The first song of Pawan Kalyan starrer 'Hari Har Veera Mallu-1' is released.

ಪವನ್ ಕಲ್ಯಾಣ್ ನಟನೆನೆಯ ‘ಹರಿ ಹರ ವೀರ ಮಲ್ಲು-1’ ಮೊದಲ ಹಾಡು ಬಿಡುಗಡೆ - CineNewsKannada.com

ಪವನ್ ಕಲ್ಯಾಣ್ ನಟನೆನೆಯ ‘ಹರಿ ಹರ ವೀರ ಮಲ್ಲು-1’ ಮೊದಲ ಹಾಡು ಬಿಡುಗಡೆ

ಟಾಲಿವುಡ್‍ನ ಪವರ್‍ಸ್ಟಾರ್ ಹಾಗೂ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ತಮ್ಮ ಅಭಿಮಾನಿಗಳಿಗೆ ಅಚ್ಚರಿ ನೀಡಿದ್ದಾರೆ ಉಪ ಮುಖ್ಯಮಂತ್ರಿ ಸ್ಥಾನಕ್ಕೇರಿದ ಬಳಿಕ ಪವನ್ ರಾಜಕೀಯದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿಬಿಟ್ಟಿದ್ದರು.

ಹೀಗಾಗಿ ಸಿನಿಮಾಗಳಿಗೆ ಬ್ರೇಕ್ ಕೊಟ್ಟಿದ್ದರು. ಇದೀಗ ಪವನ್ ಕಲ್ಯಾಣ್ ನಟನೆಯ ಬಹುನಿರೀಕ್ಷಿತ ಸಿನಿಮಾ ಹರಿ ಹರ ವೀರ ಮಲ್ಲು-1 ಮೊದಲ ಹಾಡು ಬಿಡುಗಡೆಯಾಗಿದೆ.

ಕನ್ನಡ, ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಹರಿ ಹರ ವೀರ ಮಲ್ಲು-1 ಸಿನಿಮಾದ ಮೊದಲ ಹಾಡು ಅನಾವರಣ ಮಾಡಲಾಗಿದೆ.

ಮಾತು ಕೇಳಯ್ಯ ಅಂತಾ ಪವನ್ ಕನ್ನಡದಲ್ಲಿಯೇ ಧ್ವನಿ ಕುಣಿಸಿದ್ದಾರೆ. ಕನ್ನಡ ಮಾತ್ರವಲ್ಲ ಎಲ್ಲಾ ಭಾಷೆಯಲ್ಲಿಯೂ ಪವರ್ ಸ್ಟಾರ್ ಹಾಡನ್ನು ಹಾಡಿರುವುದು ವಿಶೇಷ. ಜನಪದ ಶೈಲಿಯಲ್ಲಿ ಮೂಡಿಬಂದಿರುವ ಗೀತೆಗೆ ಆಸ್ಕರ್ ವಿಜೇತ ಎಂ ಎಂ ಕೀರವಾಣಿ ಟ್ಯೂನ್ ಹಾಕಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದಾರೆ.

ಹರಿ ಹರ ವೀರ ಮಲ್ಲುವಾಗಿ ಪವನ್ ಕಲ್ಯಾಣ್ ಸಿನಿಮಾದಲ್ಲಿ ಅಬ್ಬರಿಸಿದ್ದಾರೆ. 17ನೇ ಶತಮಾನದಲ್ಲಿ ಮೊಘಲ್ ಸಾಮ್ರಾಟ್ಯದ ವಿರುದ್ಧ ಹೋರಾಡಿದ ನಾಯಕನಾಗಿ ಪವರ್ ಸ್ಟಾರ್ ಮಿಂಚಿದ್ದಾರೆ. ಜ್ಯೋತಿ ಕೃಷ್ಣ ಮತ್ತು ಕ್ರಿಶ್ ಜಗರ್ಲಮುಡಿ ನಿರ್ದೇಶನದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ಮೂಡಿಬಂದಿದೆ. ಬಾಬಿ ಡಿಯೋಲ್, ನಿಧಿ ಅಗರ್ವಾಲ್, ನರ್ಗಿಸ್ ಫಕ್ರಿ ಮತ್ತು ನೋರಾ ಫತೇಹಿ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಮಾರ್ಚ್ 28ಕ್ಕೆ ಹರಿ ಹರ ವೀರ ಮಲ್ಲು ಮೊದಲ ಭಾಗ ವಿಶ್ವಾದ್ಯಂತ ತೆರೆಗೆ ಬರುತ್ತಿದೆ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin