“ಛೂಮಂತರ್”ಗೆ ತರುಣ್ ಸುಧೀರ್ ಓಂಕಾರ ; ಶೀರ್ಷಿಕೆ ಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್ – ನಟ ಶರಣ್
ಡಾರ್ಕ್ ಹ್ಯೂಮರ್ ಜಾನರ್ ನ ಹಾರಾರ್ “ ಛೂಮಂತರ್” ಚಿತ್ರ ಸಂಕ್ರಾಂತಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಈ ಮೂಲಕ ಚಿತ್ರದ ಬಗ್ಗೆ ಸಹಜವಾಗಿ ಕುತೂಹಲ ಮತ್ತಷ್ಟು ಹೆಚ್ಚುವಂತೆ ಮಾಡಿದೆ.
“ಕರ್ವ” ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ ಮಂತರ್” ಚಿತ್ರ ಹೊಸವರ್ಷದ ಆರಂಭದಲ್ಲಿ ಜನವರಿ 10 ರಂದು ಬಿಡುಗಡೆಯಾಗಲಿದೆ. ಸಂಕ್ರಾಂತಿ ಸಮಯದಲ್ಲಿ ತೆಲುಗು, ತಮಿಳಿನ ದೊಡ್ಡದೊಡ್ಡ ಚಿತ್ರಗಳು ಬಿಡುಗಡೆಯಾಗುತ್ತಿದ್ದವು.
ಕನ್ನಡದಲ್ಲಿ ಯಾವುದೇ ಚಿತ್ರಗಳು ಸಂಕ್ರಾಂತಿ ಸಮಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಬಿಡುಗಡೆಯಾಗಿಲ್ಲ. ಬಹಳ ವರ್ಷಗಳ ನಂತರ ಕನ್ನಡದ “ಛೂ ಮಂತರ್” ಚಿತ್ರವನ್ನು ಸಂಕ್ರಾಂತಿ ಸಮಯಕ್ಕೆ ನಿರ್ಮಾಪಕ ತರುಣ್ ಶಿವಪ್ಪ ಬಿಡುಗಡೆ ಮಾಡುತ್ತಿದ್ದಾರೆ.
ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, “ಛೂಮಂತರ್” ಚಿತ್ರದಟೀಸರ್ ಬಿಡುಗಡೆ ಹಾಗೂ ಚಿತ್ರದ ದಿನಾಂಕ ಘೋಷಣೆ ಕಾರ್ಯಕ್ರಮಕ್ಕೆ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್, ನಿರ್ಮಾಪಕ ಕೆ.ಮಂಜು ಸೇರಿದಂತೆ ಅನೇಕ ಗಣ್ಯರು ಆಗಮಿಸಿ ಶುಭ ಕೋರಿದರು.
ನಾಯಕ ಶರಣ್ ಮಾತನಾಡಿ ತರುಣ್ ಸುಧೀರ್ ಚಿತ್ರಕ್ಕೆ ಓಂಕಾರ ಹಾಕಿದರು. ನಟ ದರ್ಶನ್ ಶೀರ್ಷಿಕೆ ನೀಡಿದರು. ಅಲ್ಲಿಂದ ಚಿತ್ರದ ಜರ್ನಿ ಆರಂಭವಾಯಿತು. ನವನೀತ್ ನಿರ್ದೇಶನದ ಚಿತ್ರವನ್ನು ತರುಣ್ ಹಾಗೂ ಮಾನಸ ತರುಣ್ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಸುಮಾರು ವರ್ಷಗಳಿಂದ ಸಾಮಾನ್ಯವಾಗಿ ಸಂಕ್ರಾಂತಿ ಸಮಯಕ್ಕೆ ಕನ್ನಡ ಚಿತ್ರಗಳನ್ನು ಬಿಡುಗಡೆ ಮಾಡುತ್ತಿರಲಿಲ್ಲ. ಆದರೆ ತರುಣ್ ಸಂಕ್ರಾಂತಿ ಸಮಯಕ್ಕೆ ಚಿತ್ರ ಬಿಡುಗಡೆ ಮಾಡುತ್ತಿದ್ದಾರೆ. ಉತ್ತಮ ಕಥಾಹಂದರ ಹೊಂದಿರುವ ಈ ಚಿತ್ರ ಗೆದ್ದೇ ಗೆಲ್ಲುತ್ತದೆ ಎಂಬ ನಂಬಿಕೆ ನನ್ನದು ಹಾಗೂ ಚಿತ್ರತಂಡದು. ಮುಂದೆ ಇದೇ ದಿನಾಂಕದಲ್ಲಿ ಚಿತ್ರವನ್ನು ಬಿಡುಗಡೆ ಮಾಡೋಣ ಎನ್ನುವಷ್ಟು ಈ ಚಿತ್ರ ಯಶಸ್ವಿಯಾಗಲಿ ಎಂದರು
ನಿರ್ಮಾಪಕ ತರುಣ್ ಶಿವಪ್ಪ ಮತನಾಡಿ ಚಿತ್ರತಂಡದ ಪರಿಶ್ರಮದಿಂದ “ಛೂ ಮಂತರ್” ಉತ್ತಮವಾಗಿ ಬಂದಿದೆ. ಬಹು ನಿರೀಕ್ಷಿತ ಈ ಚಿತ್ರ ಜನವರಿ 10 ರಂದು ಬಿಡುಗಡೆಯಾಗಲಿದೆ. ಚಿತ್ರಕ್ಕೆ ನಿಮ್ಮೆಲ್ಲರ ಪೆÇ್ರೀತ್ಸಾಹವಿರಲಿ ಎಂದು ಕೇಳಿಕೊಂಡರು
ನಿರ್ದೇಶಕ ನವನೀತ್ ಮಾತನಾಡಿ ಡಾರ್ಕ್ ಹ್ಯೂಮರ್ ಜಾನರ್‍ನ ಹಾರಾರ್ ಚಿತ್ರ. ಉತ್ತರ ಕಾಂಡ, ಶ್ರೀಲಂಕ, ಮೈಸೂರು, ಬೆಂಗಳೂರು ಮುಂತಾದ ಕಡೆ ಅರವತ್ತು ದಿನಗಳ ಚಿತ್ರೀಕರಣ ಮಾಡಿದ್ದೇವೆ. ಬೆಂಗಳೂರಿನಲ್ಲಿ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಹಾಕಲಾಗಿದ್ದ ಅದ್ದೂರಿ ಸೆಟ್‍ನಲ್ಲೇ ಹೆಚ್ಚಿನ ಚಿತ್ರೀಕರಣ ನಡೆದಿದೆ. ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ. ಅನೂಪ್ ಛಾಯಾಗ್ರಹಣ ಹಾಗೂ ಶರಣ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಅದ್ಭುತವಾಗಿದೆ ಎಂದರು
ನಟ ಚಿಕ್ಕಣ್ಣ ಮಾತನಾಡಿ ನಾಯಕನಾಗಿ ನಟಿಸಿದ್ದ ಹಾಗೂ ನನ್ನ ಮತ್ತು ಶರಣ್ ಅವರ ಕಾಂಬಿನೇಶನ್ ನಲ್ಲಿ ಮೂಡಿ ಬಂದಿದ್ದ “ಉಪಾಧ್ಯಕ್ಷ” ಕಳೆದ ಜನವರಿಯಲ್ಲಿ ಬಿಡುಗಡೆಯಾಗಿತ್ತು. ಜನವರಿಯಲ್ಲಿ ನಮ್ಮಿಬ್ಬರ ಕಾಂಬಿನೇಶ್‍ನಲ್ಲಿ ಬಂದಿರುವ ಈ ಚಿತ್ರ ಬಿಡುಗಡೆಯಾಗುತ್ತಿದೆ. ಆದರೆ ಈ ಚಿತ್ರ ನಮ್ಮಿಬ್ಬರ ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಎಂದು ತಿಳಿಸಿದರು.
ನಟಿ ಮೇಘನಾ ಗಾಂವಕರ್ ಮಾತನಾಡಿ ನಟ ಶರಣ್ ಅವರ ಜೊತೆಗೆ ನಟಿಸಬೇಕೆಂಬ ಆಸೆ ಈ ಚಿತ್ರದ ಮೂಲಕ ಈಡೇರಿದೆ. ಹಾರರ್ ಚಿತ್ರ. ಪ್ರೇಕ್ಷಕರಿಗೆ ಚಿತ್ರ ಹಿಡಿಸಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.
ನಟಿ ಅದಿತಿ ಪ್ರಭುದೇವ ಮಾತನಾಡಿ ಉತ್ತಮ ತಂಡದೊಂದಿಗೆ ಕೆಲಸ ಮಾಡಿದ್ದು ಖುಷಿಯಾಗಿದೆ ಎಂದು ಹೇಳಿದರು.
ಚಿತ್ರದಲ್ಲಿ ಅಭಿನಯಿಸಿರುವ ಪ್ರಭು ಮುಂಡ್ಕರ್, ದಿಲೀಪ್ ರಾಜ್, ಧರ್ಮ, ನರಸಿಂಹ ಜಾಲಹಳ್ಳಿ, ರಜನಿ ಭಾರದ್ವಾಜ್ ಸಹ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ನಿರಂಜನ್ ತಮ್ಮ ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು