The much-awaited “Max” releases on December 25th

ಬಹು ನಿರೀಕ್ಷಿತ “ಮ್ಯಾಕ್ಸ್” ಡಿಸೆಂಬರ್ 25 ರಂದು ಬಿಡುಡುಗಡೆ


ಬಹು ನಿರೀಕ್ಷಿತ “ಮ್ಯಾಕ್ಸ್” ಡಿಸೆಂಬರ್ 25 ರಂದು ಬಿಡುಡುಗಡೆ

ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ್ರ “ಮ್ಯಾಕ್ಸ್” ಚಿತ್ರದ “ಐioಟಿs ಡಿoಚಿಡಿ” ಹಾಡಿನ ಲಿರಿಕಲ್ ವಿಡಿಯೋ ಇತ್ತೀಚಿಗೆ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಚಿತ್ರ ಡಿಸೆಂಬರ್ 25 ರಂದು ತೆರೆಗೆ ಬರಲಿದೆ.

ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ “ಮ್ಯಾಕ್ಸ್” ಚಿತ್ರಕ್ಕಾಗಿ ಅನೂಪ್ ಭಂಡಾರಿ ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ

“ಮ್ಯಾಕ್ಸ್” ಚಿತ್ರದ ಹಾಡಿಗೆ ಹಾಗೂ ಟ್ರೇಲರ್‍ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ ಕಿಚ್ಚ ಸುದೀಪ್, ನಿರ್ಮಾಪಕ ಕಲೈಪುಲಿ ಎಸ್ ತನು, ನಿರ್ದೇಶಕ ವಿಜಯ್ ಕಾರ್ತಿಕೇಯ, ಸಂಯುಕ್ತ ಹೊರನಾಡು, ಸುಕೃತ ವಾಗ್ಲೆ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ನಾಯಕ ಸುದೀಪ್ ಮಾತನಾಡಿ, ನಿಮ್ಮೆನೆಲ್ಲಾ ನೋಡಿ ಬಹಳ ಖುಷಿಯಾಗುತ್ತಿದೆ. ಎರಡುವರೆ ವರ್ಷಗಳ ನಂತರ ಡಿಸೆಂಬರ್ 25 ರಂದು ನನ್ನ ಅಭಿನಯದ “ಮ್ಯಾಕ್ಸ್” ಚಿತ್ರ ಬಿಡುಗಡೆಯಾಗುತ್ತಿದೆ. ತಡವಾಗಿರುವುದಕ್ಕೆ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ಆದರೆ ನಾವು ಲೇಟಾಗಿ ಬಂದರೂ ಲೇಟೆಸ್ಟಾಗಿ ಬರುತ್ತೇವೆ. ನಿಮ್ಮೆಲ್ಲರ ಪೆÇ್ರೀತ್ಸಾಹ ಸದಾ ಇರಲಿ ಎಂದರು

ಇಷ್ಟು ಜನ ಸುದೀಪ್ ಅವರ ಅಭಿಮಾನಿಗಳನ್ನು ಕಂಡು ಆನಂದವಾಗುತ್ತಿದೆ ಎಂದು ಮಾತು ಆರಂಭಿಸಿದ ನಿರ್ಮಾಪಕ ಕಲೈಪುಲಿ ಎಸ್ ತನು, ಡಿಸೆಂಬರ್ 25 ನಮ್ಮ ಚಿತ್ರ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರಕ್ಕೆ ನಮ್ಮೆಲ್ಲರ ಬೆಂಬಲವಿರಲಿ ಎಂದರು. ನಿರ್ದೇಶಕ ವಿಜಯ್ ಕಾರ್ತಿಕೇಯ, ಸಂಯುಕ್ತ ಹೊರನಾಡು, ಸುಕೃತ ವಾಗ್ಲೆ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.



Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin

Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581