“ರಕ್ತ ಕಾಶ್ಮೀರ” ದಲ್ಲಿ ಉಗ್ರಗಾಮಿಗಳನ್ನು ಮಟ್ಟಹಾಕಿದ ನಾಯಕ-ನಾಯಕಿ

ಎಸ್ ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ “ರಕ್ತ ಕಾಶ್ಮೀರ’ ಅಂತು ಇಂತೂ ಅಡೆ ತಡೆಗಳನ್ನು ನಿವಾರಸಿಕೊಂಡು ಬಿಡುಗಡೆ ಹಂತಕ್ಕೆ ಬಂದಿದೆ. ಈ ಚಿತ್ರದಲ್ಲಿ ಉಪೇಂದ್ರ ಹಾಗೂ ರಮ್ಯ ಅಭಿನಯಿಸಿದ್ದಾರೆ.

ಎಂಡಿಎಂ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಮ್ಯ ಮುಖ್ಯಪಾತ್ರದಲ್ಲಿ ನಟಿಸಿರುವ “ರಕ್ತ ಕಾಶ್ಮೀರ” ಚಿತ್ರದಲ್ಲಿ ಶೀರ್ಷಿಕೆ ತಿಳಿಸುವಂತೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಕಥಾಹಂದರ ಹೊಂದಿದೆ.

ಪಾಕ್ ಆಕ್ರಮಿತ ಉಗ್ರಗಾಮಿಗಳು ಕಾಶ್ಮೀರದಲ್ಲಷ್ಟೇ ಅಲ್ಲ. ಬೆಂಗಳೂರು ಸೇರಿದಂತೆ ಭಾರತದ ವಿವಿಧ ನಗರಗಳಲ್ಲೂ ದಾಳಿ ನಡೆಸಿ ಸಾವಿರಾರು ಅಮಾಯಕರನ್ನು ಹತ್ಯೆ ಮಾಡಿರುತ್ತಾರೆ. ಇದರಿಂದ ನೊಂದ ಚಿತ್ರದ ನಾಯಕ ಹಾಗೂ ನಾಯಕಿ ಬೆಂಗಳೂರಿನಿಂದ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಗಿ ಅಲ್ಲಿರುವ ಉಗ್ರರನ್ನು ಮಟ್ಟಹಾಕುವ ಸನ್ನಿವೇವನ್ನು ಈ ಚಿತ್ರದಲ್ಲಿ ಚಿತ್ರಿಸಿಕೊಳ್ಳಲಾಗಿದೆ. ಜೊತೆಗೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಈ ಚಿತ್ರದಲ್ಲಿ ಬಳಸಿಕೊಂಡಿರುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

ಎಸ್ ವಿ ರಾಜೇಂದ್ರಸಿಂಗ್ ಬಾಬು “ರಕ್ತ ಕಾಶ್ಮೀರ” ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆ ಎಂ.ಎಸ್ ರಮೇಶ್ ಅವರದು. ಗುರುಕಿರಣ್ ಸಂಗೀತ ನಿರ್ದೇಶನದ ಚಿತ್ರದಲ್ಲಿ ಉಪೇಂದ್ರ, ರಮ್ಯ, ದೊಡ್ಡಣ್ಣ, ಓಂಪ್ರಕಾಶ್ ರಾವ್, ಅನಿಲ (ತೆಲುಗು ನಟಿ), ಕುರಿ ಪ್ರತಾಪ್ ಮುಂತಾದವರಿದ್ದಾರೆ.