The first song of the movie 'Aaram Aravinda Swamy' will be released soon

ಶೀಘ್ರದಲ್ಲಿ `ಆರಾಮ್ ಅರವಿಂದ ಸ್ವಾಮಿ’ ಸಿನಿಮಾದ ಮೊದಲ ಹಾಡು ಬಿಡುಗಡೆ - CineNewsKannada.com

ಶೀಘ್ರದಲ್ಲಿ `ಆರಾಮ್ ಅರವಿಂದ ಸ್ವಾಮಿ’ ಸಿನಿಮಾದ ಮೊದಲ ಹಾಡು ಬಿಡುಗಡೆ

ಆರಾಮ್ ಅರವಿಂದ ಸ್ವಾಮಿ.. ಸೆಟ್ಟೇರಿದ ದಿನದಿಂದಲೂ ಬಹಳಷ್ಟು ಸದ್ದು ಮಾಡುತ್ತಿರುವ ಸಿನಿಮಾ. ಸಖತ್ ಕ್ರಿಯೇಟಿವ್ ಆಗಿರುವ ಪ್ರಮೋಷನಲ್ ವಿಡಿಯೋ ಮೂಲಕ ಗಮನಸೆಳೆಯುತ್ತಿರುವ ಈ ಸಿನಿಬಳಗವೀಗ ಮೊದಲ ಹಾಡು ಬಿಡುಗಡೆ ಮಾಡುವ ತಯಾರಿಯಲ್ಲಿದೆ.

ಶೀಘ್ರದಲ್ಲಿ ಆರಾಮ್ ಅರವಿಂದ ಸ್ವಾಮಿ ಚಿತ್ರದ ಟೈಟಲ್ ಟ್ರ್ಯಾಕ್ ಅನಾವರಣವಾಗಲಿದ್ದು, ಈ ಮೂಲಕ ಚಿತ್ರತಂಡ ಪ್ರಚಾರ ಕಾರ್ಯಕ್ಕೆ ಕಿಕ್ ಸ್ಟಾರ್ಟ್ ನೀಡಲಿದೆ. ನಟ ಅನೀಶ್ ತೇಜೇಶ್ವರ್ ಹಾಗೂ ನಿರ್ದೇಶಕ ಅಭಿಷೇಕ್ ಶೆಟ್ಟಿ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ಆರಾಮ್ ಅರವಿಂದ್ ಸ್ವಾಮಿ ರೋಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿದೆ.

ನಮ್ ಗಣಿ ಬಿಕಾಂ ಪಾಸ್, ಗಜಾನನ ಅಂಡ್ ಗ್ಯಾಂಗ್ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೂರನೇ ಚಿತ್ರ ಇದಾಗಿದೆ. ಅನೀಶ್ ತೇಜೇಶ್ವರ್ ಗೆ ಜೋಡಿಯಾಗಿ ಮಿಲನ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ನಟಿಸುತ್ತಿದ್ದಾರೆ.

ಅಕಿರ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, `ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಸಾಗರ್ ಛಾಯಾಗ್ರಹಣ, ಉಮೇಶ್ ಸಂಕಲನ ಚಿತ್ರಕ್ಕಿದೆ. . ಬೆಂಗಳೂರು, ಕೇರಳ, ಕನಕಪುರ, ಮೈಸೂರು ಭಾಗದಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin