Teaser of the film “Daiji” released on Ramesh Aravind’s birthday: Curiosity increases

ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ “ದೈಜಿ” ಚಿತ್ರದ ಟೀಸರ್ ಬಿಡುಗಡೆ: ಕುತೂಹಲ ಹೆಚ್ಚಳ - CineNewsKannada.com

ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ “ದೈಜಿ” ಚಿತ್ರದ ಟೀಸರ್ ಬಿಡುಗಡೆ: ಕುತೂಹಲ ಹೆಚ್ಚಳ

ನಟ,ನಿರೂಪಕ, ನಿರ್ದೇಶಕ ರಮೇಶ್ ಅರವಿಂದ್ ಅವರಿಗೆ ಸೆಪ್ಟಂಬರ್ 10 ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ರಮೇಶ್ ಅರವಿಂದ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಹಾರಾರ್ ಜಾನರ್ “ದೈಜಿ” ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಗಮನ ಸೆಳೆದಿದೆ.

“ದೈಜಿ” ಚಿತ್ರತಂಡ ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯ ಕೋರುವ ಮೂಲಕ ಉಡುಗೊರೆ ನೀಡಿದೆ. ಟೀಸರ್‍ಗೆ ಮೆಚ್ಚುಗೆಯ ಮಹಾಪೂರ ಹರಿದು ಬಂದಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ನಟ ರಮೇಶ್ ಅರವಿಂದ್ ಮಾತನಾಡಿ, ಹುಟ್ಟು – ಸಾವು ಬಾಳಿನಲ್ಲಿ ಎರಡು ಕೊನೆಗಳು ಎಂಬ ಸಾಲಿದೆ. ಆದರೆ ಇವೆರಡರ ಮಧ್ಯೆ ಏನಿದೆ ಇವೆರಡರ ಮಧ್ಯೆ ಪ್ರೀತಿ ಇದೆ. ಒಂದು ವೇಳೆ ಸಾವೇ ಕೊನೆಯಾಗದಿದ್ದರೆ ಏನಿರುತ್ತದೆ ಅದರ ಆಚೆಗೆ ಒಂದು ದುಷ್ಟ ಶಕ್ತಿ ಇರುತ್ತದೆ. ಆ ಶಕ್ತಿ ಈ ಪ್ರೀತಿಯನ್ನು ಹೊತ್ತುಕೊಂಡು ಹೊಗುತ್ತದೆ. ಇದೇ ನಾವು ಸಾಮಾನ್ಯ ಹಾರಾರ್ ಚಿತ್ರಗಳಲ್ಲಿ ಕಾಣುವುದು. ಆದರೆ ನಿರ್ದೇಶಕ ಆಕಾಶ್ ಶ್ರೀವತ್ಸ ರೀತಿಯ ಹಾರಾರ್ ಸಿನಿಮಾ ಮಾಡಿಲ್ಲ. ಈವರೆಗೂ ನಾನು ಸಾಕಷ್ಟು ಹಾರಾರ್ ಸಿನಿಮಾ ನೋಡಿದ್ದೇನೆ. ಕಥೆ ನಾನು ನೋಡಿಲ್ಲ ಎಂದರು

#RameshArvind

ಬಾಲಚಂದರ್ ಅವರಂತಹ ಹೆಸರಾಂತ ನಿರ್ದೇಶಕರ ಜೊತೆಗೆ ಹತ್ತು ಸಿನಿಮಾ ಮಾಡಿದ್ದೇನೆ. ಮುಂದೆ ಶ್ರೀವತ್ಸ ಅವರ ಜೊತೆಗೂ ಇದೇ ರೀತಿ ಮಾಡುತ್ತೇನೆ. ರಾಧಿಕಾ ನಾರಾಯಣ್ ಅವರಂತೂ ಮಹಾನಟಿ. ದಿಗಂತ್‍ಲವಲವಿಕೆ ನನಗೆ ಬಹಳ ಇಷ್ಟ. ಚಿತ್ರದಲ್ಲಿ ವಿದೇಶದ ಪ್ರಸಿದ್ದ ಕಲಾವಿದರೊಂದಿಗೂ ನಟಿಸಿದ್ದೇನೆ. “ದೈಜಿ” ಚಿತ್ರವನ್ನು ತೆರೆಯ ಮೇಲೆ ನೋಡಲು ಕಾತುರನಾಗಿದ್ದೇನೆ ಎಂದು ಹೇಳಿದರು

ನಿರ್ಮಾಪಕ ರವಿ ಕಶ್ಯಪ್ ಮಾತನಾಡಿ ಹತ್ತು ವರ್ಷಗಳ ಹಿಂದೆ ನಿರ್ದೇಶಕ ಆಕಾಶ್ ಶ್ರೀವತ್ಸ ಅವರಿಗೆ ಚಿತ್ರದ ಬಗ್ಗೆ ಹೇಳಿದ್ದೆ. ಈಗ ಕಾಲ ಕೂಡಿ ಬಂದಿದೆ. ವಿದೇಶದಲ್ಲಿ ಕಂಡಿರುವ ನೈಜ ಘಟನೆ ಆಧರಿತ ಚಿತ್ರ.ಯಾವುದೇ ಹಾಲಿವುಡ್ ಚಿತ್ರಕ್ಕೂ ಕಡಿಮೆ ಇಲ್ಲದಂತೆ ಮೂಡಿಬಂದಿದೆ ಎಂದರು

ನಿರ್ದೇಶಕ ಆಕಾಶ್ ಶ್ರೀವತ್ಸ ಮಾತನಾಡಿ ಸಂಖ್ಯಾಶಾಸ್ತ್ರದ ಪ್ರಕಾರ ಮೂರು ಅಂಕಿಗೂ, ನನಗೂ ಹಾಗೂ ಈ ಚಿತ್ರಕ್ಕೂ ನಂಟಿದೆ. ಹೇಗೆಂದರೆ, ಇದು ನನ್ನ ನಿರ್ದೇಶನದಲ್ಲಿ ರಮೇಶ್ ಅರವಿಂದ್ ಅವರು ನಾಯಕರಾಗಿ ನಟಿಸಿರುವ ಮೂರನೇ ಸಿನಿಮಾ. ನಟಿ ರಾಧಿಕಾ ನಾರಾಯಣ್ ಅವರ ಜೊತೆಗೂ ಮೂರನೇ ಸಿನಿಮಾ. ಹಾಗೂ ನಿರ್ಮಾಪಕರ ಮೂರನೇ ಕಾಂಬಿನೇಶನ್‍ನ ಚಿತ್ರವೂ ಹೌದು. ನಿರ್ಮಾಪಕರು ಕಂಡ ನೈಜ ಘಟನೆ ಹೇಳಿದರು. ಅದುವೇ”ದೈಜಿ” ಚಿತ್ರಕ್ಕೆ ಸ್ಪೂರ್ತಿ. ಕಥೆಗೆ ರಮೇಶ್ ಅರವಿಂದ್ ಅವರೆ ಸೂಕ್ತ ಎನಿಸಿ, ಅವರಿಗೆ ಕಥೆ ಹೇಳಿದಾಗ, ನಟಿಸಲು ಒಪ್ಪಿಕೊಂಡಿದ್ದು ಬಹಳ ಖುಷಿಯಾಯಿತು ಎಂದು ಹೇಳಿದರು

ಸೂರ್ಯ ಎಂಬ ಪಾತ್ರದಲ್ಲಿ ರಮೇಶ್ ಅರವಿಂದ್ ಕಾಣಿಸಿಕೊಂಡಿದ್ದಾರೆ. ರಾಧಿಕಾ ನಾರಾಯಣ್ ಭೂಮಿ ಪಾತ್ರದಲ್ಲಿ ಹಾಗೂ ರಮೇಶ್ ಅವರ ತಮ್ಮನಾಗಿ ನಟ ದಿಗಂತ್ ಅವರು ಗಗನ್ ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. “ದೈಜಿ” ಎಂದರೆ ಪ್ರೇತಾತ್ಮಗಳ ದೈವ ಎಂದರ್ಥ. ಸದ್ಯದಲ್ಲೇ ಟ್ರೇಲರ್ ಸಹ ಬರಲಿದ್ದು, ವರ್ಷದ ಕೊನೆ ಅಥವಾ ನೂತನ ವರ್ಷದ ಆರಂಭಕ್ಕೆ “ದೈಜಿ” ನಿಮ್ಮ ಮುಂದೆ ಬರಲಿದೆ ಎಂದು ತಿಳಿಸಿದರು.

ನಟಿ ರಾಧಿಕಾ ನಾರಾಯಣ್, ಹಾಗು ನಟ ದಿಗಂತ್ ತಮ್ಮ ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು ಬಿ.ಎಂ.ಗಿರಿರಾಜ್, ಬರಹಗಾರ ಅಭಿಜಿತ್ ಹಾಗೂ ಕಾಸ್ಟಿಂಗ್ ಡೈರೆಕ್ಟರ್ ಸುನಯನ ಸುರೇಶ್ ಮುಂತಾದರ “ದೈಜಿ” ಬಗ್ಗೆ ಮಾತನಾಡಿದರು. ಶ್ರೀಶ ಕುದುವಳ್ಳಿ ಛಾಯಾಗ್ರಹಣ, ಜ್ಯೂಡಾ ಸ್ಯಾಂಡಿ ಸಂಕಲನವಿರುವ ಚಿತ್ರಕ್ಕೆ ಆಕಾಶ್ ಶ್ರೀವತ್ಸ ಅವರೆ ಸಂಕಲನ ಕಾರ್ಯ ಮಾಡಿದ್ದಾರೆ .

#RameshArvind

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin