“ಲವ್ ಸೀಸನ್ಸ್” ಚಿತ್ರದ ಮಳೆಯಾಗೋ ಮೊದಲೇ ಲಿರಿಕಲ್ ಹಾಡು ಬಿಡುಗಡೆ
ಕೃತ್ವಿಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ “ಲವ್ ಸೀಸನ್ಸ್” ಚಿತ್ರದ ಮೊದಲ ಲಿರಿಕಲ್ ವೀಡಿಯೋ ಹಾಡು ಇದೀಗ ಬಿಡುಗಡೆಗೊಂಡಿದೆ. ಮಧುರ ಸಾಹಿತ್ಯ, ಸಂಗೀತದ ಗೀತೆ ಗಮನ ಸೆಳೆದಿದೆ

ಎನ್.ಆರ್ ಸ್ಟುಡಿಯೋ ಯೂಟ್ಯೂಬ್ ಚಾನೆಲ್‍ನಲ್ಲಿ ಮಳೆಯಾಗೋ ಮೊದಲೇ ಕೊಡೆ ಹಿಡಿದು ಬರುವೆ, ನಗು ಮುಗಿವಾ ಮೊದಲೇ ಹೊಸ ಖುಷಿಯ ಕೊಡುವೆ ಎಂಬ ಮೋಹಕ ಸಾಲುಗಳನ್ನು ಕಾಂತಾರಾ ಖ್ಯಾತಿಯ ಪ್ರಮೋದ್ ಮರವಂತೆ ಬರೆದಿದ್ದಾರೆ.
ವೀರ್ ಸಮರ್ಥ್ ಸಂಗೀತ ಸಂಯೋಜಿಸಿರುವ ಗೀತೆಗೆ ಸರೆಗಮಪ ಸೀಸನ್ 10 ಸ್ಪರ್ಧಿಯಾಗಿ ಪ್ರಸಿದ್ಧಿ ಪಡೆದಿದ್ದ ಪ್ರಜ್ಞಾ ಮರಾಠೆ ಮತ್ತು ಅರ್ಮಾನ್ ಮಲಿಕ್ ಧ್ವನಿಯಾಗಿದ್ದಾರೆ. ಈಹಿಂದೆ ಟೀಸರ್ ಬಿಡುಗಡೆಯ ಸಂದರ್ಭದಲ್ಲಿಯೇ ವೀರ್ ಸಮರ್ಥ್ ಸಿನಿಮಾದ ಹಾಡುಗಳ ಬಗ್ಗೆ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದರು.
ಎನ್.ಆರ್ ಮಂಜುನಾಥ (ನೀಲೇರಿ) ಚಿತ್ರ ನಿರ್ಮಾಣ ಮಾಡಿದ್ದಾರೆ. ಕೃತ್ವಿಕ್ ನಿರ್ದೇಶನ, ವೀರ್ ಸಮರ್ಥ್ ಸಂಗೀತ ಸಂಗೀತ ನಿದೇಶನ ಈ ಚಿತ್ರಕ್ಕಿದೆ. ಕೆ.ಕಲ್ಯಾಣ್, ಪ್ರಮೋದ್ ಮರವಂತೆ ಮುಂತಾದವರು ಸಾಹಿತ್ಯ ಬರೆದಿದ್ದಾರೆ.
ಅವಿನಾಶ ಶಾಸ್ತ್ರಿ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ, ಭಜರಂಗಿ ಮೋಹನ್ ನೃತ್ಯ ಸಂಯೋಜನೆಯಿರುವ ಈ ಚಿತ್ರದಲ್ಲಿ ಮುಕುಂದ ರಾಮಸ್ವಾಮಿ ನಾಯಕನಾಗಿ ನಟಿಸಿದ್ದಾರೆ.

ದಿಯಾ ಕೀರ್ತಿ, ಚಂದನಾ ಗೌಡ ಮತ್ತು ಶ್ವೇತಾ ಕೊಗ್ಲೂರು ನಾಯಕಿಯರಾಗಿ ಜೊತೆಯಾಗಿದ್ದಾರೆ. ಮಂಡ್ಯ ರಮೇಶ್, ರಾಜೇಶ್ ನಟರಂಗ, ಸಂಗೀತಾ ಅನಿಲ್, ಜಯತೀರ್ಥ, ಚೇತನ್ ದುರ್ಗ, ಕಾಮಿಡಿ ಕಿಲಾಡಿ ಸದಾನಂದ, ಹುಲಿ ಕಾರ್ತಿಕ್, ಬೇಬಿ ರಿತು ಸಿಂಗ್ ಮುಂತಾದವರ ತಾರಾಗಣವಿದೆ.

