“ಈ ಪಾದ ಪುಣ್ಯಪಾದ” ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ: ಕುತೂಹಲ ಹೆಚ್ಚಳ - CineNewsKannada.com

“ಈ ಪಾದ ಪುಣ್ಯಪಾದ” ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ: ಕುತೂಹಲ ಹೆಚ್ಚಳ

“ದಾರಿ ಯಾವುದಯ್ಯ ವೈಕುಂಠಕ್ಕೆ” ಚಿತ್ರದ ನಿರ್ದೇಶಕ ಸಿದ್ದು ಪೂರ್ಣಚಂದ್ರ ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಮತ್ತೊಂದು ಚಿತ್ರ” ಈ ಪಾದ ಪುಣ್ಯಪಾದ”. ಚಿತ್ರದ ಮೊದಲ ಪೋಸ್ಟರ್ ಅನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ.

ಇದೊಂದು ಆನೆ ಕಾಲು ರೋಗಿಯ ಕಥೆಯಾಧಾರಿತ ಚಿತ್ರವಾಗಿರುವುದರಿಂದ ಪ್ರತಿಯೊಬ್ಬ ಪ್ರೇಕ್ಷಕನಿಗೂ ಕೂಡ ಹೊಸ ಆಯಾಮದಲ್ಲಿ ಈ ಚಿತ್ರ ಪರಿಣಾಮ ಬೀರಬಹುದು ಎಂಬುದು ನಿರ್ದೇಶಕರ ಆಶಯ.

ಪ್ರತಿಯೊಬ್ಬ ಮನುಷ್ಯನಿಗೂ ಒಂದಲ್ಲ ಒಂದು ರೀತಿಯ ಖಾಯಿಲೆಗಳು ಸಂಭವಿಸಿದಾಗ ಆ ರೋಗಕ್ಕಿಂತ ಮಾನಸಿಕವಾಗಿಯೇ ಯಾತನೆ ಪಡುವುದು ಜಾಸ್ತಿ ಆಗಿರುತ್ತದೆ. ಯಾವುದೇ ರೋಗ ಬಂದರೂ ಕೂಡ ನಾವು ಎದೆಗುಂದದೆ ತಾಳ್ಮೆಯಿಂದ ಅದನ್ನು ಎದುರಿಸಬೇಕು ಎಂಬುದೇ ಈ ಚಿತ್ರದ ಕಥೆಯಾಗಿದೆ.

ಈ ಕಥೆಯನ್ನು ಹಲವು ವರ್ಷಗಳಿಂದ ಅಧ್ಯಯನ ಮಾಡಿ ಒಂದು ಚಿತ್ರಕಥೆಯ ರೂಪು ರೇಷೆಗಳನ್ನು ಸಿದ್ಧಪಡಿಸಿ ಆನಂತರ ಇದನ್ನು ಚಿತ್ರವಾಗಿಸಿದ್ದಾರೆ. ಯಾವುದೇ ರೋಗ ಬಂದಿರುವ ವ್ಯಕ್ತಿಯನ್ನು ಯಾವ ರೀತಿ ಪ್ರೀತಿಯಿಂದ ನೋಡಿಕೊಳ್ಳಬೇಕು, ಸಾಂತ್ವನ ಹೇಳಬೇಕು ಎಂಬುದು ಈ ಚಿತ್ರದ ಮುಖಾಂತರ ಕಾಣಿಸುತ್ತದೆ. ಜೊತೆಗೆ ಸಾಮಾಜಿಕ ಪರಿಣಾಮ ಬೀರುವಂತಹ ಚಿತ್ರಗಳು ಇತ್ತೀಚೆಗೆ ಕಡಿಮೆಯಾಗಿರುವುದರಿಂದ ಇಂತಹ ಚಿತ್ರಕ್ಕೆ ಪ್ರೋತ್ಸಾಹ ಕೊಡಬೇಕೆಂಬುದು ಇಡೀ ಚಿತ್ರತಂಡದ ಆಶಯ ಆಗಿದೆ.

ನಟ ಶ್ರೀಮುರಳಿ ಹೊಸಬರಿಗೆ ಪ್ರೋತ್ಸಾಹ ನೀಡಬೇಕು ಹೊಸಬರಿಗೆ ದಾರಿಯಾಗಬೇಕು ಎನ್ನುವ ಉದ್ದೇಶದಿಂದ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ ಶುಭಹಾರೈಸಿದ್ದೇನೆ ಇಡೀ ತಂಡಕ್ಕೆ ಒಳ್ಳೆಯದಾಗಲಿದೆ ಎಂದು ಮನವ ಮಾತು ಹಂಚಿಕೊಂಡಿದ್ದಾರೆ

ಚಿತ್ರಕ್ಕೆ ನಾಯಕ ನಟರಾಗಿ ಆಟೋ ನಾಗರಾಜ್ ಪಾತ್ರವನ್ನು ನಿಭಾಯಿಸಿದ್ದಾರೆ. ಈ ಹಿಂದೆ ಆಟೋ ಪ್ರಮೋಷನ್ ಅನ್ನು ಕಳೆದ 18 ವರ್ಷಗಳಿಂದಲೂ ಮಾಡಿದವರು. ಮೊದಲ ಬಾರಿಗೆ ನಾಯಕ ನಟರಾಗಿ ಪಾತ್ರವನ್ನು ನಿರ್ವಹಿಸಿದ್ದಾರೆ. ರಶ್ಮಿ, ಚೈತ್ರ, ಪ್ರಮೀಳಾ ಸುಬ್ರಹ್ಮಣ್ಯ, ಮನೋಜ್, ಹರೀಶ್ ಕುಂದೂರು, ಬೇಬಿ ರಿದಿ, ಪವಿತ್ರ, ಬಾಲರಾಜ್ ವಾಡಿ, ರೋಹಿಣಿ, ಶಂಕರ್ ಭಟ್, ಪ್ರೀತಿ, ಮೀಸೆ ಮೂರ್ತಿ ಇನ್ನೂ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಚಿತ್ರಕ್ಕೆ ಸಂಗೀತ ಮತ್ತು ಹಿನ್ನೆಲೆ ಸಂಗೀತವನ್ನು ಅನಂತ ಆರ್ಯನ್ ನೀಡಿದ್ದಾರೆ. ಕಲೆ ಬಸವರಾಜ್ ಆಚಾರ್, ವಸ್ತ್ರಲಂಕಾರ ನಾಗರತ್ನ ಕೆ ಎಚ್, ಶಬ್ದ ವಿನ್ಯಾಸ ಶ್ರೀರಾಮ್, ಕಲರಿಂಗ್ ಗಗನ್ ಆರ್, ಸಂಕಲನ ದೀಪು ಸಿ ಎಸ್ ನಿರ್ವಹಿಸಿದ್ದಾರೆ. ಚಿತ್ರ ಈಗಾಗಲೇ ಸೆನ್ಸಾರ್ ಮಂಡಳಿಯಿಂದ ಯು ಸರ್ಟಿಫಿಕೇಟ್ ಪಡೆದಿದೆ. ಹಲವಾರು ಚಲನಚಿತ್ರೋತ್ಸವಗಳಿಗೆ ಸ್ಪರ್ಧಿಸಲು ರೆಡಿಯಾಗಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin