಮೆ ವಿಭಿನ್ನ ಶೀರ್ಷಿಕೆ ಮತ್ತು ಕಥಾವಸ್ತುವಿನೊಂದಿಗೆ ಜನರ ಮುಂದೆ ಬರಲು ಮುಂದಾಗಿದ್ದಾರೆ. ಮಹಾಶಿವರಾತ್ರಿ ಹಬ್ಬದ ದಿನ ಚಿತ್ರದ ಮುಹೂರ್ತ ನಡೆದಿದೆ,
ವಿಜಯ್ ಲೋಹಿತ್ ನಿರ್ಮಾಣ ಹಾಗು ಸತೀಶ್ ಎಚ್ ಗೌಡ ಸಹ ನಿರ್ಮಾಣದ “ತಮ್ಮ ಸುಖಾಗಮನ ಬಯಸುವ” ಚಿತ್ರಕ್ಕೆ ನಟ ಗಣೇಶ್ ಪತ್ನಿ ಶಿಲ್ಪ ಗಣೇಶ್ಆರಂಭ ಫಲಕ ತೋರುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತಿಗಿಳಿದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ, “ಮುಂಗಾರು ಮಳೆ” ತೆರೆ ಕಂಡಾಗ ಎಂಜಿನಿಯರಿಂಗ್ ವಿದ್ಯಾರ್ಥಿ. ಆ ಸಿನಿಮಾವನ್ನು ಎಷ್ಟು ಬಾರಿ ನೋಡಿದ್ದೇನೊ ಲೆಕ್ಕ ಇಲ್ಲ. ಗಣೇಶ್ ಜೊತೆಗೆ ಸಿನಿಮಾ ಮಾಡುತ್ತಿರುವುದು ಬಹಳ ಖುಷಿಯಾಗಿದೆ. ಗಣೇಶ್ ಅವರ ಇಪ್ಪತ್ತು ವರ್ಷಗಳ ಜರ್ನಿಯನ್ನು ಸಂಭ್ರಮಿಸುವ ಸಮಯ. “ತೀರ್ಥರೂಪ ತಂದೆಯವರಿಗೆ” ಚಿತ್ರದ ಚಿತ್ರೀಕರಣ ಸಮಯದಲ್ಲಿ ಸ್ನೇಹಿತನ ಮೂಲಕ ಗಣೇಶ್ ಅವರನ್ನು ಸಂಪರ್ಕ ಮಾಡಿ ಚಿತ್ರದ ಕಥೆ ಹೇಳಿದೆ. ಇದು ಗಣೇಶ್ ಅವರಿಗಾಗಿಯೇ ಬರೆದಿರುವ ಕಥೆ. ಈ ಕಥೆಗೆ ಅವರೆ ಸೂಕ್ತ ನಾಯಕ ಎಂದರು.
ಇದೊಂದು ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ ಹಾಗೂ ಎಮೋಷನಲ್ ಡ್ರಾಮವಿದೆ.ಶೀರ್ಷಿಕೆಯ ಬಗ್ಗೆ ಹೇಳುವುದಾದರೆ, ಜನರಿಗೆ ಆಪ್ತವಾಗಬೇಕು. ಹಿಂದಿನ ಎರಡು ಚಿತ್ರಗಳ ಶೀರ್ಷಿಕೆಗಳು ಹಾಗೆ ಇತ್ತು. ಈ ಶೀರ್ಷಿಕೆ ಕೂಡ ಜನರಿಗೆ ಆಪ್ತವಾಗುತ್ತದೆ ಜೊತೆಗೆ ಕಥೆಗು ಹಾಗೂ ಪಾತ್ರಗಳಿಗೂ ಪೂರಕವಾಗಿದೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಲಿದ್ದಾರೆ. ಉಳಿದ ತಾರಾಬಳಗ ಹಾಗೂ ತಂತ್ರಜ್ಞರ ಮಾಹಿತಿ ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ಹೇಳಿದರು
ನಾಯಕ ಗಣೇಶ್ ಮಾತನಾಡಿ ಮುಂಗಾರು ಮಳೆ ಚಿತ್ರ ಬಿಡುಗಡೆಯಾಗಿ 20 ವರ್ಷಗಳಾಗಿದೆ, ಇಪ್ಪತ್ತು ವರ್ಷಗಳು ಹೇಗೆ ಕಳೆಯಿತು ಗೊತ್ತಾಗಲಿಲ್ಲ. ಒಂದು ದಿನ ಸ್ನೇಹಿತರೊಬ್ಬರು ಫೆÇೀನ್ ಮಾಡಿ ನನ್ನ ಸ್ನೇಹಿತ ಒಂದು ಸ್ಕ್ರಿಪ್ಟ್ ಮಾಡಿಕೊಂಡಿದ್ದಾರೆ. ನಿಮಗಾಗಿಯೇ ಮಾಡಿರುವ ಕಥೆಯಂತೆ ಎಂದರು. ಯಾರು ಅಂತ ಕೇಳಿದೆ. ರಾಮೇನಹಳ್ಳಿ ಜಗನ್ನಾಥ. “ಹೊಂದಿಸಿ ಬರೆಯಿರಿ” ನಿರ್ದೇಶಕರು ಎಂದರು. ಹೌದಾ. ಸಿನಿಮಾ ನೋಡಿದ್ದೇನೆ. ಬಹಳ ಚೆನ್ನಾಗಿದೆ. ಅವರೊಬ್ಬ ಸೆನ್ಸಿಬಲ್ ರೈಟರ್. ಮನುಷ್ಯನ ಭಾವನೆಗಳನ್ನು ಆ ಚಿತ್ರದಲ್ಲಿ ತುಂಬಾ ಚೆನ್ನಾಗಿ ಹೇಳಿದ್ದಾರೆ ಅಂದೆ. ಆನಂತರ ಜಗನ್ನಾಥ ಬಂದು ಕಥೆ ಹೇಳಿದರು. ಕಥೆ ಕೇಳುವಾಗಲೇ ಸಂತೋಷದಲ್ಲಿ ಅಳು ಬಂತು. ಅಂತಹ ಅಪರೂಪದ ಕಥೆ ಇದು ಎಂದರು

ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವಾದರೂ, ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಚಿತ್ರದಲ್ಲಿದೆ. ನಿರ್ದೇಶಕರ ಹಿಂದಿನ ಎರಡು ಚಿತ್ರಗಳ ಶೀರ್ಷಿಕೆಗಳು ಬಹಳ ಚೆನ್ನಾಗಿತ್ತು. ಚಿತ್ರಕ್ಕೂ ಇಂತಹ ಶೇರ್ಷಿಕೆಯನ್ನೇ ಆಯ್ಕೆ ಮಾಡಿ ಎಂದು ಹೇಳಿದ್ದೆ. “ತಮ್ಮ ಸುಖಾಗಮನ ಬಯಸುವ” ಎಂದು ಎಲ್ಲರಿಗೂ ಪ್ರಿಯವಾಗುವ ಶೀರ್ಷಿಕೆ ಇಟ್ಟಿದ್ದಾರೆ. ಚಿತ್ರವನ್ನು ಸಹ ಚೆನ್ನಾಗಿ ಮಾಡುತ್ತಾರೆ ಎಂಬ ಭರವಸೆ ಇದೆ. ಅರ್ಜುನ್ ಜನ್ಯ ಹಾಗೂ ಕಾಂಬಿನೇಶನ್ ನಲ್ಲಿ ಸಾಕಷ್ಟು ಜನಪ್ರಿಯ ಹಾಡುಗಳು ಬಂದಿದೆ. ಈ ಚಿತ್ರದಲ್ಲೂ ಸುಮಧುರ ಹಾಡುಗಳಿರಲ್ಲಿದೆ ಎಂದು ತಿಳಿಸಿದರು.
ನಿರ್ಮಾಪಕ ವಿಜಯ್ ಲೋಹಿತ್ ಮಾತನಾಡಿ ಎರಡನೇ ಚಿತ್ರ. ಮೊದಲ ಚಿತ್ರಕ್ಕೆ ತಾವು ನೀಡಿದ ಪೆÇ್ರೀತ್ಸಾಹ ಚಿತ್ರಕ್ಕೂ ಮುಂದುವರೆಯಲಿ ಎಂದರು ಸಹ ನಿರ್ಮಾಪಕ ಸತೀಶ್ ಎಚ್ ಗೌಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

