`ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ
ಕರಾವಳಿಯ ಪ್ರತಿಭೆ ಪ್ರಮೋದ್ ಶೆಟ್ಟಿ, ಶೆಟ್ಟರ ಗ್ಯಾಂಗ್‍ನ ಪ್ರಮಖ ಸದಸ್ಯ. ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ, ರಿಕ್ಕಿ, ಬೆಲ್ ಬಾಟಂ, ಅವನೇ ಶ್ರೀಮನ್ನಾರಾಯಣ, ತೂತುಮಡಿಕೆ, ಕಾಂತಾರ ಸೇರಿ ಸಿಕ್ಕ ಚಿತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣ ಮಾಡಿದವರು.
ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’ ಚಿತ್ರದ ಮೂಲಕ ನಾಯಕನಾದ ಪ್ರಮೋದ್ ಶೆಟ್ಟಿ, ಇದೀಗ ಒಂದರ ಹಿಂದೆ ಒಂದು ಚಿತ್ರಗಳಲ್ಲಿ ನಾಯಕರಾಗಿ ಕಾಣಸಿಕೊಳ್ಳುತ್ತಿದ್ದಾರೆ. “ಶಭಾಷ್ ಬಡ್ನಿ ಮಗನೇ” ಚಿತ್ರದ ಬಳಿಕ ಈಗ `ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ “ ಮೂಲಕ ಗಮನ ಸೆಳೆಯಲು ಮುಂದಾಗಿದ್ದಾರೆ.
ಪ್ರಮೋದ್ ಶೆಟ್ಟಿ ಹುಟ್ಟುಹಬ್ಬಕ್ಕೆ ಚಿತ್ರದ ಫಸ್ಟ್ ಲುಕ್ ಹಾಘು ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಳ್ಳಲಾಗಿದೆ.
`ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಚಿತ್ರ ಒಂದು ಊರಿನಲ್ಲಿ ಆದ ಅಪಾರ್ಥವೂ ಅನಾಹುತವಾಗಿ, ಅನಾಹುತ ಅಧಿಕ ಪ್ರಸಂಗವಾಗಿ ನಡೆಯುವ ಘಟನೆಗಳ ಸುತ್ತ ಸಿನಿಮಾ ಸಾಗುತ್ತದೆ. ವಡ್ಡಾರಾಧಕ ಹಾಗೂ ಶಬರಿ ಎನ್ನುವ ಎರಡು ಕಿರು ಚಿತ್ರಗಳನ್ನು ನಿರ್ದೇಶಿಸಿದ್ದ ಯುವ ಪ್ರತಿಭೆ ಅನೀಶ್ ಶರ್ಮ ಆಕ್ಷನ್ ಕಟ್ ಹೇಳಿದ್ದಾರೆ. ರಾಘು ಶಿವಮೊಗ್ಗ, ಕಿರಣ್ ನಾಯಕ್, ಮಂಜುನಾಥ್ ಹೆಗಡೆ, ಕೆ.ಜಿ ಕೃಷ್ಣಮೂರ್ತಿ ಚಂದ್ರಕಲಾ ಚಿತ್ರದ ಭಾಗವಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಇಡುವಾಣಿ ಎನ್ನುವ ಒಂದು ಹಳ್ಳಿಯಲ್ಲಿ ಚಿತ್ರವನ್ನು ಚಿತ್ತರಿಸಿದ್ದು ಇಡೀ ಊರಿಗೆ ಊರನ್ನೇ ಸಿನಿಮಾ ಸೆಟ್ಟನ್ನಾಗಿಸಿಕೊಂಡು ಊರು ಜನಗಳನ್ನೇ ಉಪಯೋಗಿಸಿಕೊಂಡು ಚಿತ್ರವನ್ನು ಚಿತ್ರೀಕರಿಸಲಾಗಿದೆ.
ಸುಮತ್ ಶರ್ಮಾ ಛಾಯಾಗ್ರಹಣ, ಸಂಜೀವ್ ಜಾಗೀರ್ದಾರ್ ಸಂಕಲನ, ಚೇತನ್ ಕುಮಾರ್ ಸಂಗೀತ ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಚಿತ್ರಕ್ಕಿದೆ. ಗನ್ನಿ ಬ್ಯಾಗ್ ಸ್ಟುಡಿಯೋ ಪ್ರೊಡಕ್ಷನ್ ನಡಿ ಚಿತ್ತರಂಜನ್ ಕಶ್ಯಪ್, ವಲ್ಲಭ್ ಸೂರಿ, ಸುನಿತ್ ಹಲಗೇರಿ ನಿರ್ಮಾಣ ಮಾಡಿದ್ದು, ಊರ್ ಮನೆ ಪ್ರೊಡಕ್ಷನ್ ನಿರ್ಮಾಣದಲ್ಲಿ ಸಾಥ್ ಕೊಟ್ಟಿದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.