ಸೈನ್ಸ್ ಫಿಕ್ಷನ್‍ನ “ಆಪಲ್ ಕಟ್” ಚಿತ್ರ ಡಿಸೆಂಬರ್ ನಲ್ಲಿ ತೆರೆಗೆ - CineNewsKannada.com

ಸೈನ್ಸ್ ಫಿಕ್ಷನ್‍ನ “ಆಪಲ್ ಕಟ್” ಚಿತ್ರ ಡಿಸೆಂಬರ್ ನಲ್ಲಿ ತೆರೆಗೆ

ಕನ್ನಡ ಚಿತ್ರರಂಗಕ್ಕೆ ಹೊಸ ಹೊಸ ನಟರು ಆಗಮನವಾಗುತ್ತಿದೆ, ಇದರ ಸಾಲಿಗೆ ಮತ್ತೊಬ್ಬ ಪ್ರತಿಭೆ ಸೂರ್ಯ ಗೌಡ ಹೊಸ ಸೇರ್ಪಡೆ. ಹಲವು ಚಿತ್ರಗಳಲ್ಲಿ ಸಣ್ಣ ಪುಣ್ಣ ಪಾತ್ರ ಮಾಡಿ ಪ್ರತಿಭೆ ಪ್ರದರ್ಶನ ಮಾಡಿದ್ದ ಸೂರ್ಯಗೆ ಇದು ನಾಯಕನಾಗಿ ಚೊಚ್ಚಲ ಚಿತ್ರ.

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ರಾಜ್ ಕಿಶೋರ್ ಅವರ ಪುತ್ರಿ ಸಿಂಧು ಗೌಡ ನಿರ್ದೇಶನದ ಹಾಗೂ ಸಾನ್ವಿ ಪೆÇ್ರಡಕ್ಷನ್ಸ್ ಬ್ಯಾನರ್‍ನಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಾಣ ಮಾಡಿರುವ “ಆಪಲ್ ಕಟ್” ಚಿತ್ರದ ಟೀಸರ್‍ಗೆ ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ಧ್ವನಿ ನೀಡಿದ್ದಾರೆ. ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ.

ಹೊಸತಂಡದ ಹೊಸಪ್ರಯತ್ನಕ್ಕೆ ಬೆಂಬಲ ನೀಡಿದ್ದ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರಿಗೆ ಚಿತ್ರತಂಡ ಧನ್ಯವಾದ ಹೇಳಿದೆ.

ಚಿತ್ರದ ಕುರಿತು ಮಾಹಿತಿ ಹಂಚಿಕೊಂಡ ನಟ ಸೂರ್ಯಗೌಡ, ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕಿ ಸಿಂಧು ಗೌಡ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಇದು ಅವರ ನಿರ್ದೇಶನದ ಚೊಚ್ಚಲ ಚಿತ್ರ. ನಾಯಕಿ ಅಶ್ವಿನಿ ಪೆÇೀಲೆಪಲ್ಲಿ. ಅಪ್ಪಣ್ಣ, ಅಭಿಜಿತ್, ಮೀನಾಕ್ಷಿ, ಬಾಲ ರಾಜವಾಡಿ ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ ಎಂದರು.

ಎಲ್ಲ ಅಂದುಕೊಂಡಂತೆ ಆದರೆ ಡಿಸೆಂಬರ್ ತಿಂಗಳಲ್ಲಿ ಚಿತ್ರವನ್ನು ತೆರೆಗೆ ತರಲು ಉದ್ದೇಶಿಸಲಾಗಿದೆ. ಮಾನವಶಾಸ್ತ್ರ ವಿಭಾಗದ ಪ್ರೊಪೆಸರ್ ಅನ್ನು ಪೊಲೀಸರು ಯಾಕಾಗಿ ಬಳಸಿಕೊಳ್ಳುತ್ತಾರೆ ಎನ್ನುವುದು ಚಿತ್ರದ ತಿರುಳು, ಡೆಡ್ ಬಾಡಿ ಗಳನ್ನೇ ಇಟ್ಟುಕೊಂಡು ಚಿತ್ರೀಕರಣ ಮಾಡಿದ್ದೇವೆ.ಚಿತ್ರ ಎಲ್ಲಿಗೂ ಇಷ್ಟವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವೀರ್ ಸಮರ್ಥ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳನ್ನು ಯೋಗರಾಜ್ ಭಟ್, ಸತ್ಯಪ್ರಕಾಶ್ ಬರೆದಿದ್ದಾರೆ. ವಾಸುಕಿ ವೈಭವ್, ವಿಜಯಶ್ರೀ ಹಾಡಿದ್ದಾರೆ. ರಾಜೇಶ್ ಗೌಡ ಛಾಯಾಗ್ರಹಣ ಹಾಗೂ ಸುಚೇಂದ್ರ ಎನ್ ಮೂರ್ತಿ ಸಂಕಲನ “ಆಪಲ್ ಕಟ್” ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin