The movie 'Naguvina Hooge On' has got a U certificate

ನಗುವಿನ ಹೂಗಳ ಮೇಲೆ’ ಸಿನಿಮಾಗೆ ಸಿಕ್ತು ಯು ಸರ್ಟಿಫಿಕೇಟ್ - CineNewsKannada.com

ನಗುವಿನ ಹೂಗಳ ಮೇಲೆ’ ಸಿನಿಮಾಗೆ ಸಿಕ್ತು ಯು ಸರ್ಟಿಫಿಕೇಟ್

ಸೆನ್ಸಾರ್ ಪಾಸ್ ಆದ ‘ನಗುವಿನ ಹೂಗಳ ಮೇಲೆ’ ಸಿನಿಮಾಗೆ ಸಿಕ್ತು ಯು ಸರ್ಟಿಫಿಕೇಟ್ .ರೋಮ್ಯಾಂಟಿಕ್ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ನಗುವಿನ ಹೂಗಳ ಮೇಲೆ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಈಗ ಸೆನ್ಸಾರ್ ಮಂಡಳಿಯಿಂದ ಕ್ಲೀನ್ ಚೀಟ್ ಪಡೆದುಕೊಂಡಿದೆ.

ಯಾವುದೇ ಕಟ್ ಮತ್ತು ಯಾವುದೇ ದೃಶ್ಯಕ್ಕೆ ಮ್ಯೂಟ್ ಇಲ್ಲದೇ ಯು ಪ್ರಮಾಣ ಪತ್ರ ತನ್ನದಾಗಿಸಿಕೊಂಡಿದೆ. ಶ್ರೀ ರಂಗ , ಕೆಂಪಿರ್ವೆ ಮತ್ತು ಆಮ್ಲೆಟ್, ಸೇರಿದಂತೆ ಹತ್ತಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿರುವ ವೆಂಕಟ್ ಭಾರದ್ವಾಜ್ ಆಕ್ಷನ್ ಕಟ್ ಹೇಳಿರುವ ನಗುವಿನ ಹೂಗಳ ಮೇಲೆ ಸಿನಿಮಾದಲ್ಲಿ ಕಿರುತೆರೆಯಲ್ಲಿ ಖ್ಯಾತಿ ಗಳಿಸಿರುವ ಅಭಿದಾಸ್, ಶರಣ್ಯ ಶೆಟ್ಟಿ ಜೋಡಿಯಾಗಿ ನಟಿಸುತ್ತಿದ್ದು, ಬಾಲ ರಾಜವಾಡಿ, ಆಶಾ ಸುಜಯ್, ಗಿರೀಶ್, ನಂಜಪ್ಪ, ಅಭಿಷೇಕ್ ಅಯ್ಯಂಗರ್, ಹರ್ಷಿತ್ ಗೌಡ, ಹರೀಶ್ ಚೌಹಾನ್, ಹರ್ಷ ಗೋ ಭಟ್ ತಾರಾಬಳಗದಲ್ಲಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಇರಲಿ ಬಿಡು ಈ ಜೀವ ನಿನಗಾಗಿ ಎಂಬ ರೋಮ್ಯಾಂಟಿಕ್ ಹಾಡು ಪ್ರೇಕ್ಷಕರನ್ನು ಆಕರ್ಷಿಸುತ್ತಿದೆ. ವೆಂಕಟ್‌ ಭಾರದ್ವಾಜ್‌ ಕಥೆ, ಚಿತ್ರಕಥೆ ಬರೆದು‌ ನಿರ್ದೇಶಿಸಿರುವ ನಗುವಿನ ಹೂಗಳ ಮೇಲೆ ಸಿನಿಮಾವನ್ನು ಟಾಲಿವುಡ್ ನಲ್ಲಿ ಸೂಪರ್ ಹಿಟ್ ಚಿತ್ರಗಳಾದ ಬೆಂಗಾಲ್ ಟೈಗರ್, ಪಂಥಂ, ಒರೆ ಬುಜ್ಜುಗ , ಒಡೇಲ ರೈಲ್ವೆ ಸ್ಟೇಷನ್ ಮತ್ತು ಪ್ಯಾರ್ ಮೇ ಪಡೀಪೊಯಾನು ಚಿತ್ರಗಳನ್ನು ನಿರ್ಮಾಣ ಮಾಡಿರುವ ಕೆ. ಕೆ.ರಾಧಾ ಮೋಹನ್ ಶ್ರೀ ಸತ್ಯಸಾಯಿ ಆರ್ಟ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಇವರ ನಿರ್ಮಾಣದ ಮೊದಲ ಕನ್ನಡ ಸಿನಿಮಾವಾಗಿದೆ.

ಅಭಿಷೇಕ್ ಅಯ್ಯಂಗಾರ್ ಸಂಭಾಷಣೆ, ಪ್ರಮೋದ್ ಭಾರತಿಯ ಛಾಯಾಗ್ರಹಣ, ಚಂದನ್ ಪಿ ಸಂಕಲನ, ಲವ್ ಪ್ರಾನ್ ಮೆಹತಾ ಸಂಗೀತ ನಿರ್ದೇಶನ, ಟೈಗರ್ ಶಿವು ಸಾಹಸವಿರುವ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯ ಶುರು ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಪೂರ್ತಿಯಾಗಿ ಓದಿ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin