The dubbing of the court drama genre "Yathabhava" is complete.

ಕೋರ್ಟ್ ಡ್ರಾಮ ಜಾನರ್ ನ “ಯಥಾಭವ” ಚಿತ್ರದ ಡಬ್ಬಿಂಗ್ ಪೂರ್ಣ - CineNewsKannada.com

ಕೋರ್ಟ್ ಡ್ರಾಮ ಜಾನರ್ ನ “ಯಥಾಭವ” ಚಿತ್ರದ ಡಬ್ಬಿಂಗ್ ಪೂರ್ಣ

“ಯಥಾಭವ” ಚಿತ್ರದ ಡಬ್ಬಿಂಗ್ ಪೂರ್ಣ . ಆಗಸ್ಟ್ 25 ರಂದು ಬರಲಿದೆ ಕೋರ್ಟ್ ಡ್ರಾಮ ಜಾನರ್ ನ ಈ ಚಿತ್ರದ ಟೀಸರ್ .

ಗೌತಮ್ ಬಸವರಾಜ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ “ಯಥಾಭವ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪ್ರಸ್ತುತ ಡಬ್ಬಿಂಗ್ ಸಹ ಪೂರ್ಣವಾಗಿದೆ. “ಕೋರ್ಟ್ ಡ್ರಾಮ” ಜಾನರ್ ನ ಈ ಚಿತ್ರದ ಟೀಸರ್ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ.

ಪವನ್ ಶಂಕರ್ ಹಾಗೂ ಸಹನ ಸುಧಾಕರ್ ನಾಯಕ, ನಾಯಕಿಯಾಗಿ ನಟಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ದತ್ತಣ್ಣ, ಬಾಲ ರಾಜವಾಡಿ ಹಾಗೂ ಗೋಪಾಲಕೃಷ್ಣ ದೇಶಪಾಂಡೆ ಅಭಿನಯಿಸಿದ್ದಾರೆ. ಎಂಭತ್ತರ ಹರಯದಲ್ಲೂ ಯುವಕರು ನಾಚುವಂತಹ ದತ್ತಣ್ಣ ಈ ಚಿತ್ರದಲ್ಲಿ ನ್ಯಾಯಾಧೀಶರಾಗಿ ಅಭಿನಯಿಸಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ ಅವರು ವಕೀಲರಾಗಿ ಹಾಗೂ ಬಾಲ ರಾಜವಾಡಿ ಅವರು ಗೃಹ ಸಚಿವರಾಗಿ ಕಾಣಿಸಿಕೊಂಡಿದ್ದಾರೆ. ಮೂವರ ಅಭಿನಯವೂ ಮನೋಜ್ಞವಾಗಿ ಮೂಡಿಬಂದಿದೆ ಎನ್ನುತ್ತಾರೆ ನಿರ್ದೇಶಕರು.

ನಿರ್ದೇಶಕ ಗೌತಮ್ ಬಸವರಾಜ್ ಅವರು ಸೇರಿದಂತೆ ಈ ಚಿತ್ರದಲ್ಲಿ ನಟಿಸಿರುವ ಬಹುತೇಕ ತಂತ್ರಜ್ಞರು ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೋಸ್ ನಲ್ಲಿ ಮೂರುವರ್ಷಗಳ‌ ಕಾಲ ಫಿಲಂ ಮೇಕಿಂಗ್ ಕೋರ್ಸ್ ಮುಗಿಸಿ ಈ ಮಾಡಿರುವುದು ವಿಶೇಷ.

Macht entertainments ಲಾಂಛನದಲ್ಲಿ ಸುಜಾತ ಕುಮಾರಿ ಹಾಗೂ ಅನಿಲ್ ಕುಮಾರ್ ಬಿ.ಎನ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಹರ್ಷ್ ಮಿಶ್ರ ಛಾಯಾಗ್ರಹಣ, ಹರೀಶ್ ಚೌಧರಿ ಸಂಕಲನ, ಕುಂಗ್ಫು ಚಂದ್ರು ಸಾಹಸ ನಿರ್ದೇಶನ, ಸುಚಿತ್ ಚವ್ಹಾಣ್, ನೃತ್ಯ ನಿರ್ದೇಶನ , ಸ್ಮಿತ ಕುಲಕರ್ಣಿ ಕಲಾ ನಿರ್ದೇಶನ ಹಾಗೂ ನಿರ್ಮಾಲ್ ಜೋಶಿ ಅವರ ಸಹ ನಿರ್ದೇಶನವಿದೆ. ಉತ್ಸವ್ ಶ್ರೇಯಸ್ ಸಂಗೀತ ನೀಡಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಸುರೇಶ್ ರೆಡ್ಡಿ ಹಾಗೂ ಅಭಿಷೇಕ್ ಅಕ್ಕಣ್ಣನವರ್ ಹಾಡುಗಳನ್ನು ಬರೆದಿದ್ದಾರೆ.

ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ ಗೌತಮ್ ಸುಧಾಕರ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಮಾಸ್ಟರ್ ಶಮಂತ್, ನೀನಾಸಂ ಆನಂದ್, ಉಮಾ ಹೆಬ್ಬಾರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin