ರಾಗಿಣಿ- ವರಲಕ್ಷ್ಮಿ ನಟನೆಯ `ಪೊಲೀಸ್ ಕಂಪ್ಲೈಂಟ್’ ಚಿತ್ರದ ಟೀಸರ್ ಬಿಡುಗಡೆ
ಕನ್ನಡದಲ್ಲಿ ಮಹಿಳಾ ಪ್ರದಾನ ಚಿತ್ರಗಳು ಕಡಿಮೆ ಎನ್ನುವ ಮಾತುಗಳು ಕೇಳಿಬರುತ್ತಿರುವ ನಡುವೆಯೇ ಮತ್ತೊಂದು ಮಹಿಳಾ ಪ್ರದಾನ ಚಿತ್ರ `ಪೊಲೀಸ್ ಕಂಪ್ಲೈಂಟ್’ ಚಿತ್ರದ ಟೀಸರ್ ಹಾಡು ಬಿಡುಗಡೆಯಾಗಿದ್ದು ಗಮನ ಸೆಳೆದಿದೆ.ನಟಿ ವರಲಕ್ಷ್ಮೀ ಶರತಕುಮಾರ್ ಹಾಗೂ ರಾಗಿಣಿ ದ್ವಿವೇದಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ

ಪೂಜಾಗಾಂಧಿ ಅಭಿನಯದ ಅನು',ದಂಡು’, ಆಪ್ತ' ಚಿತ್ರ ನಿರ್ದೇಶಿಸಿದ್ದ ಸಂಜೀವ ಮೆಗೋಟಿ “ಪೊಲೀಸ್ ಕಂಪ್ಲೈಂಟ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರದ ಬಹುತೇಕ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸ ಪೂರ್ಣಗೊಳಿಸಿದೆ
ಚಿತ್ರದ ಟೀಸರ್ ಅನ್ನು ನಟಿ ಪ್ರೇಮಾ ಮತ್ತು ಮೊದಲ ಹಾಡನ್ನು `ಕನ್ನಡ ಚಲನಚಿತ್ರ ನಿರ್ದೇಶಕರ ಸಂಘ’ದ ಅಧ್ಯಕ್ಷ ಎನ್.ಆರ್.ಕೆ ವಿಶ್ವನಾಥ್ ಬಿಡುಗಡೆಗೊಳಿಸಿದರು
ನಿರ್ದೇಶಕ ಸಂಜೀವ್ ಮೆಗೋಟಿ ಮಾತನಾಡಿ ಹತ್ತು ವರ್ಷದ ನಂತರ “ಪೊಲೀಸ್ ಕಂಪ್ಲೈಂಟ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೆ ಬಂದಿರುವುದು ಹೆಮ್ಮೆಯಾಗುತ್ತಿದೆ.ಆಕ್ಷನ್ ಕಮ್ ಹಾರರ್-ಥ್ರಿಲ್ಲರ್ ಕಥಾಹಂದರದ ಸಿನಿಮಾ. ಮಾಡಿದ ಕರ್ಮ ಹೇಗೆ ನಮ್ಮನ್ನು ಕಾಡುತ್ತದೆ ಎಂಬ ಒಂದು ಎಳೆಯನ್ನು ಇಟ್ಟುಕೊಂಡು ಸಿನಿಮಾ ಮಾಡಿದ್ದೇವೆ. ಕನ್ನಡ ಮತ್ತು ತೆಲುಗಿನ ಸುಮಾರು 50ಕ್ಕೂ ಹೆಚ್ಚಿನ ಕಲಾವಿದರು ಸಿನಿಮಾದ ವಿವಿಧ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗಿದ್ದು, ಏಕಕಾಲಕ್ಕೆ ಎರಡೂ ಭಾಷೆಗಳಲ್ಲೂ ಸಿನಿಮಾವನ್ನು ತೆರೆಗೆ ತರುವ ಯೋಜನೆಯಿದೆ’ ಎಂದು ಮಾಹಿತಿ ಹಂಚಿಕೊಂಡರು

ನಟಿ ರಾಗಿಣಿ ದ್ವಿವೇದಿ ಮಾತನಾಡಿ ಕೆರಿಯರ್ ನಲ್ಲಿ ಇದೊಂದು ವಿಭಿನ್ನ ಸಿನಿಮಾ. ತಾಯಿ ಮತ್ತು ಮಗುವಿನ ಸಂಬಂಧದ ಸುತ್ತ ಪಾತ್ರ ಸಾಗುತ್ತದೆ. ಆಕ್ಷನ್, ಹಾರರ್ ಜೊತೆಗೆ ಭಾವನಾತ್ಮಕ ಸನ್ನಿವೇಶ ಚಿತ್ರದಲ್ಲಿದೆ ಎಂದು ಮಾಹಿತಿ ನೀಡಿದರು
ನಾಯಕರಲ್ಲಿ ಒಬ್ಬರಾದ ಕೃಷ್ಣಸಾಯಿ ಮಾತನಾಡಿ ಕನ್ನಡದಲ್ಲಿ ಮೊದಲ ಸಿನಿಮಾ. ಚಿತ್ರಕ್ಕೆ ಎಲ್ಲರ ಸಹಕಾರ ಮತ್ತು ಬೆಂಬಲ ಬೇಕು ಎಂದು ಹೇಳಿದರು
ಪೆÇಲೀಸ್ ಕಂಪ್ಲೈಂಟ್' ಚಿತ್ರದ ಮೊದಲ ಗೀತೆಗೆ ಆರೋಹಣ ಸುಧೀಂದ್ರ ಸಂಗೀತ ಸಂಯೋಜಿಸಿದ್ದು, ಬಿ. ಆರ್. ಛಾಯಾ ಗೀತೆಗೆ ಧ್ವನಿಯಾಗಿದ್ದಾರೆ.`ಪೊಲೀಸ್ ಕಂಪ್ಲೈಂಟ್’ ಚಿತ್ರಕ್ಕೆ ಹರೀಶ್ ಸೊಂಡೇಕೊಪ್ಪ ಛಾಯಾಗ್ರಹಣವಿದೆ. ಈ ವರ್ಷದ ಮಧ್ಯಭಾಗದಲ್ಲಿ ತೆರೆಗೆ ತರುವ ಯೋಜನೆ ಇದೆ


