Telugu actor Ram Pothineni has Kannada actress Srileela as the heroine

ತೆಲುಗು ನಟ ರಾಮ್ ಪೋತಿನೇನಿಗೆ ಕನ್ನಡ ನಟಿ ಶ್ರೀಲೀಲಾ ನಾಯಕಿ - CineNewsKannada.com

ತೆಲುಗು ನಟ ರಾಮ್ ಪೋತಿನೇನಿಗೆ ಕನ್ನಡ ನಟಿ ಶ್ರೀಲೀಲಾ ನಾಯಕಿ

“ಅಖಂಡ’ ಚಿತ್ರದ ಬ್ಲಾಕ್‍ಬಸ್ಟರ್‍ಹಿಟ್ ಬಳಿಕ ಬೋಯಾಪಾಟಿ ಶ್ರೀನು ನಿರ್ದೇಶನದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ “ ಬೋಯಾ ಪಾಟೀರಾಪೋ” ಚಿತ್ರ ದಸರಾ ಬದಲಿಗೆ ಮುಂಚಿತವಾಗಿಯೇ ಬಿಡುಗಡೆಗೆ ಸಜ್ಜಾಗಿದೆ.

ಉಸ್ತಾದ್ ರಾಮ್ ಪೋತಿನೇನಿ ನಟನೆಯ ಮಾಸ್ ಆಕ್ಷನ್ ಎಂಟರ್ ಟೈನರ್ ಕಥಾಹಂದರ ಚಿತ್ರವನ್ನು ಅಕ್ಟೋಬರ್ 20ರಂದು ದಸರಾ ಪ್ರಯುಕ್ತ ತೆರೆಗೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿತ್ತು. ಆದರೀಗ ನಿಗದಿತ ಸಮಯಕ್ಕಿಂತಲೂ ಒಂದು ತಿಂಗಳು ಮುಂಚಿತವಾಗಿಯೇ ಸಿನಿಮಾ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಲಾಗಿದೆ.

ಸೆಪ್ಟಂಬರ್ 15ರಂದು ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ಬೋಯಾ ಪಾಟೀರಾಪೋ ವಿಶ್ವಾದ್ಯಂತ ರಿಲೀಸ್ ಆಗಲಿದೆ. ವೈಟ್ ಅಂಡ್ ವೈಟ್ ಪಂಚೆ ತೊಟ್ಟು ಕೈಯಲ್ಲಿ ಕಾಫಿ ಕಪ್ ಹಿಡಿದು ಹಸಿರನ್ನೇ ಹಾಸಿ ಹೊದ್ದಿರುವ ಭತ್ತದ ಗದ್ದೆಯಲ್ಲಿ ರಾಮ್ ಪೋತಿನೇನಿ ಕುಳಿತಿರುವ ಪೋಸ್ಟರ್ ಮೂಲಕ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದೆ.

ಲವರ್ ಬಾಯ್ ಆಗಿ ಮಿಂಚುತ್ತಿದ್ದ ರಾಮ್ ಪೋತಿನೇನಿ ಮೊದಲ ಬಾರಿಗೆ ಬೋಯಾ ಪಾಟೀರಾಪೋ ಸಿನಿಮಾದಲ್ಲಿ ಮಾಸ್ ಅವತಾರದಲ್ಲಿ ನಟಿಸಿದ್ದಾರೆ.

ಕನ್ನಡತಿ ಶ್ರೀಲೀಲಾ ರಾಮ್‍ಗೆ ಜೋಡಿಯಾಗಿ ನಟಿಸಿದ್ದಾರೆ. ಸಂತೋಷ್ ಡಿಟೇಕ್ ಕ್ಯಾಮೆರಾ ವರ್ಕ್, ತಮನ್ ಎಸ್ ಎಸ್ ಮ್ಯೂಸಿಕ್ ಕಿಕ್ ಚಿತ್ರಕ್ಕಿದೆ. ಈ ಚಿತ್ರವನ್ನು ಶ್ರೀನಿವಾಸ್ ಸಿಲ್ವರ್ ಸ್ಕ್ರೀನ್ ಬ್ಯಾನರ್ ನಡಿ ಶ್ರೀನಿವಾಸ್ ಚಿತ್ತೂರಿ ನಿರ್ಮಾಣ ಮಾಡಿದ್ದಾರೆ. ಜೀ ಸ್ಟುಡಿಯೋಸ್ ಸೌತ್ ಹಾಗೂ ಪವನ್ ಕುಮಾರ್ ಅರ್ಪಿಸುತ್ತಿರುವ ಬೋಯಾ ಪಾಟೀರಾಪೋ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದೆ. ಸದ್ಯ ಬೋಯಾ ಪಾಟೀರಾಪೋ ಎಂಬ ತಾತ್ಕಾಲಿಕ ಶೀರ್ಷಿಕೆ ಫಿಕ್ಸ್ ಮಾಡಲಾಗಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin