“ಪೆನ್‍ಡ್ರೈವ್” ನಲ್ಲಿ “ಬಿಗ್ ಬಾಸ್” ಬೆಂಕಿ ಖ್ಯಾತಿಯ ತನಿಷಾ ಕುಪ್ಪಂಡ
ದೇಶಾದ್ಯಂತ ಸದ್ದು ಮಾಡಿದ್ದು “ಪೆನ್ ಡ್ರೈವ್” ಇದೀಗ ಸಿನಿಮಾ ರೂಪದಲ್ಲಿ ತೆರೆಯ ಮೇಲೆ ಕಟ್ಟಿಕೊಡಲು ಚಿತ್ರತಂಡ ಮುಂದಾಗಿದೆ. ಆದರೆ ಪ್ರಸ್ತುತ ಚಾಲ್ತಿಯಲ್ಲಿರುವ ಪೆನ್ ಡ್ರೈವ್ ಪ್ರಕರಣಕ್ಕೂ ನಮ್ಮ “ಪೆನ್‍ಡ್ರೈವ್” ಚಿತ್ರಕ್ಕೂ ಸಂಬಂಧವಿಲ್ಲ ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ. ಹಾಗಾದರೆ ಪೆನ್ ಡ್ರೈವ್ ನಲ್ಲಿರುವ ಗುಟ್ಟು ಏನು ಎನ್ನುವುದನ್ನು ತಿಳಿಯಲು ಚಿತ್ರ ನೋಡಬೇಕಾಗಿದೆ.
ಬಿಗ್‍ಬಾಸ್ ಬೆಂಕಿ ಖ್ಯಾತಿಯ ತನಿಷಾ ಕುಪ್ಪಂಡ, ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಮುಂತಾದವರು ತಾರಾಬಳಗದಲ್ಲಿದ್ದಾರೆ. ತಾರಾಬಳಗದಲ್ಲಿ ಹೆಚ್ಚಿನವರು ಮಹಿಳೆಯರು ಇರುವುದು ವಿಶೇಷ. ಹಾಗಾದರೆ ಪೆನ್‍ಡ್ರೈವ್ ರುವಾರಿ ಯಾರು ಎನ್ನುವುದು ಕುತೂಹಲದ ಸಂಗತಿ
ಲಯನ್ ಆರ್ ವೆಂಕಟೇಶ್ ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಅಭಿನಯದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚಿಗೆ ನಡೆಯಿತು. ಚಿತ್ರಕ್ಕೆ “ಪೆನ್ ಡ್ರೈವ್” ಎಂದು ಹೆಸರಿಡಲಾಗಿದೆ. ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್, ಕನ್ನಡ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್ ಕೆ ವಿಶ್ವನಾಥ್ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಶುಭ ಕೋರಿದರು. ವೆಂಕಟೇಶ್, ನರಸಿಂಹಲು ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ತಂಡಕ್ಕೆ ಶುಭ ಹಾರೈಸಿದ್ದಾರೆ
ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ಮಾತನಾಡಿ “ಪೆನ್ ಡ್ರೈವ್” ಶೀರ್ಷಿಕೆ ನೀಡಿದ ವಾಣಿಜ್ಯ ಮಂಡಳಿಗೆ ಧನ್ಯವಾದ. ಪ್ರಸ್ತುತ ಚಾಲ್ತಿಯಲ್ಲಿರುವ “ಪೆನ್ ಡ್ರೈವ್” ಗು ನಮ್ಮ ಚಿತ್ರದ ಶೀರ್ಷಿಕೆಗೂ ಯಾವುದೇ ಸಂಬಂಧವಿಲ್ಲ. ಈ ಚಿತ್ರದ ಕಥೆಯೇ ಬೇರೆ. ನಮ್ಮ ಚಿತ್ರದಲ್ಲಿ “ಪೆನ್ ಡ್ರೈವ್” ಮುಖ್ಯಪಾತ್ರ ವಹಿಸುತ್ತದೆ. ಹಾಗಾಗಿ ಆ ಶೀರ್ಷಿಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಈವರೆಗೂ ಹದಿನೈದು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದೇನೆ ಎಂದರು.
ಲಯನ್ ಎಸ್ ವೆಂಕಟೇಶ್ ಹಾಗೂ ಲಯನ್ ಆರ್ ವೆಂಕಟೇಶ್ ಅವರ ಸಹಕಾರದಿಂದ ಚಿತ್ರವನ್ನು ಬೇಗೆ ತೆರೆಗೆ ತರುವ ಪ್ರಯತ್ನ ಮಾಡುತ್ತೇನೆ. ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಹೆಚ್ಚಿನ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆಯಲಿದೆ ಎಂದು ಹೇಳಿದರು
ಗೀತರಚನೆ ಹಾಗೂ ಸಂಗೀತ ನಿರ್ದೇಶನ ಮಾಡುತ್ತಿರುವ ಡಾ.ವಿ.ನಾಗೇಂದ್ರ ಪ್ರಸಾದ್ ಮಾತನಾಡಿ ಹೆಣ್ಣುಮಕ್ಕಳೇ ಚಿತ್ರದಲ್ಲಿ ಹೆಚ್ಚಿಗೆ ಇರುವುದು ವಿಶೇಷ ಎಂದರು
ನಟಿ ತನಿಷಾ ಕುಪ್ಪಂಡ ಮಾತನಾಡಿ “ಪೆನ್ ಡ್ರೈವ್” ಚಿತ್ರದ ಕಥೆ ಚೆನ್ನಾಗಿದೆ. ನಾನು ಈ ಚಿತ್ರದಲ್ಲಿ ಪೆÇಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಕೊಳ್ಳುತ್ತಿದ್ದೇನೆ ಎಂದರು.
ನಿರ್ಮಾಪಕರಾದ ಲಯನ್ ಎಸ್ ವೆಂಕಟೇಶ್ ಹಾಗೂ ಲಯನ್ ಆರ್ ವೆಂಕಟೇಶ್ ಮಾಹಿತಿ ನೀಡಿ ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು ಹಾಗಾಗಿ ಈ ಚಿತ್ರ ನಿರ್ಮಾಣಕ್ಕೆ ಮುಂದಾದೆವು. ನಮ್ಮ ಚಿತ್ರಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು.
ಚಿತ್ರದಲ್ಲಿ ನಟಿಸುತ್ತಿರುವ ರಾಧಿಕಾ ರಾಮ್, ಸಂಜನಾ ನಾಯ್ಡು, ಕರಿಸುಬ್ಬು ಮುಂತಾದವರು ತಮ್ಮ ಪಾತ್ರದ ಕುರಿತು ಮಾತನಾಡಿದರು. ಸಂಭಾಷಣೆ ಬರೆದು ಸಂಕಲನ ಮಾಡುತ್ತಿರುವ ನಾಗೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು